ಸಾರಿಗೆ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ವೇತನ ಏರಿಕೆ

Kannadaprabha News   | Asianet News
Published : Apr 03, 2021, 10:14 AM ISTUpdated : Apr 03, 2021, 10:47 AM IST
ಸಾರಿಗೆ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ವೇತನ ಏರಿಕೆ

ಸಾರಾಂಶ

ಸಾರಿಗೆ ನೌಕರರಿಗೆ ಸಚಿವ ಲಕ್ಷ್ಮಣ್ ಸವದಿ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.. ಶೀಘ್ರದಲ್ಲೇ ವೇತನ ಏರಿಕೆ ನಿರ್ಧಾರ ಪ್ರಕಟಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ

 ಬೆಂಗಳೂರು (ಏ.03):  ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಹಿತ ಕಾಯಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ವೇತನ ಹೆಚ್ಚಳದ ಬಗ್ಗೆ ಸೋಮವಾರ ನಿರ್ಧಾರ ಪ್ರಕಟಿಸುವುದಾಗಿ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಕೆಎಸ್‌ಆರ್‌ಟಿಸಿ ನೌಕರರ ತರಬೇತಿ ಕೇಂದ್ರದ ಆವರಣದಲ್ಲಿ ಶುಕ್ರವಾರ ‘ಕೆಎಸ್‌ಆರ್‌ಟಿಸಿ, ವಾಯವ್ಯ, ಈಶಾನ್ಯ, ಬಿಎಂಟಿಸಿ ನಿಗಮಗಳ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ’ ಉದ್ಘಾಟಿಸಿ ಮಾತನಾಡಿದ ಅವರು, ವೇತನ ಹೆಚ್ಚಳ ಸಂಬಂಧ ಸಾರಿಗೆ ನೌಕರರ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಜೊತೆಗೂ ಸಮಾಲೋಚಿಸಿದ್ದೇನೆ. ಸೋಮವಾರ ಹಣಕಾಸು ಇಲಾಖೆ ಹಾಗೂ ಮುಖ್ಯಮಂತ್ರಿಗಳೊಂದಿಗೆ ಮತ್ತೊಮ್ಮೆ ಚರ್ಚಿಸಿ ನಿರ್ಧಾರ ತಿಳಿಸುತ್ತೇನೆ ಎಂದರು.

ಸಾರಿಗೆ ನೌಕರರ ಸಂಘಟನೆಗಳಿಂದ 2.5 ಕೋಟಿ ವಸೂಲಿಗೆ ದಾವೆ ...

ಸಾರಿಗೆ ನೌಕರರು ಕಪ್ಪು ಪಟ್ಟಿಧರಿಸಿ ಕರ್ತವ್ಯ ನಿರ್ವಹಿಸುತ್ತಿರುವುದಕ್ಕೆ ತಮ್ಮ ವಿರೋಧವಿಲ್ಲ. ಬೇಡಿಕೆಗಳು ಸರಿಯಿವೆ. ಆದರೆ, ಕೇಳುತ್ತಿರುವ ಸಮಯ ಸರಿಯಿಲ್ಲ. ಮಗು ಅತ್ತಾಗ ತಾಯಿ ಹಾಲು ಕುಡಿಸುತ್ತಾಳೆ. ಹಾಲು ಕುಡಿದ ಬಳಿಕ ತಾಯಿಯ ಎದೆಗೆ ಒದೆಯಬಾರದು. ಸಾರಿಗೆ ನೌಕರರ ಕಷ್ಟಕಾರ್ಪಣ್ಯ ನನಗೂ ಗೊತ್ತಿದೆ. ಒಂಬತ್ತು ಬೇಡಿಕೆಗಳ ಪೈಕಿ ಈಗಾಗಲೇ ಎಂಟು ಬೇಡಿಕೆ ಈಡೇರಿಸಲಾಗಿದೆ. ಈ ಬೇಡಿಕೆಗಳಲ್ಲಿ ಸಣ್ಣಪುಟ್ಟಬದಲಾವಣೆ ಅಗತ್ಯವಿದ್ದರೆ ಬದಲಾವಣೆ ಮಾಡಲು ಸಿದ್ಧವಿದ್ದೇವೆ. ಕೊರೋನಾದಂತಹ ಸಂಕಷ್ಟದ ಸಮಯದಲ್ಲಿ ವೇತನ ಹೆಚ್ಚಳ ವಿಚಾರದಲ್ಲಿ ಹೂವು ನೀಡಲು ಸಾಧ್ಯವಾಗದಿರಬಹುದು. ಆದರೆ, ಹೂವಿನ ಪಕಳೆ ನೀಡುತ್ತೇವೆ. ಈ ಸಂಬಂಧ ಮುಖ್ಯಮಂತ್ರಿಗಳ ಮನವೊಲಿಸಿ ವೇತನ ಹೆಚ್ಚಳಕ್ಕೆ ಒಪ್ಪಿಸಿರುವುದಾಗಿ ಹೇಳಿದರು.

ನಂಬಿಕೆ ದ್ರೋಹ ಮಾಡಲ್ಲ:  ಕೊರೋನಾದಿಂದ ನಾಲ್ಕು ಸಾರಿಗೆ ನಿಗಮಗಳಿಗೆ ಸುಮಾರು 3,200 ಕೋಟಿ ರು. ಆದಾಯ ನಷ್ಟವಾಗಿದೆ. ಪ್ರಯಾಣಿಕರ ಸಂಖ್ಯೆ ಕುಸಿತವಾಗಿದೆ. ನಿರೀಕ್ಷಿತ ಮಟ್ಟದಲ್ಲಿ ಆದಾಯ ಬಾರದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಹ ಕಷ್ಟದಲ್ಲಿದೆ. ಬಾಕಿ ಹಣ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನಾನು ನಂಬಿಕೆಗೆ ದ್ರೋಹ ಮಾಡುವುದಿಲ್ಲ. ಸಾರಿಗೆ ನೌಕರರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಸಚಿವ ಸವದಿ ಹೇಳಿದರು.

ಡೀಸೆಲ್‌, ನಿರ್ವಹಣೆ ವೆಚ್ಚ ಸೇರಿದಂತೆ ವಸ್ತುಗಳ ದರ ಏರಿಕೆಯಾಗಿದೆ. ಆದರೆ, ಬಸ್‌ ಪ್ರಯಾಣ ದರ ಮಾತ್ರ ಏರಿಕೆಯಾಗಿಲ್ಲ. ಏಕೆಂದರೆ, ಹಿಂದಿನ ಎಲ್ಲ ಸರ್ಕಾರಗಳು ವೋಟ್‌ ಬ್ಯಾಂಕ್‌ಗಾಗಿ ಪ್ರಯಾಣ ದರ ಏರಿಕೆಗೆ ಕೈಹಾಕಿಲ್ಲ. ಸರ್ಕಾರದಿಂದ ಬಾಕಿಯಿರುವ ಹಣ ಬಿಡುಗಡೆಯಾದರೆ ಸಾರಿಗೆ ನಿಗಮಗಳು ಕೊಂಚ ಚೇತರಿಸಿಕೊಳ್ಳಲಿವೆ. ಈ ನಿಟ್ಟಿನಲ್ಲಿ ಬಾಕಿ ಹಣ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನಾನು ನಂಬಿಕೆಗೆ ದ್ರೋಹ ಮಾಡುವುದಿಲ್ಲ. ಸಾರಿಗೆ ನೌಕರರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಸಚಿವ ಸವದಿ ಹೇಳಿದರು.

ನೌಕರರು ಭರವಸೆ ಕಳೆದುಕೊಳ್ಳಬಾರದು. ಸರ್ಕಾರ ಚೇತರಿಸಿಕೊಳ್ಳಲು ಕೊಂಚ ಸಮಯ ಬೇಕು. ನನ್ನನ್ನು ನಿಮ್ಮ ಕುಟುಂಬದ ಸದಸ್ಯನೆಂದು ಭಾವಿಸಿ. ನಿಮ್ಮ ಭರವಸೆಗೆ ಎಂದಿಗೂ ದ್ರೋಹ ಮಾಡುವುದಿಲ್ಲ. ಮುಷ್ಕರದಿಂದ ಜನರಿಗೆ ತೊಂದರೆಯಾಗುತ್ತದೆ. ಆರನೇ ವೇತನ ಆಯೋಗದ ಮಾದರಿಯಲ್ಲಿ ವೇತನ ನೀಡಲು ಸದ್ಯದ ಪರಿಸ್ಥಿತಿಯಲ್ಲಿ ಸಾಧ್ಯವಿಲ್ಲ. ಆದರೆ, ಎಷ್ಟೇ ಕಷ್ಟವಾದರೂ ವೇತನ ಹೆಚ್ಚಳ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಶಾಸಕ ಎ.ಎಸ್‌.ಪಾಟೀಲ್ ನಡಹಳ್ಳಿ, ಈಶಾನ್ಯ ಸಾರಿಗೆ ನಿಗಮದ ಅಧ್ಯಕ್ಷ ರಾಜಕುಮಾರ್‌ ಪಾಟೀಲ, ವಾಯವ್ಯ ಸಾರಿಗೆ ನಿಗಮದ ಅಧ್ಯಕ್ಷ ವಿ.ಎಸ್‌.ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ
ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!