ಇಂದಿನಿಂದ ಟಿ. ನರಸೀಪುರದಲ್ಲಿ ದಕ್ಷಿಣ ಭಾರತದ ಏಕೈಕ ಕುಂಭಮೇಳ

Published : Feb 10, 2025, 07:50 AM IST
ಇಂದಿನಿಂದ ಟಿ. ನರಸೀಪುರದಲ್ಲಿ ದಕ್ಷಿಣ ಭಾರತದ ಏಕೈಕ ಕುಂಭಮೇಳ

ಸಾರಾಂಶ

ಜಿಲ್ಲೆಯ ಕಾವೇರಿ, ಕಪಿಲಾ ಹಾಗೂ ಸ್ಫಟಿಕ ಸರೋವರಗಳು ಸೇರುವ ಟಿ. ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆ. 10 ರಿಂದ 3 ದಿನಗಳ 13ನೇ ಕುಂಭಮೇಳ ನಡೆಯಲಿದೆ. ಆರು ವರ್ಷಗಳ ನಂತರ ನಡೆಯುತ್ತಿರುವ ಕುಂಭಮೇಳದಲ್ಲಿ ಅಪಾರ ಭಕ್ತರು ಸೇರುವ ನಿರೀಕ್ಷೆ ಇದೆ.

ಮೈಸೂರು (ಫೆ.10): ಜಿಲ್ಲೆಯ ಕಾವೇರಿ, ಕಪಿಲಾ ಹಾಗೂ ಸ್ಫಟಿಕ ಸರೋವರಗಳು ಸೇರುವ ಟಿ. ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆ. 10 ರಿಂದ 3 ದಿನಗಳ 13ನೇ ಕುಂಭಮೇಳ ನಡೆಯಲಿದೆ. ಆರು ವರ್ಷಗಳ ನಂತರ ನಡೆಯುತ್ತಿರುವ ಕುಂಭಮೇಳದಲ್ಲಿ ಅಪಾರ ಭಕ್ತರು ಸೇರುವ ನಿರೀಕ್ಷೆ ಇದೆ. ಸರ್ಕಾರ ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ನಡೆಯುತ್ತಿದ್ದರೆ, ಕರ್ನಾಟಕದ ಟಿ. ನರಸೀಪುರದ ತ್ರಿವೇಣಿ ಫೆ. 12ರಂದು ಪವಿತ್ರ ಕುಂಭಸ್ನಾನ ನಡೆಯಲಿದೆ.

ಅಂದು ಬೆಳಗ್ಗೆ 9 ರಿಂದ 9.30ರೊಳಗೆ ಶುಭ ಮೀನ ಲಗ್ನ ಮತ್ತು ಮಧ್ಯಾಹ್ನ 12 ರಿಂದ 1 ಗಂಟೆವರೆಗೆ ವೃಷಭ ಲಗ್ನದಲ್ಲಿ ಕುಂಭಮೇಳದ ಪುಣ್ಯಸ್ನಾನ ಮಾಡಲು ಮುಹೂರ್ತ ನಿಗದಿ ಮಾಡಲಾಗಿದೆ.ಭರದ ಸಿದ್ಧತೆ ಕುಂಭಮೇಳದ ಧಾರ್ಮಿಕ ಕಾರ್ಯಕ್ರಮಕ್ಕಾಗಿ ವೇದಿಕೆ ನಿರ್ಮಾಣ, ಸ್ವಚ್ಛತಾ, ಲೈಟಿಂಗ್ಸ್ ಅಳವಡಿಕೆ ಕಾರ್ಯ ಮಾಡಲಾಗಿದೆ. ಅಹಿತಕರ ಘಟನೆಗಳು ಜರುಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ. ನದಿ ಪಾತ್ರದ ಹಲವೆಡೆ ಮುಳುಗುತಜ್ಞರನ್ನು ನಿಯೋಜಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ನೂರಾರು ಪೊಲೀಸರನ್ನು ನಿಯೋಜಿಸಲಾಗಿದೆ. ಸರ್ಕಾರ ಇದಕ್ಕಾಗಿ 6 ಕೋಟಿ ರು. ಅನುದಾನ ಬಿಡುಗಡೆ ಮಾಡಿದೆ.

ಧಾರ್ಮಿಕ ಕಾರ್ಯಕ್ರಮಗಳು: ಫೆ. 10ರಂದು ತ್ರಯೋದಶಿ, ಪುಷ್ಯ ಪ್ರಾತಃಕಾಲ 9 ಗಂಟೆಗೆ ಶ್ರೀ ಅಗಸ್ತೇಶ್ವರ ಸನ್ನಿಧಿಯಲ್ಲಿ, ಅನುಜ್ಞೆ, ಪುಣ್ಯಾಹ, ಗಣಹೋಮ, ಪೂರ್ಣಾಹುತಿ, ಅಭಿಷೇಕ, ಮಹಾಮಂಗಳಾರತಿ ನೆರವೇರಿಸಲಾಗುತ್ತದೆ. ಸಂಜೆ 5 ಗಂಟೆಗೆ ಧರ್ಮಸಭೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಅಥಿತಿ ಗಣ್ಯರಿಂದ ಉದ್ಘಾಟನೆ ಮತ್ತು ಧ್ವಜಾರೋಹಣ ನೆರವೇರಲಿದೆ.

ನನ್ನ, ಜನಾರ್ದನ ರೆಡ್ಡಿ ಸಂಬಂಧ ಅಂತ್ಯ, ಅದು ಎಂದೂ ಸರಿಹೋಗಲ್ಲ: ಶ್ರೀರಾಮುಲು

ಒಳ್ಳೆಯದನ್ನು ನೋವಿಸುವ ಯಾರೂ ಉದ್ಧಾರವಾಗಿಲ್ಲ: ಶ್ರೀರಾಮ ಎಂದರೆ ಧರ್ಮ. ಅಂತಹ ಧರ್ಮ ಪ್ರತಿಷ್ಠಾಪನೆ. ಇದು ಎಲ್ಲ ಕಡೆಯೂ ಆಗಬೇಕು. ಬೀಳಗಿಯಲ್ಲಿ ಶ್ರೀರಾಮ ಮಂದಿರ ನಿರ್ಮಿಸಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಮಾಡಿರುವುದು ಒಳ್ಳೆಯ ಕಾರ್ಯ. ಎಲ್ಲ ಸಮಾಜಗಳ ಉದ್ಧಾರವಾಗಲಿ, ಎಲ್ಲರ ಜೀವನ ಸುಖಕರವಾಗಲಿ ಎಂಬುದೇ ಧರ್ಮ ಪ್ರತಿಷ್ಠಾಪನೆ ಉದ್ದೇಶ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಗಳು ಹೇಳಿದರು. ಬೀಳಗಿ ಕ್ರಾಸ್‌ ಬಳಿಯಲ್ಲಿ ಶ್ರೀರಾಮ ಮಂದಿರ ದೇವಸ್ಥಾನ ಸಮಿತಿ ವತಿಯಿಂದ ರಾಷ್ಟ್ರೀಯ ಹೆದ್ದಾರಿ ೨೧೮ಕ್ಕೆ ಹೊಂದಿಕೊಂಡಿರುವ ವಿಶಾಲ ಪ್ರದೇಶದಲ್ಲಿ ನಿರ್ಮಾಣವಾದ ಶ್ರೀರಾಮ ಮಂದಿರ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆ ಹಾಗೂ ಉಚಿತ ಸಾಮೂಹಿಕ ವಿವಾಹ, ಉಪನಯನ ಸಮಾರಂಭದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾನ ನೆರವೇರಿಸಿ ಅವರು ಆಶೀರ್ವಚನ ನೀಡಿದರು.

ಯಾರ ಹತ್ತಿರ ಪ್ರಯತ್ನವಿರುವುದಿಲ್ಲವೋ ಅಂತವರು ಯಾವುದೇ ಸಾಧನೆ ಮಾಡಲು ಸಾಧ್ಯವಿಲ್ಲ. ಪ್ರತಿಯೊಬ್ಬರಲ್ಲೂ ಪ್ರಯತ್ನ ಹೆಚ್ಚಾಗಬೇಕು. ಅದು ಸ್ವಾರ್ಥ, ಸುಖಕ್ಕಾಗಿ ಆಗಿರಬಾರದು, ಇನ್ನೊಬ್ಬರಿಗೆ ದುಃಖ ಉಂಟುಮಾಡಿ ನಾವು ಸುಖವಾಗಿ ಇರಲು ಸಾಧ್ಯವಿಲ್ಲ. ಯಾರಿಗೂ ತೊಂದರೆಯಾಗದಂತೆ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಶ್ರೀರಾಮನ ತತ್ವಾದರ್ಶಗಳನ್ನು ಅರಿತು ಎಲ್ಲ ಸಮಾಜಗಳನ್ನು ಒಗ್ಗೂಡಿಸಿಕೊಂಡು ಸಾಗಬೇಕು. ರಾಮ ಒಳ್ಳೆಯದಕ್ಕೆ ಹೆಸರಾದರೆ, ರಾವಣ ಸ್ವಾರ್ಥಕ್ಕೆ ಹೆಸರಾಗಿದ್ದ. ಕೊನೆಯ ತನಕ ಉಳಿಯುವುದು ಒಳ್ಳೆತನವೇ ಹೊರತು ಕೆಟ್ಟದ್ದಲ್ಲ. ಒಳ್ಳೆಯದನ್ನು ನೋವಿಸುವವರು ಯಾರೂ ಉದ್ಧಾರವಾಗಿಲ್ಲ. ನಾವು ನಮಗಾಗಿ ಎನ್ನುವುದನ್ನು ಬಿಟ್ಟು ಇತರರು ನಮ್ಮವರು ಎನ್ನುವ ಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ