ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರಿಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಬೆಂಗಳೂರು (ಫೆ.21) : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರಿಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಸೋಮವಾರ ವಿಧಾನಸೌಧ(Vidhanasoudha)ದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(CM Basavaraj Bommai) ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಶಿವಮೊಗ್ಗ ಏರ್‌ಪೋರ್ಟ್‌ಗೆ ರಾಷ್ಟ್ರಕವಿ ಕುವೆಂಪು ಹೆಸರು: ಯಡಿಯೂರಪ್ಪ ಸ್ಪಷ್ಟನೆ
ಇದೇ ತಿಂಗಳು 27ರಂದು ಶಿವಮೊಗ್ಗ ವಿಮಾನ ನಿಲ್ದಾಣ(Shivamogga airport)ವನ್ನು ಪ್ರಧಾನಿ ನರೇಂದ್ರ ಮೋದಿ(PM Narendra Modi) ಉದ್ಘಾಟಿಸಲಿದ್ದಾರೆ(Inauguration). ಈ ಮೊದಲು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ(BS Yadiyurappa) ಅವರ ಹೆಸರನ್ನು ಇಡುವ ಬಗ್ಗೆ ಚರ್ಚೆ ನಡೆದಿತ್ತು. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲೂ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ, ಸ್ವತಃ ಯಡಿಯೂರಪ್ಪ ಅವರೇ ತಮ್ಮ ಹೆಸರು ಇಡಲು ನಿರಾಕರಿಸಿದ್ದಲ್ಲದೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಇಡಲು ಸಲಹೆ ನೀಡಿದ್ದರು. ಅವರ ಈ ಸಲಹೆಯನ್ನು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಸೇರಿದಂತೆ ಅನೇಕರು ಸ್ವಾಗತಿಸಿ ಮೆಚ್ಚುಗೆ ಸೂಚಿಸಿದ್ದರು. ಇದೀಗ ಅಂತಿಮವಾಗಿ ಸಚಿವ ಸಂಪುಟ ಸಭೆಯಲ್ಲಿ ರಾಷ್ಟ್ರಕವಿ ಕುವೆಂಪು ಹೆಸರನ್ನು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಇಡಲು ನಿರ್ಧರಿಸಲಾಗಿದೆ.
ಬಿಎಸ್‌ವೈಗೆ ಬರ್ತ್‌ಡೇ ಗಿಫ್ಟ್, ಫೆ.27ಕ್ಕೆ ಪ್ರಧಾನಿ ಮೋದಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ!
ಇದೇ ವೇಳೆ, ಶಿವಮೊಗ್ಗ ರೈಲ್ವೆ ನಿಲ್ದಾಣ(Shivamogga railway)ಕ್ಕೆ ಕೆಳದಿ ಶಿವಪ್ಪ ನಾಯಕ(Keladi shivappa nayaka)ನ ಹೆಸರು ಇರಿಸಲು ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದೆ.