ಗಣೇಶ ಹಬ್ಬ ವಿಶೇಷ, ಪ್ರಯಾಣಿಕರಿಗೆ ಗುಡ್‌ ನ್ಯೂಸ್

Published : Sep 07, 2021, 03:36 PM ISTUpdated : Sep 07, 2021, 03:38 PM IST
ಗಣೇಶ ಹಬ್ಬ ವಿಶೇಷ,  ಪ್ರಯಾಣಿಕರಿಗೆ ಗುಡ್‌ ನ್ಯೂಸ್

ಸಾರಾಂಶ

* ರಾಜ್ಯದ ವಿವಿಧೆಡೆಗೆ ಹೆಚ್ಚುವರಿ ಕೆಎಸ್​ಆರ್​ಟಿಸಿ ಬಸ್‌ಗಳ ವ್ಯವಸ್ಥೆ * ಗಣೇಶ ಹಬ್ಬ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ * ಬೆಂಗಳೂರಿನಿಂದ ರಾಜ್ಯದ ವಿವಿಧೆಡೆಗೆ ಸೆ. 8, 9ರಂದು ಸಂಚರಿಸಲಿರುವ ಬಸ್

ಬೆಂಗಳೂರು, (ಸೆ.07): ಗಣೇಶ ಹಬ್ಬ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. 

ಹೌದು...ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ರಾಜ್ಯದ ವಿವಿಧೆಡೆಗೆ ಸೆಪ್ಟೆಂಬರ್ 8, 9ರಂದು ಹೆಚ್ಚುವರಿಯಾಗಿ  1,000  ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಬಿಡಲಾಗಿದೆ.

 ಜೊತೆಗೆ ಸೆಪ್ಟೆಂಬರ್ 12ರಂದು ಬೆಂಗಳೂರಿಗೆ ಆಗಮಿಸುವವರಿಗೆ ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಿಂದ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ: ಇಲ್ಲಿದೆ ಮಾರ್ಗಸೂಚಿ

* ಕೆಂಪೇಗೌಡ ಬಸ್‌ ನಿಲ್ದಾಣದಿಂದ (ಮೆಜೆಸ್ಟಿಕ್) ಧರ್ಮಸ್ಥಳ, ಶಿವಮೊಗ್ಗ, ಕುಕ್ಕೆ ಸುಬ್ರಹ್ಮಣ್ಯ, ಶೃಂಗೇರಿ, ಮಂಗಳೂರು, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್ ಸೇರಿ ಹಲವಡೆ ಹೆಚ್ಚುವರಿ ಬಸ್‌ಗಳು ಸಂಚರಿಸಲಿವೆ.

* ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಲನಗರ, ಮಡಿಕೇರಿ ಮಾರ್ಗದ ಕಡೆಗೆ ಹೆಚ್ಚುವರಿ ಬಸ್‌ಗಳು ಕಾರ್ಯಚರಣೆ ಮಾಡಲಿವೆ.

* ತಮಿಳುನಾಡು ಮತ್ತು ಆಂಧ್ರಪ್ರದೇಶ, ತೆಲಂಗಾಣ ಕಡೆಗೆ ಅಂದರೆ, ಮದುರೈ, ತಿರುಚಿ, ಚೆನ್ನೈ, ಕೊಯಮತತ್ಊರ್, ತಿರುಪತಿ, ವಿಜಯವಾಡ, ಹೈದರಾಬಾದ್ ಸೇರಿದಂತೆ ಮುಂತಾದ ಸ್ಥಳಗಳಿಗೆ ಹೋಗುವ ಬಸ್‌ಗಳು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಬಸ್ ಸಂಸ್ಥೆ ಬಸ್ ನಿಲ್ದಾಣದಿಂದ ಹೊರಡಲಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಉಳಿ ಪೆಟ್ಟು ಬಿದ್ದಾಗಲಷ್ಟೇ ಶಿಲೆಆಗುತ್ತದೆ ಕಲ್ಲು: ಡಿಕೆ ಹಿತನುಡಿ
ಬೆಂಗಳೂರು ನಗರದಲ್ಲಿ ಮತ್ತೆ 150 ಇಂಡಿಗೋ ವಿಮಾನಗಳ ಸಂಚಾರ ರದ್ದು