ಪ್ರತಿಭಟನೆಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ನೌಕರರ ಸಿದ್ಧತೆ: ಸರ್ಕಾರಕ್ಕೆ ಮತ್ತೊಂದು ತಲೆ ನೋವು ಶುರು..!

Published : Sep 06, 2023, 01:00 AM IST
ಪ್ರತಿಭಟನೆಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ನೌಕರರ ಸಿದ್ಧತೆ: ಸರ್ಕಾರಕ್ಕೆ ಮತ್ತೊಂದು ತಲೆ ನೋವು ಶುರು..!

ಸಾರಾಂಶ

ಬಿಎಂಟಿಸಿ ನೌಕರರಿಗೆ ಬೋನಸ್‌ ಕಾಯ್ದೆ 1965ರ ಪ್ರಕಾರ ನೀಡಬೇಕಾದ ಶೇ. 8.33ರಷ್ಟು ಬೋನಸ್‌ನ್ನು ಕೂಡಲೆ ಬಿಡುಗಡೆ ಮಾಡಬೇಕು, ಹಿರಿಯ ಅಧಿಕಾರಿಗಳಿಂದ ಆಗುತ್ತಿರುವ ಕಿರುಕುಳ ತಪ್ಪಿಸಬೇಕು, 2020ರ ಜನವರಿಯಿಂದ 2023ರ ಫೆಬ್ರವರಿ ಅವಧಿಯಲ್ಲಿ ವೇತನ ಹೆಚ್ಚಳದ ಬಾಕಿ ಮೊತ್ತ ಕೂಡಲೆ ಪಾವತಿಸುವಂತೆ ಆಗ್ರಹಿಸಿ ನೌಕರರು ಪ್ರತಿಭಟನೆ ನಡೆಸಲು ಚಿಂತನೆ ನಡೆಸಿದ್ದಾರೆ.

ಬೆಂಗಳೂರು(ಸೆ.06):  ಶಕ್ತಿ ಯೋಜನೆಯಿಂದ ಬಸ್‌, ಆಟೋ, ಕ್ಯಾಬ್‌ ಸೇರಿದಂತೆ ಇನ್ನಿತರ ಖಾಸಗಿ ಸಾರಿಗೆ ಉದ್ಯಮಕ್ಕಾಗಿರುವ ಸಮಸ್ಯೆಗೆ ಪರಿಹಾರ ನೀಡುವಂತೆ ಖಾಸಗಿ ಸಾರಿಗೆ ಸಂಘಟನೆಗಳು ಸೆ. 11ರಂದು ಬೆಂಗಳೂರಿನಲ್ಲಿ ಸಾರಿಗೆ ಬಂದ್‌ ನಡೆಸುತ್ತಿವೆ. ಅದರ ಬೆನ್ನಲ್ಲೇ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ನೌಕರರು ಪ್ರತಿಭಟನೆಗೆ ಸಿದ್ಧತೆ ನಡೆಸಿದ್ದು, ಸಾರಿಗೆ ಸಚಿವರಿಗೆ ಮತ್ತೊಂದು ತಲೆ ನೋವು ಶುರುವಾಗುವ ಲಕ್ಷಣಗಳಿವೆ.

ಬಿಎಂಟಿಸಿ ನೌಕರರಿಗೆ ಬೋನಸ್‌ ಕಾಯ್ದೆ 1965ರ ಪ್ರಕಾರ ನೀಡಬೇಕಾದ ಶೇ. 8.33ರಷ್ಟು ಬೋನಸ್‌ನ್ನು ಕೂಡಲೆ ಬಿಡುಗಡೆ ಮಾಡಬೇಕು, ಹಿರಿಯ ಅಧಿಕಾರಿಗಳಿಂದ ಆಗುತ್ತಿರುವ ಕಿರುಕುಳ ತಪ್ಪಿಸಬೇಕು, 2020ರ ಜನವರಿಯಿಂದ 2023ರ ಫೆಬ್ರವರಿ ಅವಧಿಯಲ್ಲಿ ವೇತನ ಹೆಚ್ಚಳದ ಬಾಕಿ ಮೊತ್ತ ಕೂಡಲೆ ಪಾವತಿಸುವಂತೆ ಆಗ್ರಹಿಸಿ ನೌಕರರು ಪ್ರತಿಭಟನೆ ನಡೆಸಲು ಚಿಂತನೆ ನಡೆಸಿದ್ದಾರೆ.

ಶಕ್ತಿ ಯೋಜನೆಯ ಬಸ್‌ಗಳಿಗೆ ಕಲ್ಲೆಸೆದ ಕಾಲೇಜು ವಿದ್ಯಾರ್ಥಿಗಳು: ಗಾಜುಗಳು ಪುಡಿ, ಪುಡಿ

ಇನ್ನು ಕಾರ್ಮಿಕ ಮುಖಂಡ ಅನಂತಸುಬ್ಬರಾವ್‌ ನೇತೃತ್ವದ ಕೆಎಸ್ಸಾರ್ಟಿಸಿ ಸ್ಟಾಫ್‌ ಆ್ಯಂಡ್‌ ವರ್ಕರ್ಸ್‌ ಯೂನಿಯನ್‌ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವ ಬಗ್ಗೆ ಚರ್ಚಿಸಲಾಗುತ್ತಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿದಂತೆ ಎಲ್ಲ ನಾಲ್ಕು ನಿಗಮಗಳಿಗೆ ಮನವಿಯನ್ನೂ ಸಲ್ಲಿಸಲಾಗಿದೆ. ಒಂದು ವೇಳೆ ಬೇಡಿಕೆ ಈಡೇರದಿದ್ದರೆ ಪ್ರತಿಭಟನೆ ನಡೆಸುವುದಾಗಿಯೂ ತಿಳಿಸಲಾಗಿದೆ. ಹೀಗಾಗಿ ಸಾರಿಗೆ ಸಚಿವರು ಖಾಸಗಿ ವಾಹನ ಸಂಘಗಳ ಪ್ರತಿಭಟನೆ ನಂತರ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಪ್ರತಿಭಟನೆ ಎದುರಿಸಬೇಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಗ್ರೇಟರ್‌ ಬೆಂಗಳೂರು.. ವೈಜ್ಞಾನಿಕವಾಗಿ ಕಸ ಸಂಸ್ಕರಣೆ, ಆತಂಕ ಬೇಡ: ಡಿ.ಕೆ.ಶಿವಕುಮಾರ್‌
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ ಪ್ರಕರಣ: ಎಸ್ಐಟಿ ತನಿಖೆಗೆ ಸಿ.ಟಿ.ರವಿ ಆಗ್ರಹ