
ಬೆಂಗಳೂರು: ಪಂಜಾಬಿನ ಪಟಿಯಾಲ ಬಳಿ ಕಾರು ಅಪಘಾತದಲ್ಲಿ ತೀವ್ರ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಏರ್ ಆಂಬ್ಯುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರುವ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡಿದೆ. ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಾಂತಕುಮಾರ್ ಅವರು ಪ್ರಯಾಣಿಸುತ್ತಿದ್ದ ಕಾರು ಪಟಿಯಾಲದ ಬಳಿ ಶುಕ್ರವಾರ ಅಪಘಾತಕ್ಕೀಡಾಗಿತ್ತು. ಘಟನೆಯಲ್ಲಿ ಶಾಂತಕುಮಾರ್ ಅವರ ಬೆನ್ನು ಮೂಳೆಗೆ ಗಂಭೀರ ಗಾಯಗಳಾಗಿದ್ದವು. ಅವರನ್ನು ಪಟಿಯಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುದ್ದಿ ತಿಳಿದ ಸಿಎಂ ಸಿದ್ದರಾಮಯ್ಯ ಅವರು ಶಾಂತಕುಮಾರ್‌ರನ್ನು ಏರ್ ಆಂಬ್ಯುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರಲು ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.
ಪ್ರತಿಭಟನೆಗೆ ತೆರಳುತ್ತಿದ್ದ ರೈತ ನಾಯಕ ಕುರುಬೂರು ಶಾಂತಕುಮಾರ್ ಕಾರು ಅಪಘಾತ
ಕರ್ನಾಟಕದ ರೈತ ಮುಖಂಡನಾಗಿ ಹಲವು ರೈತ ಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ನಾಯಕ ಕುರುಬೂರು ಶಾಂತಕುಮಾರ್ ಪಂಜಾಬ್‌ನಲ್ಲಿ ಆಯೋಜಿಸಿದ್ದ ರೈತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿತ್ತು. ತಕ್ಷಣವೇ ಕುರುಬೂರು ಶಾಂತಕುಮಾರ್ ಅವರನ್ನು ಪಂಜಾಬ್‌ನ ಪಟಿಯಾಲದ ರಾಜೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕೈ ಕೊಟ್ಟ ಕರೆಂಟ್, ಬಳ್ಳಾರಿಯ ಬಿಮ್ಸ್‌ನಲ್ಲಿ ಮೊಬೈಲ್ ಟಾರ್ಚ್‌ನಲ್ಲಿ ರೋಗಿಗೆ ಚಿಕಿತ್ಸೆ!
ಕರ್ನಾಟಕ ರಾಜ್ಯ ಸಂಯುಕ್ತ ಕಿಸಾನ್ ಮೋರ್ಚಾದ ಸಂಚಾಲಕ ಕುರುಬೂರು ಶಾಂತಕುಮಾರ್ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ(MSP) ಜಾರಿ ಸಂಬಂಧ ರೈತ ಪ್ರತಿಭಟನೆಯಲ್ಲಿ ಭಾಗವಹಿಸಲು ಪಂಜಾಬ್‌ಗೆ ತೆರಳಿದ್ದರು. ದೆಹಲಿಯಿಂದ ಪಂಜಾಬ್ ಕಡೆ ಪ್ರಯಾಣಿಸುವಾಗ ಈ ದುರಂತ ನಡೆದಿತ್ತು. ಹಲವು ಕಾರುಗಳ ನಡುವೆ ಅಪಘಾತವಾಗಿರುವ ಕಾರಣ ಶಾಂತಕಮಾರ್ ಅವರ ಎಡಗೈ, ಎಡ ಕಾಲು ಜೊತೆಗೆ ಸ್ಪೈನಲ್ ಕಾರ್ಡ್ ಗೆ ಕೂಡ ಗಂಭೀ ಗಾಯವಾಗಿದೆ ಎಂದು ತಿಳಿದುಬಂದಿದೆ. ಎಸ್ಕಾರ್ಟ್ ವಾಹನ ಜೊತೆ ತೆರಳುತ್ತಿದ್ದ ವೇಳೆ ಮುಂದಿನ ವಾಹನ ಅಪಘಾತಕ್ಕೀಡಾಗಿದೆ. ಹೀಗಾಗಿ ಶಾಂತಕುಮಾರ್ ಪ್ರಯಾಣಿಸುತ್ತಿದ್ದ ಕಾರು ಚಾಲಕ ತಕ್ಷಣ ಬ್ರೇಕ್ ಹಾಕಿದ್ದಾನೆ. ಇದರ ಪರಿಣಾಮ ಹಿಂದಿನಿಂದ ಬರುತ್ತಿದ್ದ 5ಕ್ಕೂ ಹೆಚ್ಚು ಕಾರುಗಳು ಏಕಕಾಲಕ್ಕೆ ಸರಣಿ ಅಪಘಾತಕ್ಕೀಡಾಗಿ ಈ ಅವಘಡ ನಡೆದಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ