ಲಾಕ್‌ಡೌನ್ 4.0 ಮಧ್ಯೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ರಾಜ್ಯ ಸರ್ಕಾರ ಅನುಮತಿ ಕೊಟ್ಟಿದ್ದು, ಮುಂಗಡ ಕಾಯ್ದಿರಿಸುವ ಟಿಕೇಟುಗಳ ಬುಕ್ಕಿಂಗ್ ಶುರುವಾಗಿದೆ.
ಬೆಂಗಳೂರು, (ಮೇ.18): ನಾಳೆಯಿಂದ (ಮೇ.19) ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಬುಕ್ಕಿಂಗ್ ಪ್ರಾರಂಭಿಸಲಾಗಿದೆ.
ಈ ಬಗ್ಗೆ ಕೆಎಸ್‌ಆರ್‌ಟಿಸಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಮುಂಗಡ ಟಿಕೆಟ್ ಬುಕಿಂಗ್ ಬಗ್ಗೆ ಮಾಹಿತಿ ನೀಡಿದೆ. ಹಾಗೂ ಬಸ್ ಸಂಚಾರ ಆರಂಭಕ್ಕೂ ಮುನ್ನ ಹಲವು ಮುನ್ನೆಚ್ಚರಿಕೆ ಕ್ರಮಗಳ ಪಾಲನೆಗೆ ಸೂಚನೆ ನೀಡಿದೆ.
ಬಸ್ ಸಂಚಾರಕ್ಕೆ ಸಿಕ್ತು ಗ್ರೀನ್ ಸಿಗ್ನಲ್: ಭಾನುವಾರ ಇನ್ನು ಫುಲ್ ಬಂದ್
ಪ್ರಯಾಣಿಕರು ಕೆಎಸ್‌ಆರ್‌ಟಿಸಿ, ವೆಬ್‌ಸೈಟ್ www.ksrtc.in ಮೂಲಕ ಅಥವಾ ಫ್ರಾಂಚೈಸಿ ಕೌಂಟರುಗಳು / ನಿಗಮದ ಟಿಕೆಟ್ ಕೌಂಟರ್‌ಗಳ ಮೂಲಕ ಕಾಯ್ದಿರಿಸಬಹುದಾಗಿದೆ.
ಬಸ್ ಮಾರ್ಗಗಳು...!
ಬೆಂಗಳೂರು-ಶಿವಮೊಗ್ಗ, ಶಿವಮೊಗ್ಗ-ಬೆಂಗಳೂರು, ಬೆಂಗಳೂರು-ಚಿಕ್ಕಮಗಳೂರು, ಚಿಕ್ಕಮಗಳೂರು-ಬೆಂಗಳೂರು, ಬೆಂಗಳೂರು-ದಾವಣಗೆರೆ, ದಾವಣಗೆರೆ-ಬೆಂಗಳೂರು, ಬೆಂಗಳೂರು- ಮೈಸೂರು, ಮೈಸೂರು-ಬೆಂಗಳೂರು, ಬೆಂಗಳೂರು-ಮಡಿಕೇರಿ, ಮಡಿಕೇರಿ-ಬೆಂಗಳೂರು, ಬೆಂಗಳೂರು-ಮಂಗಳೂರು, ಮಂಗಳೂರು-ಬೆಂಗಳೂರು, ಬೆಂಗಳೂರು-ಕುಂದಾಪುರ, ಕುಂದಾಪುರ-ಬೆಂಗಳೂರು, ಬೆಂಗಳೂರು-ಹೊಸಪೇಟೆ, ಹೊಸಪೇಟೆ-ಬೆಂಗಳೂರು, ಬೆಂಗಳೂರು-ಬಳ್ಳಾರಿ, ಬಳ್ಳಾರಿ- ಬೆಂಗಳೂರು, ಬೆಂಗಳೂರು-ಹುಬ್ಬಳ್ಳಿ, ಬೆಂಗಳೂರು-ಸಿರ್ಸಿ, ಬೆಂಗಳೂರು-ರಾಯಚೂರು, ಬೆಂಗಳೂರು-ಬೆಳಗಾವಿ, ಬೆಂಗಳೂರು-ಧಾರವಾಡ.
ಶೇ. 25 ಬಸ್ ಸಂಚಾರ
ಮಂಗಳವಾರದಿಂದ 1500 ಬಸ್ ಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಅಂದರೆ ಶೇ. 25 ಬಸ್ ಸಂಚಾರ ಆರಂಭಿಸಲು ಕೆಎಸ್‌ಆರ್‌ಟಿಸಿ ಮುಂದಾಗಿದೆ. ನಂತರ ಹಂತಹಂತವಾಗಿ ಬಸ್ಗಳ ಸಂಖ್ಯೆಯನ್ನು ಹೆಚ್ಚಿಗೆ ಮಾಡಲು ಪ್ಲಾನ್ ಮಾಡಿದೆ. ಬೆಂಗಳೂರಿನಿಂದ ಹೊರಡುವ ಬಸ್ಗಳು ಸಂಜೆ 7 ಗಂಟೆಯೊಳಗೆ ನಿಗದಿತ ನಿಲ್ದಾಣ ತಲುಪಬೇಕು. ಸಂಜೆ 7 ಗಂಟೆ ನಂತರ ಬಸ್ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಹೀಗಾಗಿ ಸಂಜೆ 4 ಗಂಟೆಯೊಳಗೆ ಬೆಂಗಳೂರಿನಿಂದ ಎಲ್ಲ ಬಸ್ಸುಗಳು ಹೊರಡಲಿವೆ. ಬಸ್ ಪ್ರಯಾಣ ದರ ಯಥಾಸ್ಥಿತಿ ಇರಲಿದೆ.
ಬಸ್ ವೇಳಾಪಟ್ಟಿ
ಬೆಂಗಳೂರಿನಿಂದ ಮೈಸೂರಿಗೆ ಸಂಜೆ 4ವರೆಗೆ ಬಸ್ಗಳು ಹೊರಡಲಿವೆ. ಆನಂತರ ಮೈಸೂರಿಗೆ ಯಾವುದೇ ಬಸ್ಸುಗಳು ಇರುವುದಿಲ್ಲ. ಬೆಂಗಳೂರಿನಿಂದ ಶಿವಮೊಗ್ಗ ಮಧ್ಯಾಹ್ನ 12 ಗಂಟೆಯೊಳಗೆ ಬಸ್ ಹೊರಡಲಿದೆ. ಬೆಂಗಳೂರಿನಿಂದ ದಾವಣಗೆರೆಗೆ ಮಧ್ಯಾಹ್ನ 1 ಗಂಟೆಗೆ ಕಡೆಯ ಬಸ್ ತೆರಳಲಿದೆ. ಬೆಂಗಳೂರಿನಿಂದ ಹಾಸನಕ್ಕೆ ಮಧ್ಯಾಹ್ನ 3 ಗಂಟೆಗೆ, ಬೆಂಗಳೂರಿನಿಂದ ಮಂಗಳೂರಿಗೆ ಬೆಳಗ್ಗೆ 11.30ಕ್ಕೆ ಕಡೆಯ ಬಸ್ ಹೊರಡಲಿದೆ.
ಹೆಚ್ಚಿನ ಮಾಹಿತಿಗಾಗಿ www.ksrtc.in ಹಾಗೂ ಕಾಲ್ ಸೆಂಟರ್ ನಂಬರ್ ಗೆ ಸಂಪರ್ಕಿಸಿ : 9449596666