ನಿಮ್ಮ ತಂದೆ ಅನುಭವಿಸಿದ ನೋವು ನಿಮಗೆ ಅರಿವಿದೆ: ಬೆಂಬಲ ಕೋರಿ ನಟ ಯಶ್‌ಗೆ ಸಾರಿಗೆ ನೌಕರರ ಮನವಿ

Kannadaprabha News   | Asianet News
Published : Apr 15, 2021, 09:59 AM IST
ನಿಮ್ಮ ತಂದೆ ಅನುಭವಿಸಿದ ನೋವು ನಿಮಗೆ ಅರಿವಿದೆ: ಬೆಂಬಲ ಕೋರಿ ನಟ ಯಶ್‌ಗೆ ಸಾರಿಗೆ ನೌಕರರ ಮನವಿ

ಸಾರಾಂಶ

ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಹಲವು ಬಾರಿ ಮನವಿ| ಸರ್ಕಾರ ಇದಕ್ಕೆ ಸ್ಪಂದಿಸದ ಪರಿಣಾಮ ಅನಿರ್ದಿಷ್ಟಾವದಿ ಮುಷ್ಕರಕ್ಕೆ ಕರೆ| ಚುನಾವಣಾ ಪ್ರಚಾರದಲ್ಲಿ ನಿರತರಾಗಿರುವ ಸರ್ಕಾರ ಇತ್ತ ಗಮನ ಹರಿಸದೆ ಹಠಮಾರಿ ಧೋರಣೆ ಅನುಸರಿಸುತ್ತಿದೆ| ಹೋರಾಟಕ್ಕೆ ಬೆಂಬಲ ನೀಡುವಂತೆ ನೌಕರರಿಂದ ಯಶ್‌ಗೆ ಮನವಿ| 

ಬೆಂಗಳೂರು(ಏ.15):  ಕಳೆದ ಒಂದು ವಾರದಿಂದ ಮುಷ್ಕರ ನಡೆಸುತ್ತಿರುವ ರಾಜ್ಯ ರಸ್ತೆ ಸಾರಿಗೆ ನೌಕರರು, ತಮ್ಮ ಹೋರಾಟ ಬೆಂಬಲಿಸುವಂತೆ ಕೋರಿ ರಾಕಿಂಗ್‌ ಸ್ಟಾರ್‌ ಯಶ್‌ ಅವರಿಗೆ ಮನವಿ ಮಾಡಿದೆ.

ಸಾರಿಗೆ ಇಲಾಖೆಯ ಚಾಲಕರಾಗಿ ಸ್ವಯಂ ನಿವೃತ್ತಿ ಹೊಂದಿರುವ ತಮ್ಮ ತಂದೆ ಅನುಭವಿಸಿರುವ ನೋವು ನಿಮಗೆ ಅರಿವಿರಲಿದೆ. ಸಾರಿಗೆ ನೌಕರರಿಗೆ ಆಗುತ್ತಿರುವ ತಾರತಮ್ಯ, ದೌರ್ಜನ್ಯ, ದಬ್ಬಾಳಿಕೆಗಳಿಂದ ಬೇಸತ್ತು ಕುಟುಂಬ ಸಮೇತರಾಗಿ ಬೀದಿಗಿಳಿದಿದ್ದೇವೆ. ಕಾನೂನು ಚೌಕಟ್ಟಿನಲ್ಲಿ ಮುಷ್ಕರಕ್ಕೆ ಮುಂದಾಗಿದ್ದು, ಸರ್ಕಾರ ಹಠಮಾರಿ ಧೋರಣೆಯಿಂದ ದುಡಿಯುವ ಕೈಗಳನ್ನು ಭಿಕ್ಷೆ ಬೇಡುವಂತಾಗಿದೆ. ಇಂತಹ ಸಂಕಷ್ಟದಲ್ಲಿ ತಮ್ಮ ಬೆಂಬಲಕ್ಕೆ ನೀವು ಕೈ ಜೋಡಿಸಿದಲ್ಲಿ ಹೋರಾಟಕ್ಕೆ ಧನಾತ್ಮಕ ಪರಿಣಾಮ ಬೀರಬಹುದು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ನಿಲ್ಲದ ಸಾರಿಗೆ ಮುಷ್ಕರ: ಮತ್ತೆ 121 ನೌಕರರ ಅಮಾನತು

ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದ್ದೇವೆ. ಸರ್ಕಾರ ಇದಕ್ಕೆ ಸ್ಪಂದಿಸದ ಪರಿಣಾಮ ಅನಿರ್ದಿಷ್ಟಾವದಿ ಮುಷ್ಕರಕ್ಕೆ ಕರೆ ನೀಡಿದ್ದೇವೆ. ಚುನಾವಣಾ ಪ್ರಚಾರದಲ್ಲಿ ನಿರತರಾಗಿರುವ ಸರ್ಕಾರ ಇತ್ತ ಗಮನ ಹರಿಸದೆ ಹಠಮಾರಿ ಧೋರಣೆ ಅನುಸರಿಸುತ್ತಿದೆ. ಪರಿಣಾಮ ಹೋರಾಟ ತೀವ್ರ ಸ್ವರೂಪಕ್ಕೆ ತಿರುಗುತ್ತಿದೆ. ಹಾಗಾಗಿ ಹೋರಾಟಕ್ಕೆ ಬೆಂಬಲ ನೀಡುವಂತೆ ನೌಕರರು ಯಶ್‌ ಅವರಿಗೆ ಮನವಿ ಮಾಡಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

'ನಮ್ಮ ವಯಸ್ಸು ಮೀರುತ್ತಿದೆ, ಬೇಗ ಜಾಬ್ ಕರೆಯಲು ಹೇಳಿ ಸರ್' ಪೊಲೀಸ್ ಕಮಿಷನರ್ ಎದುರು ಗಳಗಳನೇ ಅತ್ತ ಕೊಪ್ಪಳ ಯುವತಿ
ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ