
ತುಮಕೂರು, (ಏ.07): ಅನ್ಯಾಯ ಪ್ರಶ್ನಿಸಿದ್ದಕ್ಕೆ ಎಸ್ಮಾ ಜಾರಿ ಮಾಡುವುದು ಸರಿಯೇ..? ಎಸ್ಮಾ ಜಾರಿ ಮಾಡಲು ಸಾರಿಗೆ ನೌಕರರು ಯಾವ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂಬುವುದನ್ನು ಸರ್ಕಾರ ತಿಳಿಸಲಿ ಎಂದು ಸಾರಿಗೆ ನೌಕರರ ಕೂಟದ ಗೌರವ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಕಿಡಿಕಾರಿದರು.
ಇಂದು (ಬುಧವಾರ) ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಠಗಳಿಗೆ, ನಿಗಮಗಳನ್ನು ರಚನೆ ಮಾಡಲು, ಅಭಿವೃದ್ಧಿ ಮಂಡಳಿಗಳಿಗೆ ನೀಡಲು ಸರ್ಕಾರದ ಬಳಿ ಹಣವಿದೆ. ಆದರೆ ಬಡ ನೌಕರರಿಗೆ ನಿಡಲು ಹಣವಿಲ್ಲ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
6ನೇ ವೇತನ ಆಯೋಗ ನಿರೀಕ್ಷೆಯಲ್ಲಿದ್ದ ಸಾರಿಗೆ ನೌಕರರಿಗೆ ಬಿಗ್ ಶಾಕ್ ಕೊಟ್ಟ ಸಿಎಂ
6ನೇ ವೇತನ ಆಯೋಗ ಜಾರಿಮಾಡುವಂತೆ ಮೊದಲಿನಿಂದಲೂ ಬೇಡಿಕೆ ಇಟ್ಟಿದ್ದೇವೆ. ಆದರೆ ಸರ್ಕಾರ ಆರ್ಥಿಕ ಸಂಕಷ್ಟದ ನೆಪ ಹೇಳಿ ಬೇಡಿಕೆ ಈಡೇರಿಸಲು ಮುಂದಾಗುತ್ತಿಲ್ಲ. ಈಗ ಮುಷ್ಕರ ನಡೆಸಿದರೆ ಎಸ್ಮಾ ಜಾರಿ ಬೆದರಿಕೆ ಹಾಕಲಾಗುತ್ತಿದೆ. ಈ ರೀತಿ ಹೆದರಿಸಿ ಕಾರ್ಮಿಕರನ್ನು ಅರೆ ಹೊಟ್ಟೆಯಲ್ಲಿ ದುಡಿಸಿಕೊಳ್ಳುವುದು ನ್ಯಾಯವೇ ಎಂದು ಪ್ರಶ್ನಿಸಿದರು.
ಸಾರಿಗೆ ನೌಕರರ ಬೇಡಿಕೆ ಈಡೆರಿಸಲು 700 ಕೋಟಿ ರೂಪಾಯಿ ಬೇಕಾಗುತ್ತದೆ. 700 ಕೋಟಿ ನಷ್ಟವಾಗುತ್ತದೆ ಎಂದು ಮಾತುಕತೆಗೆ ಹೋದಾಗ ಸರ್ಕಾರ ಹೇಳಿದೆ. ಒಂದುವರೆ ಲಕ್ಷ ಬಡ ಕಾರ್ಮಿಕರಿಗೆ ಇಷ್ಟು ಹಣ ನೀಡಿದರೆ ಅದು ನಷ್ಟ ಹೇಗೆ ಆಗುತ್ತದೆ. ನಿಮಗೆ ಬೇಕಾದ ಮಠಗಳಿಗೆ, ಜಾತಿ ಧರ್ಮಗಳಿಗೆ, ನಿಗಮ ಮಂಡಳಿ, ಅಭಿವೃದ್ಧಿ ಮಂಡಳಿಗೆ 500 ಕೊಟಿಗಳಿಗೂ ಹೆಚ್ಚು ಹಣಗಳನ್ನು ಬಿಡುಗಡೆ ಮಾಡುತ್ತಿದ್ದೀರಿ ಅದು ನಿಮಗೆ ನಷ್ಟವೆನಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಾರಿಗೆ ನೌಕರರ ಮುಷ್ಕರ: ಸರ್ಕಾರಕ್ಕೆ ಮಹತ್ವದ ಸಲಹೆ ಕೊಟ್ಟ ಕುಮಾರಸ್ವಾಮಿ!
. ದುಡಿಯುವ ಕೈಗಳಿಗೆ, ಸಾರಿಗೆ ನೌಕರರಿಗೆ ಈ ಹಣ ನೀಡಲು ಆಗುವುದಿಲ್ಲ ಎಂದರೆ ಅನ್ಯಾಯವಲ್ಲದೇ ಮತ್ತಿನ್ನೇನು? ನಮಗಾದ ಅನ್ಯಾಯ ಪ್ರಶ್ನಿಸಿದರೆ ಎಸ್ಮಾ ಎಚ್ಚರಿಕೆ ನೀಡುವುದು ಸರಿಯೇ ಎಂದು ತರಾಟೆಗೆ ತೆಗೆದುಕೊಂಡರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ