
ಬೆಂಗಳೂರು, (ಆ.17) : ಓಣಂ ಹಬ್ಬದ ಪ್ರಯುಕ್ತ ಕೇರಳ ಸಾರ್ವಜನಿಕರ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ವಿಶೇಷ ಬಸ್ ವ್ಯವಸ್ಥೆ ಮಾಡಿದೆ.
ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಇಂದು (ಸೋಮವಾರ) ಪ್ರಕಟಣೆ ಹೊರಡಿಸಿದ್ದು, ಓಣಂ ಹಬ್ಬಕ್ಕೆ ಬೆಂಗಳೂರಿನಿಂದ ಕೇರಳಕ್ಕೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಆಗಸ್ಟ್ 24ರಿಂದ ಸೆಪ್ಟೆಂಬರ್ 6ರವರೆಗೆ ವಿಶೇಷ ಬಸ್‌ಗಳು ಸಂಚರಿಸಲಿವೆ.
ಪುಂಡರ ವಿರುದ್ಧ ಕ್ರಮಕ್ಕೆ ಮುಂದಾದ ಸಿಎಂ, ಕಂಗಾನ ಮಾತಿಗೆ ಸೊನಾಕ್ಷಿ ಗರಂ: ಆ.17ರ ಟಾಪ್ 10 ಸುದ್ದಿ!
ಆದ್ರೆ, ಸೇವ ಸಿಂಧು ಇರುವ ಪ್ರಯಾಣಿಕರಿಗೆ ಮಾತ್ರ ಪ್ರಯಾಣಕ್ಕೆ ಅವಕಾಶ ನೀಡಲಾಗಿದ್ದು, ಕೆಎಸ್ ಆರ್ ಟಿಸಿ ವೆಬ್ ಸೆಟ್ ಮೂಲಕ ಸೀಟ್ ಬುಕಿಂಗ್ ಮಾಡಬಹುದು.
* ಬೆಂಗಳೂರಿನಿಂದ ಕಣ್ಣೂರು, ಎರ್ನಾಕುಲಂ, ಕಾನ್ಹಂಗಾಡ್, ಕಾಸರಗೂಡು, ಕೊಟ್ಟಾಯಂ, ಕಲ್ಲಿಕೋಟೆ, ಪಾಲಘಾಟ್, ತ್ರಿಶೂರು, ತಿರುವನಂತಪುರಂ ಮತ್ತು ವಡಕರಾ.
* ಮೈಸೂರಿನಿಂದ ತಿರುವನಂತಪುರಂ, ಎರ್ನಾಕುಲಂ ಮತ್ತು ಕೊಟ್ಟಾಯಂ ಹಾಗೂ ಸದರಿ ಸ್ಥಳಗಳಿಂದ ವಾಪಸ್ ಮೈಸೂರಿಗೆ ಈ ಬಸ್‌ಗಳಿ ಓಡಾಡಲಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ