KSRTC ಬಸ್‌ ಚಾಲಕರ ಮೊಬೈಲ್‌ ನಿಷೇಧ ಆದೇಶ ರದ್ದು

Kannadaprabha News   | Asianet News
Published : Feb 15, 2020, 08:48 AM ISTUpdated : Feb 15, 2020, 09:55 AM IST
KSRTC ಬಸ್‌ ಚಾಲಕರ ಮೊಬೈಲ್‌ ನಿಷೇಧ ಆದೇಶ ರದ್ದು

ಸಾರಾಂಶ

 ಕೆಎಸ್‌ಆರ್‌ಟಿಸಿ ಬಸ್‌ ಚಾಲಕರು ಕರ್ತವ್ಯದ ವೇಳೆ ಮೊಬೈಲ್‌ ಇಟ್ಟುಕೊಳ್ಳುವುದನ್ನು ಸರ್ಕಾರ ನಿಷೇಧಿಸಿತ್ತು. ಇದೀಗ ಆ ಆದೇಶವನ್ನು ಹಿಂಪಡೆದಿದೆ. ಆದರೆ ಕಠಿಣ ಸೂಚನೆಯನ್ನು ನೀಡಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ..

ಬೆಂಗಳೂರು(ಫೆ.15): ಕೆಎಸ್‌ಆರ್‌ಟಿಸಿ ಬಸ್‌ ಚಾಲಕರು ಕರ್ತವ್ಯದ ವೇಳೆ ಮೊಬೈಲ್‌ ಇಟ್ಟುಕೊಳ್ಳುವುದನ್ನು ನಿಷೇಧಿಸಿದ್ದ ಆದೇಶ ಹಿಂಪಡೆಯಲಾಗಿದ್ದು, ಅಪಘಾತದಂತಹ ತುರ್ತು ಸಂದರ್ಭದಲ್ಲಿ ಮಾತ್ರ ಮಾಹಿತಿ ನೀಡಲು ಚಾಲಕರು ಮೊಬೈಲ್‌ ಬಳಸಬಹುದು ಎಂದು ತಿಳಿಸಿದೆ.

ರಾಜ್ಯ ಜನರಿಗೆ ಮತ್ತೊಂದು ಶಾಕ್, ಬಸ್ ಪ್ರಯಾಣ ದರ ಏರಿಕೆ!

ಕಳೆದ ಕೆಲ ತಿಂಗಳ ಹಿಂದಷ್ಟೇ ಮುಂಗಡ ಟಿಕೆಟ್‌ ಕಾಯ್ದಿರಿಸುವಿಕೆಯಿಲ್ಲದ ಕೆಎಸ್‌ಆರ್‌ಟಿಸಿ ಬಸ್‌ ಚಾಲಕರು ಕರ್ತವ್ಯದ ವೇಳೆ ಮೊಬೈಲ್‌ ಇಟ್ಟುಕೊಳ್ಳುವುದನ್ನು ಸರ್ಕಾರ ನಿಷೇಧಿಸಿತ್ತು. ಅದರಿಂದ ಅಪಘಾತ, ಗಲಭೆ ಸೇರಿ ಇತರ ತುರ್ತು ಪರಿಸ್ಥಿತಿ ಸಂದರ್ಭಗಳಲ್ಲಿ ಕೇಂದ್ರ ಕಚೇರಿ ಅಥವಾ ಸಂಬಂಧಪಟ್ಟಅಧಿಕಾರಿಗಳಿಗೆ ಮಾಹಿತಿ ನೀಡಲು ಸಾಧ್ಯವಾಗುತ್ತಿಲ್ಲ ಎಂಬ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಮೊಬೈಲ್‌ ನಿಷೇಧವನ್ನು ಹಿಂಪಡೆಯಲಾಗಿದೆ. ಆದರೆ, ಕರ್ತವ್ಯದ ವೇಳೆ ಬಳಕೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ಆದೇಶದಲ್ಲಿ ತಿಳಿಸಿದ್ದಾರೆ.

ಅಪಘಾತಕ್ಕೆ ಪರಿಹಾರದ ನೀಡದ ಕೆಎಸ್‌ಆರ್‌ಟಿಸಿ ಬಸ್‌ಗಳ ಜಪ್ತಿ

ಚಾಲನೆ ಮಾಡುವಾಗ ಮೊಬೈಲ್‌ ಬಳಸಿದರೆ ಕೆಂಪು ಗುರುತಿನ ಪ್ರಕರಣ ದಾಖಲಿಸಲಾಗುವುದು. ಹೀಗೆ ಪ್ರಕರಣ ದಾಖಲಾಗುವ ಚಾಲಕರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು. ಅಲ್ಲದೆ, ಅಂತಹ ಸಿಬ್ಬಂದಿಯನ್ನು ಕಡ್ಡಾಯವಾಗಿ ಘಟಕ ಬದಲಾವಣೆ ಶಿಕ್ಷೆ ನೀಡಲಾಗುವುದು ಎಂದು ಎಚ್ಚರಿಸಲಾಗಿದೆ. ಜತೆಗೆ ತನಿಖಾ ಸಿಬ್ಬಂದಿಗಳು ತನಿಖೆ ಸಮಯದಲ್ಲಿ ಚಾಲನಾ ಸಿಬ್ಬಂದಿ ಮೊಬೈಲ್‌ ಬಳಸುತ್ತಿರುವುದು ಗಮನಕ್ಕೆ ಬಂದರೆ ಮಾತ್ರ ಪ್ರಕರಣ ದಾಖಲಿಸಬೇಕು ಎಂದು ಎಚ್ಚರಿಕೆ ನೀಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕೊಡಗಿನ ಇತಿಹಾಸದಲ್ಲೇ ಮೊದಲ ಬಾರಿಗೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್! ಏನಿದು ಪ್ರಕರಣ?
ಡೆಲಿವರಿ ಬಾಯ್ಸ್‌ಗೆ ಲಿಫ್ಟ್ ಬಳಸಬೇಡಿ ಎಂದ ಮೇಘನಾ ಫುಡ್ಸ್; ಪೋಸ್ಟರ್ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ