'ಮೊಟ್ಟೆ ಅಟ್ಯಾಕ್' ಸಿನಿಮಾ ರಚನೆ, ನಿರ್ಮಾಣ ಮುನಿರತ್ನ ಅವರದ್ದೇ; ಕುಸುಮಾ ಹನುಮಂತರಾಯಪ್ಪ!

Published : Dec 25, 2024, 05:37 PM ISTUpdated : Dec 25, 2024, 06:17 PM IST
'ಮೊಟ್ಟೆ ಅಟ್ಯಾಕ್' ಸಿನಿಮಾ ರಚನೆ, ನಿರ್ಮಾಣ ಮುನಿರತ್ನ ಅವರದ್ದೇ; ಕುಸುಮಾ ಹನುಮಂತರಾಯಪ್ಪ!

ಸಾರಾಂಶ

ಶಾಸಕ ಮುನಿರತ್ನ ಅವರ ಮೇಲಿನ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ತಿರುಗೇಟು ನೀಡಿದ್ದಾರೆ. ಮೊಟ್ಟೆ ಎಸೆತ ಪ್ರಹಸನವನ್ನು ಮುನಿರತ್ನ ಸ್ವತಃ ರಚಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಜನರ ಸಿಂಪತಿಗಾಗಿ ಈ ನಾಟಕ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.

ಬೆಂಗಳೂರು (ಡಿ.25): ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ತಿರುಗೇಟು ನೀಡಿದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಅವರು ಸಾಮಾಜಿಕ ಜಾಲತಾಣದ ಮೂಲಕ ತಿರುಗೇಟು ನೀಡಿದ್ದಾರೆ. ಅತ್ಯಾಚಾರ ಹಾಗೂ ಚಾತಿ ನಿಂದನೆ ಪ್ರಕರಣದ ಆರೋಪಿ ಆಗಿರುವ ಶಾಸಕ ಮುನಿರತ್ನ ಜನರಿಂದ ಸಿಂಪತಿ ಗಿಟ್ಟಿಸಿಕೊಳ್ಳಲು 'ಮೊಟ್ಟೆ ಅಟ್ಯಾಕ್' ಪ್ರಹಸನ ಮಾಡಿದ್ದಾರೆ. ಆದರೆ, ಈ ಮೊಟ್ಟ ಅಟ್ಯಾಕ್ ಚಿತ್ರದ ರಚನೆ, ನಿರ್ಮಾಣ ಅವರದ್ದೇ ಎಂದು ಕುಸುಮಾ ಹನುಮಂತರಾಯಪ್ಪ ಅವರು ಟೀಕೆ ಮಾಡಿದ್ದಾರೆ.

ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, 'ಶಾಸಕ ಮುನಿರತ್ನ ಅವರ ಮೇಲಿನ 'ಮೊಟ್ಟೆ ಅಟ್ಯಾಕ್' ಚಿತ್ರದ ರಚನೆ ಹಾಗೂ ನಿರ್ಮಾಣ ಸ್ವತಃ ಅವರದ್ದೇ, ದಲಿತರನ್ನು ತುಚ್ಚವಾಗಿ ನಿಂದಿಸಿ, ಒಕ್ಕಲಿಗ ಗುತ್ತಿಗೆದಾರನ ಕುಟುಂಬದ ಹೆಣ್ಣು ಮಕ್ಕಳ ಬಗ್ಗೆ ಅವಹೇಳನ ಮಾಡಿದ್ದ ಧ್ವನಿ ಎಫ್‌ಎಸ್‌ಎಲ್‌ ರಿಪೋರ್ಟ್(FSL report)ನಲ್ಲಿ ಅವರದ್ದೇ ಎಂದು ಸಾಬೀತಾದ ಬೆನ್ನಲ್ಲೇ ತರಹೇವಾರಿ ನಾಟಕಗಳು ಶುರುವಾಗಿದೆ.

ರಾಜ್ಯದ ಜನರೆದುರು ತನ್ನ ನಿಜರೂಪ ಬೆತ್ತಲಾದ ನಂತರ ಸಿಂಪತಿ ಗಿಟ್ಟಿಸಿಕೊಳ್ಳಲು 'ಇಮೇಜ್ ಬಿಲ್ಡಿಂಗ್' ಆಕ್ಟಿವಿಟಿಯ ಒಂದು ಭಾಗವೇ ಇಂದಿನ ಪ್ರಹಸನಗಳು. ಈತನ ಸ್ಕ್ರಿಪ್ಟೆಡ್ ಸ್ಟೋರಿಗಳು ಅಲ್ಪ ವಿರಾಮದ ಬಳಿಕ ಮತ್ತೆ ಚಾಲ್ತಿಗೆ ಬಂದಿವೆ. ಮಹಿಳೆಯರಿಗೆ ರಾಜಕೀಯದಲ್ಲಿ ಆದ್ಯತೆಯೇ ಕಡಿಮೆ ಇಂತಹ ಸನ್ನಿವೇಶದಲ್ಲಿ ಸ್ವಚ್ಚ ರಾಜಕಾರಣದ ಮೂಲಕ ಸ್ವಾಸ್ಥ್ಯ ಸಮಾಜದ ನಿರ್ಮಾಣದ ಕನಸುಗಳಿಗೆ ಬೆಲೆಯಿಲ್ಲವೆನಿಸುತ್ತದೆ. ಈ ನಾಟಕಗಳನ್ನು ಗಮನಿಸಿದರೆ ಕೊಚ್ಚೆಯಲ್ಲಿ ಹೊರಳಾಡುವ ಹಂದಿಯ ಜೊತೆ ಹಂದಿಗಳಾಗಿಯೇ ಇರಬೇಕಾ ಎಂಬ ಪ್ರಶ್ನೆಯ ಜೊತೆ ಅಸಹ್ಯ ಮೂಡುತ್ತಿದೆ.

ಇದನ್ನೂ ಓದಿ: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಹೊಡೆದ ಕಾಂಗ್ರೆಸ್ ಕಾರ್ಯಕರ್ತರು; ಇಲ್ಲಿದೆ ಇಂಚಿಂಚು ಮಾಹಿತಿ!

ಮಾಡಿದ್ದುಣ್ಣೋ ಮಹಾರಾಯ ಎಂಬಂತೆ ಈತನ ಪಾಪದ ಕೆಲಸಗಳಿಗೆ ತಕ್ಕ ಶಾಸ್ತಿ ಆಗೇ ಆಗುತ್ತದೆ. ಆದರೆ, ತನ್ನ ತಪ್ಪು ಮುಚ್ಚಿಕೊಳ್ಳಲು ನನ್ನ ಹೆಸರನ್ನು ವಿನಾಕಾರಣ ಎಳೆದು ತರುವುದು ಎಷ್ಟು ಸರಿ? ಇಂದಿನ ಪ್ರಹಸನದ ಹಿಂದಿನ ದುರುದ್ದೇಶಗಳನ್ನು ಅರಿಯದೆ ಈತನ ಕತೆಗಳನ್ನು ನಂಬುವಷ್ಟು ನಮ್ಮ ಜನರು ದಡ್ಡರೂ, ಮೂರ್ಖರೂ ಅಲ್ಲ. ಕಾಲಾಯ ತಸ್ಮೈ ನಮಃ!' #ನಿಮ್ಮಕುಸುಮ ಎಂದು ಪೋಸ್ಟ್ ಮಾಡಿಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

112 ಹುದ್ದೆ ನೇಮಕಾತಿ ಮುಂದುವರಿಕೆಗೆ ಕೆಪಿಎಸ್ಸಿಗೆ ನೀಡಿದ್ದ ಅನುಮತಿ ವಾಪಸ್!
ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌