ಕರ್ನಾಟಕದಿಂದ ಕೇರಳಕ್ಕೆ ಬಸ್‌ ಸೇವೆ ಪುನಾರಂಭ

Kannadaprabha News   | Asianet News
Published : Jul 13, 2021, 11:06 AM IST
ಕರ್ನಾಟಕದಿಂದ ಕೇರಳಕ್ಕೆ ಬಸ್‌ ಸೇವೆ ಪುನಾರಂಭ

ಸಾರಾಂಶ

 ಕೆಎಸ್‌ಆರ್‌ಟಿಸಿಯಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಕೇರಳಕ್ಕೂ ಸೇವೆ ಆರಂಭ ಲಾಕ್‌ಡೌನ್ ಹಿನ್ನೆಲೆ ಸ್ಥಗಿತವಾಗಿದ್ದ ಕರ್ನಾಟಕ-ಕೇರಳ ಬಸ್ ಸೇವೆ ಪ್ರಯಾಣಿಕರ ದಟ್ಟಣೆ ಹಾಗೂ ಅವಶ್ಯಕತೆಗೆ ಅನುಗುಣವಾಗಿ ಸಂಚಾರ

ಬೆಂಗಳೂರು (ಜು.13): ಲಾಕ್‌ಡೌನ್‌ ಸಡಿಲಿಕೆ ಬಳಿಕ ಆಂಧ್ರಪ್ರದೇಶ, ತೆಲಂಗಾಣ, ಗೋವಾ ರಾಜ್ಯಗಳಿಗೆ ಅಂತರ್‌ ರಾಜ್ಯ ಬಸ್‌ ಸೇವೆ ಪುನರಾರಂಭಿಸಿದ್ದ ಕೆಎಸ್‌ಆರ್‌ಟಿಸಿ ಇದೀಗ ಪ್ರಯಾಣಿಕರ ಅನುಕೂಲಕ್ಕಾಗಿ ಸೋಮವಾರದಿಂದ ರಾಜ್ಯದ ವಿವಿಧ ಸ್ಥಳಗಳಿಂದ ಕೇರಳಕ್ಕೆ ಬಸ್‌ ಸೇವೆ ಪುನರಾರಂಭಿಸಿದೆ. 

ಇಂದಿನಿಂದ 4 ಸಾವಿರ KSRTC ಬಸ್‌ಗಳು ರಸ್ತೆಗೆ, ಪ್ರಯಾಣಿಕರಿಗೆ ಷರತ್ತುಗಳು ಅನ್ವಯ..!

ಪ್ರಯಾಣಿಕರ ದಟ್ಟಣೆ ಹಾಗೂ ಅವಶ್ಯಕತೆಗೆ ಅನುಗುಣವಾಗಿ ಬೆಂಗಳೂರು, ಮೈಸೂರು, ಪುತ್ತೂರು ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಕೇರಳದ ವಿವಿಧ ಸ್ಥಳಗಳಿಗೆ ಬಸ್‌ ಕಾರ್ಯಾಚರಣೆ ಮಾಡಿದೆ. ಬಸ್ಸುಗಳಲ್ಲಿ ಕೇರಳದಿಂದ ಕರ್ನಾಟಕಕ್ಕೆ ಪ್ರಯಾಣಿಸುವ ಪ್ರಯಾಣಿಕರಿಗೆ 72 ಗಂಟೆಯೊಳಗೆ ಮಾಡಿಸಿರುವ ಕೋವಿಡ್‌ ನೆಗೆಟಿವ್‌ ಪರೀಕ್ಷಾ ವರದಿ ಅಥವಾ ಕನಿಷ್ಠ ಒಂದು ಡೋಸ್‌ ಕೊರೋನಾ ಲಸಿಕೆ ಪಡೆದಿರುವ ಪ್ರಮಾಣಪತ್ರ ಕಡ್ಡಾಯಗೊಳಿಸಲಾಗಿದೆ.

ಈಶಾನ್ಯ ಸಾರಿಗೆಯಿಂದ ಈಗ 'ಮಹಿಳಾ ಸ್ನೇಹಿ' ಬಸ್!

ರಾಜ್ಯ ಸರ್ಕಾರದ ಅನ್‌ಲಾಕ್‌ ಮಾರ್ಗಸೂಚಿ ಅನ್ವಯ ನಿಗಮದ

ಇನ್ನು ವಿದ್ಯಾರ್ಥಿಗಳು, ಶಿಕ್ಷಣ, ವ್ಯವಹಾರ ಮತ್ತು ಇತರೆ ಕಾರಣಗಳಿಗಾಗಿ ಕರ್ನಾಟಕಕ್ಕೆ ದಿನನಿತ್ಯ ಪ್ರಯಾಣಿಸುವವರು 15 ದಿನಗಳಿಗೊಮ್ಮೆ ಆರ್‌ಟಿಪಿಸಿಆರ್‌ ಪರೀಕ್ಷೆ ಮಾಡಿಸಿ, ನೆಗೆಟಿವ್‌ ವರದಿ ಹೊಂದಿರಬೇಕು. ಅಂತೆಯೆ ಬಸ್ಸಿನಲ್ಲಿ ಪ್ರಯಾಣಿಸುವಾಗ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಇದರೊಂದಿಗೆ ಕಡ್ಡಾಯವಾಗಿ ಕೊರೋನಾ ನಿಯಮಾವಳಿ ಪಾಲಿಸಬೇಕು ಎಂದು ಕೆಎಸ್‌ಆರ್‌ಟಿಸಿ ಪ್ರಯಾಣಿಕರಿಗೆ ಸೂಚಿಸಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ