
ಬೆಂಗಳೂರು (ಅ. 15): ಕೆಎಸ್‌ಆರ್‌ಟಿಸಿ ಗುಜರಿ ಬಸ್ ಬಳಸಿಕೊಂಡು ನಿರ್ಮಿಸಿದ್ದ ‘ಸ್ತ್ರೀ ಶೌಚಾಲಯ’ ಮತ್ತು ‘ಮೊಬೈಲ್ ಫೀವರ್ ಕ್ಲಿನಿಕ್’ಗೆ ‘ಸಮಾಜದ ಅಭಿವೃದ್ಧಿಗಾಗಿ ಸಾಮಾಜಿಕ ಕಳಕಳಿ’ ವರ್ಗದಲ್ಲಿ ‘ರಾಷ್ಟ್ರೀಯ ಸಾರ್ವಜನಿಕ ಉದ್ದಿಮೆಗಳ ಅತ್ಯುತ್ತಮ ಪ್ರಶಸ್ತಿ’ ಲಭಿಸಿದೆ.
ವಲ್ಡ್‌ರ್ ಎಚ್‌ಆರ್‌ಡಿ ಕಾಂಗ್ರೆಸ್ ಮುಂಬೈನಲ್ಲಿ ಹಮ್ಮಿಕೊಂಡಿದ್ದ ವರ್ಚುವಲ್ ಕಾರ್ಯಕ್ರಮದಲ್ಲಿ ಕೆಎಸ್‌ಆರ್‌ಟಿಸಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಮಾತನಾಡಿ, ಕೊರೋನಾ ಪರಿಸ್ಥಿತಿಯಲ್ಲಿ ವಾರಿಯರ್‌ಗಳಾಗಿ ಕಾರ್ಯ ನಿರ್ವಹಿಸುತ್ತಿರುವ ನಿಗಮದ ಸಿಬ್ಬಂದಿಗೆ ಈ ಪ್ರಶಸ್ತಿ ಅರ್ಪಿಸುವುದಾಗಿ ತಿಳಿಸಿದರು. ಅಂತೆಯೆ ಸ್ತ್ರೀ ಶೌಚಾಲಯ ಮತ್ತು ಮೊಬೈಲ್ ಫೀವರ್ ಕ್ಲಿನಿಕ್‌ಗೆ ತಗುಲಿದ ವೆಚ್ಚ, ಅದರ ಉಪಯೋಗ ಸೇರಿದಂತೆ ಇತರೆ ಮಾಹಿತಿ ವಿನಿಮಯ ಮಾಡಿಕೊಂಡರು.
KSRTC ಪ್ರಯಾಣಿಕರಿಗೆ ಇಲ್ಲಿದೆ ಗುಡ್ ನ್ಯೂಸ್
ಕೊರಿಯರ್‌ನಲ್ಲಿ ಬಂದ ಫಲಕ: ಕೊರೋನಾ ಹಿನ್ನೆಲೆಯಲ್ಲಿ ವ್ಯವಸ್ಥಾಪಕ ನಿರ್ದೇಶಕರು ಮುಂಬೈ ಕಾರ್ಯಕ್ರಮಕ್ಕೆ ಹೋಗಲಿಲ್ಲ. ಹೀಗಾಗಿ ಆಯೋಜಕರು ಕಾರ್ಯಕ್ರಮಕ್ಕೂ ಮುನ್ನವೇ ಕೊರಿಯರ್ ಮೂಲಕ ಪ್ರಶಸ್ತಿ ಫಲಕ ಹಾಗೂ ಪ್ರಶಸ್ತಿ ಪತ್ರವನ್ನು ನಿಗಮಕ್ಕೆ ತಲುಪಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ