ಮುಂಜಾನೆ ಕೊರೆಯುವ ಚಳಿಗೆ ಹೆಚ್ಚುತ್ತಿರುವ ಅಪಘಾತ; ರಾತ್ರಿ ಪಾಳಿ ಚಾಲಕರಿಗೆ ಥರ್ಮೋ ಫ್ಲಾಸ್ಕ್ ನೀಡಲು KSRTC ನಿರ್ಧಾರ

By Kannadaprabha NewsFirst Published Dec 31, 2023, 12:46 PM IST
Highlights

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಪ್ರಯಾಣಿಕರ ಸುರಕ್ಷತೆಗಾಗಿ ಮತ್ತೊಂದು ಪರಿಣಾಮಕಾರಿ ಕ್ರಮಕ್ಕೆ ಮುಂದಾಗಿದ್ದು, ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಅಥವಾ ಚಾಲನೆ ಮಾಡುವ ಚಾಲಕರಿಗೆ ಉತ್ತಮ ಗುಣಮಟ್ಟದ 500 ಮಿಲಿಯ ಥರ್ಮೋ ಫ್ಲಾಸ್ಕ್ ನೀಡಲು ನಿಗಮ ಮುಂದಾಗಿದೆ.

ಬೆಂಗಳೂರು (ಡಿ.31): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಪ್ರಯಾಣಿಕರ ಸುರಕ್ಷತೆಗಾಗಿ ಮತ್ತೊಂದು ಪರಿಣಾಮಕಾರಿ ಕ್ರಮಕ್ಕೆ ಮುಂದಾಗಿದ್ದು, ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಅಥವಾ ಚಾಲನೆ ಮಾಡುವ ಚಾಲಕರಿಗೆ ಉತ್ತಮ ಗುಣಮಟ್ಟದ 500 ಮಿಲಿಯ ಥರ್ಮೋ ಫ್ಲಾಸ್ಕ್ ನೀಡಲು ನಿಗಮ ಮುಂದಾಗಿದೆ.

ನಿಗಮದ 1,600 ಬಸ್‌ಗಳು ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತವೆ. ಇತ್ತೀಚೆಗೆ, ನಡೆಸಿದ ಅಧ್ಯಯನದ ಪ್ರಕಾರ ನಿಗಮದ ವಾಹನಗಳು ರಾತ್ರಿ ವೇಳೆ ಕಾರ್ಯಾಚರಣೆಯಲ್ಲಿದ್ದಾಗ ಬೆಳಗಿನ ಜಾವ 3 ರಿಂದ 4 ಗಂಟೆಯ ಸಮಯದಲ್ಲಿ ಹೆಚ್ಚು ಅಪಘಾತಕ್ಕೆ ಒಳಪಟ್ಟಿರುವುದು ತಿಳಿದುಬಂದಿದೆ. 

Latest Videos

 

ಮುಂದುವರಿದ ಮಹಿಳೆಯರ 'ಶಕ್ತಿ' ಪ್ರದರ್ಶನ; ಕಂಡಕ್ಟರ್, ಡ್ರೈವರ್ ಮೇಲೆಯೇ ಮನಬಂದಂತೆ ಹಲ್ಲೆ ನಡೆಸಿದ ರೌಡಿ ಗ್ಯಾಂಗ್!

ಈ ಹಿನ್ನೆಲೆ, ನಿಗಮದ ಪ್ರಯಾಣಿಕರು ಹಾಗೂ ಸಿಬ್ಬಂದಿ ಸುರಕ್ಷತೆಯು ಪ್ರಥಮ ಆದ್ಯತೆಯಾಗಿದ್ದು, ಆ ನಿಟ್ಟಿನಲ್ಲಿ ರಾತ್ರಿ ವೇಳೆ, ಬಸ್‌ಗಳ ಕಾರ್ಯಾಚರಣೆ ಸಮಯದಲ್ಲಿ ಚಾಲಕರು ಸುರಕ್ಷಿತವಾಗಿ ವಾಹನ ಚಾಲನೆ ಮಾಡುವ ಅವಶ್ಯಕತೆ ಇರುವುದರಿಂದ, ಅವರ ಕಾರ್ಯ ಕ್ಷಮತೆಯನ್ನು ಉತ್ತಮಪಡಿಸುವ ಸಲುವಾಗಿ ಆ ಅವಧಿಯಲ್ಲಿ ರಿಫ್ರೆಸ್ ಆಗಲು ಕಾಫಿ-ಟೀ ಸೇವಿಸಿ (ಆ ಸಮಯದಲ್ಲಿ ಮಾರ್ಗ ಮಧ್ಯದಲ್ಲಿ ಯಾವುದೇ  ಹೋಟೆಲುಗಳ ಲಭ್ಯತೆಯು ಇರದ ಕಾರಣ) ವಾಹನವನ್ನು ಸುರಕ್ಷಿತವಾಗಿ ಚಾಲನೆ ಮಾಡಲು ಚಾಲಕರಿಗೆ ಉತ್ತಮ ಗುಣಮಟ್ಟದ 500 ಮಿಲಿಯ ಥರ್ಮೋ ಫ್ಲಾಸ್ಕ್ ಅನ್ನು 1,600 ಬಸ್‌ಗಳಿಗೆ ಒದಗಿಸಲಾಗಿದೆ ಎಂದು ನಿಗಮ ತಿಳಿಸಿದೆ. 

ಸೀಟ್ ಗಾಗಿ ಮಹಿಳೆಯರ ಹೊಡೆದಾಟ: ಶಕ್ತಿ ಯೋಜನೆಯ ಶಕ್ತಿ ಪ್ರದರ್ಶನ!

ಈ ಕ್ರಮದಿಂದಾಗಿ ನಿಗಮದ ಚಾಲಕರುಗಳು ರಾತ್ರಿ ವೇಳೆಯಲ್ಲಿ ವಾಹನಗಳು ನಿಲ್ಲಿಸಿದ ಹೋಟೆಲ್ ಇತ್ಯಾದಿ ಸ್ಥಳಗಳಿಂದ ಟೀ/ಕಾಫಿಯನ್ನು ಫ್ಲಾಸ್ಕ್‌ನಲ್ಲಿ ಸಂಗ್ರಹಿಸಿಕೊಂಡು, ಬೆಳಗಿನ ಜಾವದಲ್ಲಿ ಬಳಸಿ ಸುರಕ್ಷತೆಯಿಂದ ವಾಹನವನ್ನು ಚಾಲನೆ ಮಾಡಿ ಪ್ರಯಾಣಿಕರನ್ನು ಅವರವರ ಗಮ್ಯ ಸ್ಥಳಕ್ಕೆ ಸುರಕ್ಷಿತವಾಗಿ ತಲುಪಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದೆ.

click me!