
ಬೆಂಗಳೂರು,[ಏ.15]: ಇದೇ ಏಪ್ರಿಲ್ 18 ರಂದು ದಕ್ಷಿಣ ಕರ್ನಾಟಕದ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯುವುದರಿಂದ ಕೆಎಸ್ಆರ್ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ.
ಚುನಾವಣೆಯ ಹಿಂದಿನ ಎರಡು ದಿನ ಹಾಗೂ ಚುನಾವಣೆಯ ದಿನ ಅಂದ್ರೆ ಏಪ್ರಿಲ್ 16, 17, 18 ರಂದು ಕೆಎಸ್ಆರ್ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ವೋಟ್ ಮಾಡಲು ಹೋಗುವವರಿಗೆ ಶುಭ ಸುದ್ದಿ, ಉತ್ತರ, ದಕ್ಷಿಣ ಕರ್ನಾಟಕಕ್ಕೆ ಒಟ್ಟು 3 ವಿಶೇಷ ರೈಲು
ಚುನಾವಣೆ ಕಾರ್ಯಕ್ಕೆ ಹಾಗೂ ಪೊಲೀಸ್ ಇಲಾಖೆಗೆ ಮತ್ತು ಚುನಾವಣೆ ಆಯೋಗಕ್ಕೆ ಕೆಎಸ್ಆರ್ಟಿಸಿ 3314 ಬಸ್ಗಳನ್ನ ಆಯೋಜನೆ ಮಾಡಲಾಗಿದೆ. ಹೀಗಾಗಿ ರಾಜ್ಯದ ಪ್ರಯಾಣಿಕರು ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಹಿನ್ನಲೆಯಲ್ಲಿ ಸಾರ್ವಜನಿಕರು ಎಲ್ಲಿಗಾದರೂ ತೆರಳಬೇಕಿದ್ರೆ ಬಸ್ ಗಾಗಿ ಕಾಯುವುದನ್ನು ಬಿಟ್ಟು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವುದು ಸೂಕ್ತ.
ರಾಜ್ಯದಲ್ಲಿ ಮೊದಲ ಹಂತ ಮತದಾನ ಏ.18ರಂದು ನಡೆದರೆ, ಏ.23ರಂದು 2ನೇ ಹಂತದ ಮತದಾನ ನಡೆಯಲಿದೆ. ಇನ್ನು ಮೇ 23ಕ್ಕೆ ಮತದಾನ ಎಣಿಕೆ ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ