ಬ್ರೇಕ್‌ ಫೇಲ್‌ ಆಗಿ ಕಂದಕಕ್ಕೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್‌: 35 ಪ್ರಯಾಣಿಕರು ಜಸ್ಟ್‌ ಸೇಫ್‌

Published : Sep 09, 2023, 12:35 PM ISTUpdated : Sep 09, 2023, 12:47 PM IST
ಬ್ರೇಕ್‌ ಫೇಲ್‌ ಆಗಿ ಕಂದಕಕ್ಕೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್‌: 35 ಪ್ರಯಾಣಿಕರು ಜಸ್ಟ್‌ ಸೇಫ್‌

ಸಾರಾಂಶ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್‌ ಹಾಸನ ಜಿಲ್ಲೆಯಲ್ಲಿ ಕಂದಕಕ್ಕೆ ಉರುಳಿದ್ದು, ಅದೃಷ್ಟವಶಾತ್‌ ಎಲ್ಲ  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಹಾಸನ (ಸೆ.09): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್‌ ಹಾಸನ ಜಿಲ್ಲೆಯಲ್ಲಿ ಕಂದಕಕ್ಕೆ ಉರುಳಿದ್ದು, ಅದೃಷ್ಟವಶಾತ್‌ ಎಲ್ಲ  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಹೌದು, ಕಂದಕಕ್ಕೆ ಉರುಳಿದ ಸಾರಿಗೆ ಬಸ್ ಉರುಳಿದೆ. ಅದೃಷ್ಟವಶಾತ್ 35 ಪ್ರಯಾಣಿಕರು ಸೇಫ್ ಆಗಿದ್ದಾರೆ. ಬ್ರೇಕ್ ಫೇಲ್ ಚಾಲಕನ ನಿಯಂತ್ರಣಕ್ಕೆ ಸಿಗದೇ ಕಂದಕಕ್ಕೆ ಉರುಳಿದೆ. ಈ ಬಸ್ ನಲ್ಲಿ 35 ಮಂದಿ ಪ್ರಯಾಣ ಮಾಡುತ್ತಿದ್ದರು. ಬಸ್‌ ಕಂದಕಕ್ಕೆ ಉರುಳಿ ಬೀಳುತ್ತಿದ್ದಂತೆಯೇ 4 ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಉಳಿದಂತೆ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ. ಒಟ್ಟಾರೆ ಯಾವುದೇ ಪ್ರಯಾಣಿಕರಿಗೆ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಸಚಿವರೇ ನಿಮಗೆ 10 ಕೋಟಿ ರೂ. ಕೋಡ್ತೀವಿ, ನೇಣು ಹಾಕಿಕೊಳ್ಳಿ: ಮಾಜಿ ಸಚಿವ ಬೆಳ್ಳುಬ್ಬಿ ಸವಾಲು

ಈ ಘಟನೆಯು ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೊಂಗಡಹಳ್ಳ ಸಮೀಪದ ಮಂಕನಳ್ಳಿ ಬಳಿ ಬೆಳಗ್ಗೆ ನಡೆದಿದೆ. ರಾಜ್ಯ ಸಾರಿಗೆ ಇಲಾಖೆಯಿಂದ ದು:ಸ್ಥಿತಿಯಲ್ಲಿರುವ ಬಸ್ ಓಡಾಡಿಸುತ್ತಿರುವುದೇ ದುರಂತಕ್ಕೆ ಕಾರಣ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ. ಹೀಗೆ ದುರಸ್ತಿಗೊಂಡ ಬಸ್‌ಗಳನ್ನು ಗುಜರಿಯಲ್ಲಿ ನಿಲ್ಲಿಸಿ, ಸುಸ್ಥಿತಿಯಲ್ಲಿರುವ ಬಸ್‌ಗಳನ್ನು ನಮ್ಮ ರೂಟ್‌ಗಳಿಗೆ ನೀಡುವಂತೆ ಒತ್ತಾಯ ಮಾಡಿದ್ದಾರೆ. ಇನ್ನು ಈ ಘಟನೆಯು ಯಸಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದಾರೆ. ಇನ್ನು ಕ್ರೇನ್‌ ಮೂಲಕ ಬಸ್‌ ಅನ್ನು ಮೇಲೆತ್ತುವ ಕಾರ್ಯ ನಡೆಯುತ್ತಿದೆ.

ಜೆಡಿಎಸ್‌ಗೆ ಮಂಡ್ಯ ಬಿಟ್ಟು ಕೊಡಲು ಬಿಜೆಪಿ ಒಪ್ಪಿಗೆ, ಸುಮಲತಾ ಕಥೆಯೇನು?

ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಹೊತ್ತಿ ಉರಿದ ಕಾರು: ಮತ್ತೊಂದೆಡೆ ಬೆಂಗಳೂರು ಮೈಸುರು ದಶಪಥ ಗೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಉರಿದು ಸುಟ್ಟು ಹೋಗಿದೆ. ರಸ್ತೆ ಮಧ್ಯದಲ್ಲಿಯೇ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಈ ಬಗ್ಗೆ ಎಚ್ಚೆತ್ತ ಕಾರು ಚಾಲಕ ಕೂಡಲೇ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿ ಕಾರಿನಿಂದ ಇಳಿದಿದ್ದಾನೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಬಳಿ ಗಣಂಗೂರಿನಲ್ಲಿ ಘಟನೆ ನಡೆದಿದೆ. ಕಾರು ಚಲಿಸುವಾಗ ಇದ್ದಕ್ಕಿದ್ದಂತೆ ಬೆಂಕಿ ಕಾಣಿಕೊಂಡ ಕೂಡಲೇ ಕಾರಿನಿಂದ ಚಾಲಕ ಆಚೆ ಬರುತ್ತಿದ್ದಂತೆ ತೀವ್ರಗೊಂಡಿದೆ. ಬಳಿಕ ಕಾರು ಹೊತ್ತಿ ಉರಿದಿದ್ದು, ಕೆಲ ಕಾಲ ಎಕ್ಸ್‌ಪ್ರೆಸ್‌ ವೇನಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಇನ್ನು ಆತಂಕದ ಸ್ಥಿತಿಯೂ ಕಂಡುಬಂದಿತ್ತು. ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಟ್ರಾಫಿಕ್‌ ನಿಯಂತ್ರಣಕ್ಕೆ ತಂದಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಮುಂದಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ನೋಟೀಸ್: ವರುಣಾ ಕ್ಷೇತ್ರದ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ
ಉಡುಪಿ: 2 ಗಂಟೆ ಕಾದರೂ ಬರಲಿಲ್ಲ 108 ಆಂಬುಲೆನ್ಸ್‌, ಗೂಡ್ಸ್ ಟೆಂಪೋದಲ್ಲಿ ಸಾಗಿಸಿ ವೃದ್ಧನ ರಕ್ಷಣೆ!