ಯುಗಾದಿಗೆ KSRTC ವಿಶೇಷ ಬಸ್ಸುಗಳು: 2000 ಹೆಚ್ಚುವರಿ ಸೇವೆ!

ಯುಗಾದಿ ಹಬ್ಬಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2000 ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಮಾಡಿದೆ. ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ಮಾ.28 ರಿಂದ ಮಾ.30ರವರೆಗೆ ವಿಶೇಷ ಸಾರಿಗೆ ಲಭ್ಯವಿದ್ದು, ಮುಂಗಡ ಬುಕ್ಕಿಂಗ್‌ಗೆ ಅವಕಾಶವಿದೆ.

KSRTC special buses for Ugadi festival 2000 additional services sat

ಬೆಂಗಳೂರು (ಮಾ.25): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಯುಗಾದಿ ಹಬ್ಬದ ಪ್ರಯುಕ್ತ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. 

ಮಾ.30ರಂದು ಚಂದ್ರಮಾನ ಯುಗಾದಿ, ಮಾ.31ರಂದು ರಂಜಾನ್ ಹಬ್ಬವಿರುವುದರಿಂದ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಾ.28 ರಿಂದ ಮಾ.30ರವರೆಗೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 2000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿರುತ್ತದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಮಾ.31ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ತಿಳಿಸಿದೆ.

Latest Videos

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ಮಾಡಲಿವೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ. ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣA, ಚೆನ್ನೆöÊ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.

ಇದನ್ನೂ ಓದಿ: Karnataka News Live 26th March: ಯುಗಾದಿಗೆ KSRTC ವಿಶೇಷ ಬಸ್ಸುಗಳು: 2000 ಹೆಚ್ಚುವರಿ ಸೇವೆ!

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.

ಇ-ಟಿಕೇಟ್ ಬುಕಿಂಗ್‌ನ್ನು https://ksrtc.in/ ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ. ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ & ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.

ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ ಹಾಗೂ ಪುದುಚೆರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ. ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.

ಇದನ್ನೂ ಓದಿ: 40 ರಾಜ್ಯ ಸರ್ಕಾರಿ ಸಂಸ್ಥೆ ದಿವಾಳಿ- ಭಾರಿ ಅವ್ಯವಹಾರ! ಸಿಎಜಿಯ ಶಾಕಿಂಗ್​ ವರದಿ ಫುಲ್​ ಡಿಟೇಲ್ಸ್​ ಇಲ್ಲಿದೆ...

ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು.

vuukle one pixel image
click me!