ಕೊರೋನಾ ಭೀತಿ ನಡುವೆ ಮಹಾರಾಷ್ಟ್ರಕ್ಕೆ KSRTC ಬಸ್‌ ಸೇವೆ

By Kannadaprabha News  |  First Published Sep 20, 2020, 8:19 AM IST

ಬೆಂಗಳೂರು, ದಾವಣಗೆರೆ, ಮಂಗಳೂರು ಸೇರಿ ಇನ್ನಿತರ ಕಡೆಗಳಿಂದ ಮಹಾರಾಷ್ಟ್ರದ ಪ್ರಮುಖ ನಗರಗಳಿಗೆ ಬಸ್‌ ಸಂಚಾರ| ಬಸ್‌ ಪ್ರಯಾಣ ಮಾಡುವವರು ಕೆಎಸ್‌ಆರ್‌ಟಿಸಿ ವೆಬ್‌ಸೈಟ್‌ ಅಥವಾ ನಿಗಮದ ಪ್ರಾಂಚೈಸಿಗಳಲ್ಲಿ ಮುಂಗಡ ಟಿಕೆಟ್‌ ಕಾಯ್ದಿರಿಸುವುದು ಕಡ್ಡಾಯ|  


ಬೆಂಗಳೂರು(ಸೆ.20): ಕೊರೋನಾ ಸೋಂಕು ಹರಡುವ ಭೀತಿಯಿಂದ ಸ್ಥಗಿತಗೊಂಡಿದ್ದ ಕೆಎಸ್‌ಆರ್‌ಟಿಸಿ ಬಸ್‌ ಸೇವೆ ಹಂತ ಹಂತವಾಗಿ ಪುನರಾರಂಭವಾಗುತ್ತಿದ್ದು, ಸೆ.22ರಿಂದ ಬೆಂಗಳೂರು ಸೇರಿ ರಾಜ್ಯದ ವಿವಿಧ ನಗರಗಳಿಂದ ಮಹಾರಾಷ್ಟ್ರಕ್ಕೆ ಬಸ್‌ ಸೇವೆಗೆ ಮರು ಚಾಲನೆ ನೀಡಲಾಗುತ್ತಿದೆ.

ಬೆಂಗಳೂರು, ದಾವಣಗೆರೆ, ಮಂಗಳೂರು ಸೇರಿ ಇನ್ನಿತರ ಕಡೆಗಳಿಂದ ಮಹಾರಾಷ್ಟ್ರದ ಪ್ರಮುಖ ನಗರಗಳಿಗೆ ಬಸ್‌ಗಳು ಸಂಚರಿಸಲಿವೆ. ಬಸ್‌ ಪ್ರಯಾಣ ಮಾಡುವವರು ಕೆಎಸ್‌ಆರ್‌ಟಿಸಿ ವೆಬ್‌ಸೈಟ್‌ ಅಥವಾ ನಿಗಮದ ಪ್ರಾಂಚೈಸಿಗಳಲ್ಲಿ ಮುಂಗಡ ಟಿಕೆಟ್‌ ಕಾಯ್ದಿರಿಸುವುದು ಕಡ್ಡಾಯವಾಗಿದೆ. 

Tap to resize

Latest Videos

ಕೊರೋನಾ ಕಾಟ: ಬಸ್‌ನಲ್ಲಿ ಕೋವಿಡ್‌ ನಿಯಮ ಉಲ್ಲಂಘಿಸಿದ್ರೆ ಸಸ್ಪೆಂಡ್‌..!

ಜೊತೆಗೆ, ಕೊರೋನಾ ತಡೆಗಾಗಿ ಪ್ರತಿಯೊಬ್ಬರೂ ಮಾಸ್ಕ್‌ ಧರಿಸಬೇಕಿದೆ ಹಾಗೂ ಕರ್ನಾಟಕ ಮತ್ತು ಮಹಾರಾಷ್ಟ್ರ ಆರೋಗ್ಯ ಇಲಾಖೆ ಪ್ರಕಟಿಸಿರುವ ಮಾರ್ಗಸೂಚಿಯನ್ನು ಪಾಲಿಸಬೇಕಿದೆ.
 

click me!