ದೀಪಾವಳಿಗೆ : 25ರಿಂದ 27ರವರೆಗೆ KSRTCಯಿಂದ 1600 ವಿಶೇಷ ಬಸ್‌ ಸೇವೆ

By Kannadaprabha NewsFirst Published Oct 20, 2019, 8:52 AM IST
Highlights

ರಾಜ್ಯ ರಸ್ತೆ ಸಾರಿಗೆ ನಿಗಮ ನರಕ ಚತುರ್ದಶಿ ಹಾಗೂ ಬಲಿಪಾಡ್ಯಮಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಅ.25ರಿಂದ 27ರ ವರೆಗೆ ಬೆಂಗಳೂರು ನಗರದಿಂದ ರಾಜ್ಯ ಹಾಗೂ ಹೊರರಾಜ್ಯದ ವಿವಿಧ ಸ್ಥಳಗಳಿಗೆ 1600 ಹೆಚ್ಚುವರಿ ಬಸ್‌ ಕಾರ್ಯಾಚರಣೆ ಮಾಡುವುದಾಗಿ ತಿಳಿಸಿದೆ.

ಬೆಂಗಳೂರು [ಅ.20]:  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ನರಕ ಚತುರ್ದಶಿ ಹಾಗೂ ಬಲಿಪಾಡ್ಯಮಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಅ.25ರಿಂದ 27ರ ವರೆಗೆ ಬೆಂಗಳೂರು ನಗರದಿಂದ ರಾಜ್ಯ ಹಾಗೂ ಹೊರರಾಜ್ಯದ ವಿವಿಧ ಸ್ಥಳಗಳಿಗೆ 1600 ಹೆಚ್ಚುವರಿ ಬಸ್‌ ಕಾರ್ಯಾಚರಣೆ ಮಾಡುವುದಾಗಿ ತಿಳಿಸಿದೆ.

ನಗರದ ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌, ತಿರುಪತಿ ಮೊದಲಾದ ಸ್ಥಳಗಳಿಗೆ ಈ ಹೆಚ್ಚುವರಿ ಬಸ್‌ ಸಂಚರಿಸಲಿವೆ. ಮೈಸೂರು ರಸ್ತೆಯ ಸ್ಯಾಟಲೈಟ್‌ ಬಸ್‌ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದಲ್ಲಿ ಕಾರ್ಯಾಚರಣೆ ಮಾಡಲಿವೆ.

ಶಾಂತಿನಗರದ ಕೇಂದ್ರದ ಘಟಕ ಎರಡು ಮತ್ತು ನಾಲ್ಕರ ಆವರಣದಿಂದ ನೆರೆ ರಾಜ್ಯದ ಮದುರೈ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರ್‌, ತಿರುಪತಿ, ವಿಜಯವಾಡ, ಹೈದರಾಬಾದ್‌ ಮುಂತಾದ ಸ್ಥಳಗಳಿಗೆ ಹವಾನಿಯಂತ್ರಿತ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುವುದು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಪೀಣ್ಯದ ಬಸವೇಶ್ವರ ಬಸ್‌ ನಿಲ್ದಾಣ, ಜಯನಗರ, ಜಯನಗರ 4ನೇ ಬ್ಲಾಕ್‌, ಜಾಲಹಳ್ಳಿ ಕ್ರಾಸ್‌, ನವರಂಗ್‌ ಚಿತ್ರಮಂದಿರ, ಮಲ್ಲೇಶ್ವರಂ 18ನೇ ಅಡ್ಡ ರಸ್ತೆ, ಬನಶಂಕರಿ, ಜೀವನ್‌ ಬೀಮಾನಗರ, ಐಟಿಐ ಗೇಟ್‌, ಗಂಗಾನಗರ, ಕೆಂಗೇರಿ ಉಪನಗರ ಮೊದಲಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆಸುಬ್ರಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಬಸ್‌ ಸಂಚರಿಸಲಿವೆ. ಅಲ್ಲದೆ, ನಿಗಮದ ವ್ಯಾಪ್ತಿಯ ಎಲ್ಲ ತಾಲೂಕು ಹಾಗೂ ಜಿಲ್ಲಾ ಬಸ್‌ ನಿಲ್ದಾಣಗಳಲ್ಲಿ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಬಸ್‌ ಕಾರ್ಯಾಚರಿಸುವುದಾಗಿ ಕೆಎಸ್‌ಆರ್‌ಟಿಸಿ ತಿಳಿಸಿದೆ.

click me!