ಕುರುಬ ಸಮುದಾಯವನ್ನು ಎಸ್ ಟಿ ಮೀಸಲಾತಿಗೆ ಸೇರಿಸಲು ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿರುವುದು ಸ್ವಾಗತಾರ್ಹ ಎಂದು ಹಾಲುಮತ ಮಹಾಸಭಾದ ರಾಜ್ಯ ಸಂಚಾಲಕ ರಾಜು ಮೌರ್ಯ ಹೇಳಿದ್ದಾರೆ.
ವರದಿ: ವರದರಾಜ್, ಏಷ್ಯಾನೆಟ್ ಸುವರ್ಣನ್ಯೂಸ್
ದಾವಣಗೆರೆ (ಜು 21): ಕುರುಬ ಸಮುದಾಯವನ್ನು ಎಸ್ ಟಿ ಮೀಸಲಾತಿಗೆ ಸೇರಿಸಲು ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿರುವುದು ಸ್ವಾಗತಾರ್ಹ. ಈ ವಿಚಾರ ಕುರಿತು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವ ಕುರಿತಂತೆ ಚರ್ಚೆ ನಡೆಸಲು ಜು.23 ರಂದು ಬೆಳಗಾವಿಯಲ್ಲಿ ಸಭೆ ನಡೆಸಲಾಗುವುದು ಎಂದು ಹಾಲುಮತ ಮಹಾಸಭಾದ ರಾಜ್ಯ ಸಂಚಾಲಕ ರಾಜು ಮೌರ್ಯ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸ್ವಾತಂತ್ರ್ಯ ಪೂರ್ವದಿಂದ ಹಾಗೂ ಇಂದಿನ ಎಸ್, ಟಿ, ಮೀಸಲಾತಿ ಪಟ್ಟಿಯಲ್ಲಿರುವ ಕುರುಬ ಸಮುದಾಯವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ವಿಸ್ತಾರ ಮಾಡದೇ ಆಗಿರುವ ಅನ್ಯಾಯವನ್ನು ಸರಿಪಡಿಸಲು, ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳ ಮಾರ್ಗದರ್ಶನದೊಂದಿಗೆ, 2015 ರಿಂದ ನಿರಂತರವಾದ ಹೋರಾಟ, ಸಮಾವೇಶ, ಧರಣಿಗಳ ಮೂಲಕ ಅಂದಿನ ಕಾಂಗ್ರೇಸ್ ಸರ್ಕಾರಕ್ಕೆ ಮತ್ತು ಸಮ್ಮಿಶ್ರ ಸರ್ಕಾರಕ್ಕೆ ಮನವಿ ಮತ್ತು ಒತ್ತಾಯದಿಂದಾಗಿ ಸಮ್ಮಿಶ್ರ ಸರ್ಕಾರದಲ್ಲಿ ಕುರುಬರ ಎಸ್. ಟಿ. ಮೀಸಲಾತಿಗಾಗಿ ಕುಲಶಾಸ್ತ್ರೀಯ ಅಧ್ಯಯನಕ್ಕೆ ಆದೇಶ ನೀಡಲಾಗಿತ್ತು.
Nandini Milk Price Hike: ನಂದಿನಿ ಹಾಲಿನ ದರ 3 ರೂ ಏರಿಕೆಗೆ ಸರ್ಕಾರ ಗ್ರೀನ್ ಸಿಗ್ನಲ್
2019ರಿಂದ ರಾಜ್ಯದ 25 ಜಿಲ್ಲೆಗಳಲ್ಲಿ ನಡೆದ ಕುಲಶಾಸ್ತ್ರೀಯ ಅಧ್ಯಯನದ ವರದಿಯನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾರ್ಚ್ 24 ರಂದು ನಡೆದ ಸಚಿವ ಸಂಪುಟದಲ್ಲಿ ಅಂಗೀಕರಿಸಿ,ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಆದೇಶ ಮಾಡಿದ್ದರು. ಆ ಆದೇಶವನ್ನು ಜು.20 ರಂದು ಕಾಂಗ್ರೆಸ್ ಸರ್ಕಾರವು ಇದೀಗ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.ಮೂಲತಃ ಬುಡಕಟ್ಟು ಸಮುದಾಯವಾಗಿರುವ ಇಂದಿಗೂ ಸಹ ಬುಡಕಟ್ಟು ಸಂಸ್ಕೃತಿ, ಆಚರಣೆಗಳು ಹೊಂದಿರುವಂತಹ ಕುರುಬ ಸಮುದಾಯದ ಬೇಡಿಕೆಯನ್ನು ಪರಿಗಣಿಸಿ, ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲು, ಸಹಕಾರ ನೀಡಿದ್ದ ಕಾಂಗ್ರೇಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರಕ್ಕೆ ಹಾಗೂ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿ, ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿರುವ ಬಸವರಾಜ ಬೊಮ್ಮಾಯಿ ಹಾಗೂ ಸಿದ್ದರಾಮಯ್ಯ ಸರ್ಕಾರಕ್ಕೂ ಹಾಲುಮತ ಮಹಾಸಭಾ ಧನ್ಯವಾದಗಳನ್ನು ಸಲ್ಲಿಸುತ್ತಿದೆ ಎಂದರು.
ಜುಲೈ 23ರಿಂದ ಕುಂದಾಪ್ರ ಕನ್ನಡ ಹಬ್ಬ, ಬೆಂಗಳೂರಿನಲ್ಲಿ ಕುಂದಾಪುರ ಕನ್ನಡಿಗರ ಸಮಾಗಮ
ಕೇಂದ್ರ ಸರ್ಕಾರವು, ರಾಜ್ಯ ಸರ್ಕಾರದ ಶಿಫಾರಸ್ಸನ್ನು ಅಂಗೀಕರಿಸಿ, ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಅಂಗೀಕರಿಸಿ, ರಾಜ್ಯದ ಎಲ್ಲಾ ಕುರುಬರಿಗೆ ಎಸ್. ಟಿ. ಮೀಸಲಾತಿ ಪಟ್ಟಿಗೆ ಸೇರಿಸಿ, ಸಮುದಾಯಕ್ಕೆ ನ್ಯಾಯ ಒದಗಿಸಿಬೇಕೆಂದು ಒತ್ತಾಯಿಸಿ ಮುಂದಿನ ಅಕ್ಟೋಬರ್ ಹಾಗೂ ನವೆಂಬರ್ ನಲ್ಲಿ ದೆಹಲಿಗೆ ತೆರಳಲಾಗುವುದು ಎಂದರು.