ರಾಜ್ಯದಲ್ಲಿ ಮಳೆ ಕೊರತೆ, ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವೇ ಇಲ್ಲ: ಸಚಿವ ಭೋಸರಾಜು

Published : Aug 15, 2023, 04:24 PM IST
ರಾಜ್ಯದಲ್ಲಿ ಮಳೆ ಕೊರತೆ, ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವೇ ಇಲ್ಲ: ಸಚಿವ ಭೋಸರಾಜು

ಸಾರಾಂಶ

ರಾಜ್ಯದಲ್ಲಿ ಮಳೆ ಕಡಿಮೆ ಇರುವುದರಿಂದ ತಮಿಳುನಾಡಿಗೆ ಸದ್ಯಕ್ಕೆ ನೀರು ಬಿಡಲು ಸಾಧ್ಯವಿಲ್ಲ ಎಂದು ಸಣ್ಣ ನೀರಾವರಿ ಮತ್ತು ತಂತ್ರಜ್ನಾನ ಇಲಾಖೆ ಹಾಗೂ ಕೊಡಗು ಉಸ್ತುವಾರಿ ಸಚಿವ ಭೋಸರಾಜ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ.

ವರದಿ : ರವಿ. ಎಸ್ ಹಳ್ಳಿ ಏಷ್ಯಾನೆಟ್ ಸುವರ್ಣ ನ್ಯೂಸ್

ಕೊಡಗು (ಆ.15): ರಾಜ್ಯದಲ್ಲಿ ಮಳೆ ಕಡಿಮೆ ಇರುವುದರಿಂದ ತಮಿಳುನಾಡಿಗೆ ಸದ್ಯಕ್ಕೆ ನೀರು ಬಿಡಲು ಸಾಧ್ಯವಿಲ್ಲ ಎಂದು ಸಣ್ಣ ನೀರಾವರಿ ಮತ್ತು ತಂತ್ರಜ್ನಾನ ಇಲಾಖೆ ಹಾಗೂ ಕೊಡಗು ಉಸ್ತುವಾರಿ ಸಚಿವ ಭೋಸರಾಜ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಮಡಿಕೇರಿಯಲ್ಲಿ ನಡೆದ 77 ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಬಳಿಕ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದರು.

ಕರ್ನಾಟಕ ನಿತ್ಯ 24 ಸಾವಿರ ಕ್ಯೂಸೆಕ್ ನೀರನ್ನು ಹರಿಸಬೇಕು ಎಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿರುವುದಕ್ಕೆ ಸಂಬಂಧಿಸಿದಂತೆ ಸಚಿವ ಭೋಸರಾಜ್ ಮಾತನಾಡಿದರು. ತಮಿಳುನಾಡಿಗೆ ನೀರು ಬಿಡಬೇಕೋ, ಬೇಡವೋ ಎನ್ನುವ ವಿಷಯ ಪ್ರಕೃತಿಯನ್ನು ಆಧಾರಿಸಿರುತ್ತದೆ ಎಂದಿದ್ದಾರೆ. ಅರ್ಥಾತ್ ಮಳೆ ಬಂದರೆ ನೀರು ಬಿಡುವುದಾಗಿ ಹೇಳಿದ್ದಾರೆ.

ಕಾವೇರಿ ನೀರಿಗಾಗಿ ಮತ್ತೆ ಕ್ಯಾತೆ, 113 ಪುಟಗಳ ಅರ್ಜಿ ಹಿಡಿದು ಸುಪ್ರೀಂ ಕದ ತಟ್ಟಿದ ತಮಿಳುನಾಡು!

ಮುಂದುವರಿದು ಮಾತಾನಾಡಿರುವ ಅವರು ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಕೂಡ ಸ್ಪಷ್ಟವಾಗಿ ಹೇಳಿದ್ದಾರೆ. ರಾಜ್ಯದ ರೈತರು, ಜನತೆಯ ಹಿತವೇ ಮುಖ್ಯ ಎಂದಿದ್ದಾರೆ. ಹೀಗಾಗಿ ಸದ್ಯಕ್ಕೆ ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ. ಮೊನ್ನೆಯಷ್ಟೇ ಕಾವೇರಿ ಕೊಳ್ಳದ ನೀರು ಹಂಚಿಕೆಗೆ ಸಂಬಂಧಿಸಿದಂತೆ ನೂತನ ಸಮಿತಿ ರಚನೆಯಾಗಿದ್ದು, ಮಡಿಕೇರಿ ಶಾಸಕ ಮಂತರ್ ಗೌಡ ಅವರನ್ನೇ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಈ ಸಭೆಯಲ್ಲೂ ಚರ್ಚಿಸಿ ರೈತರಿಗಾಗಿ ನಾಲೆಗಳಿಗೆ ನೀರು ಹರಿಸಲು ನಿರ್ಧರಿಸಲಾಗಿದೆ. ಸದ್ಯದಲ್ಲೇ ನಾಲೆಗಳಿಗೆ ನೀರು ಬಿಡಲಾಗುವುದು ಎಂದು ಎಂದಿದ್ದಾರೆ.

ಇನ್ನು ಮೂಲತಃ ಕಾಂಗ್ರೆಸಿಗರಾಗಿರುವ ಕೇಂದ್ರ ರಾಜ್ಯಖಾತೆ ಸಚಿವ ಭಗವಂತ್ ಕೂಬಾ ಅವರ ಜೊತೆಗೆ ಗೂಂಡಾಗಳಿದ್ದಾರೆ. ಭಗವಂತ್ ಕೂಬಾ ಅವರ ಸಂಸ್ಕೃತಿಯೇ ಅಂತಹದ್ದು. ಅವರಿಂದ ನನಗೆ ಜೀವ ಬೆದರಿಕೆ ಇದೆ ಎಂದಿರುವ ಮಾಜಿ ಸಚಿವ ಪ್ರಭುಚೌಹಾಣ್ ಅವರಿಗೆ ಸಣ್ಣ ನೀರಾವರಿ ಮತ್ತು ತಂತ್ರಜ್ನಾನ ಇಲಾಖೆ ಸಚಿವ ಭೋಸರಾಜ್ ತಿರುಗೇಟು ನೀಡಿದ್ದಾರೆ. 

ಬಿಜೆಪಿ ಶಿಸ್ತಿನ ಪಕ್ಷ, ಧರ್ಮಾಧಾರಿತ ಪಕ್ಷ ಮತ್ತು ದೇಶದ ಹಿತ ಕಾಯುವ ಪಕ್ಷ ಎಂದೆಲ್ಲಾ ಹೇಳಿಕೊಳ್ಳುತ್ತದೆ. ಆದರೆ ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಅವರದೇ ಪಕ್ಷದ ಹಿರಿಯ ಶಾಸಕರುಗಳೇ ಏನೆಲ್ಲಾ ಹೇಳಿದರು. ಮುಖ್ಯಮಂತ್ರಿ ಆಗುವುದಕ್ಕೆ ಎಷ್ಟು ಕೊಡಬೇಕು, ಮಂತ್ರಿಯಾಗುವುದಕ್ಕೆ ಏನು ಮಾಡಬೇಕು ಎಂದೆಲ್ಲಾ ಬಹಿರಂಗವಾಗಿ ಅಷ್ಟೊಂದು ಮಾತನಾಡಿದರು. ಆದರೂ ಅವರ ಮೇಲೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ.

ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ರಾಜ್ಯದ ರೈತರ ಹಿತ ಕಾಯುವಂತೆ ಸಿಎಂಗೆ ಬೊಮ್ಮಾಯಿ ಪತ್ರ

ಹೀಗಾಗಿ ಅವರದು ಎಲ್ಲಾ ಬರೀ ಅಧಿಕಾರಕ್ಕಾಗಿ ಕಿತ್ತಾಡುವ ಪಕ್ಷ ಎನ್ನುವುದು ಸ್ಪಷ್ಟ. ಆದ್ದರಿಂದ ಅವರದೇ ಗೂಂಡಾ ಸಂಸ್ಕೃತಿ ಎನ್ನುವುದು ಸ್ಪಷ್ಟ ಎಂದು ಸಚಿವ ಭೋಸರಾಜ್ ತಿರುಗೇಟು ನೀಡಿದ್ದಾರೆ. ಜುಲೈ ತಿಂಗಳ ಕೊನೆಯಲ್ಲಿ ಸುರಿದ ಭಾರೀ ಮಳೆಗೆ ಕೊಡುಗು ಜಿಲ್ಲೆಯಲ್ಲಿ ಮನೆ, ಬೆಳೆ ಸೇರಿದಂತೆ ಬರೋಬ್ಬರಿ 8.5 ಕೋಟಿ ರೂಪಾಯಿಯಷ್ಟು ನಷ್ಟ ಸಂಭವಿಸಿದೆ. ನಷ್ಟ ಸಂಭವಿಸಿ 15 ದಿನಗಳೇ ಕಳೆದರೂ ಜಿಲ್ಲೆಗೆ ಇದುವರೆಗೆ ಒಂದೇ ಒಂದು ನಯಾಪೈಸೆ ಪರಿಹಾರ ಬಿಡುಗಡೆಯಾಗಿಲ್ಲ. ಈಗಾಗಲೇ ಜಿಲ್ಲೆಯಲ್ಲಿ ಸಾಕಷ್ಟು ಮನೆಗಳು ಭಾರಿ ಮಳೆಗೆ ಹಾನಿಗೊಳಗಾಗಿವೆ. ಹಲವು ಮನೆಗಳು ಭಾಗಶಃ ಮುರಿದು ಬಿದ್ದಿದ್ದರೆ, ಕೆಲವು ಮನೆಗಳು ಸಂಪೂರ್ಣ ಹಾನಿಗೊಳಗಾಗಿವೆ.

ಇನ್ನು ಕಾಫಿ, ಮೆಣಸು ಸೇರಿದಂತೆ ಕೃಷಿ ಬೆಳೆಗಳು ಹಾಳಾಗಿವೆ. ಆದರೂ ಇದುವರೆಗೆ ಒಂದು ರೂಪಾಯಿಯೂ ಪರಿಹಾರದ ಹಣ ಬಿಡುಗಡೆಯಾಗಿಲ್ಲ. ಈ ಕುರಿತು ಉಸ್ತುವಾರಿ ಸಚಿವ ಭೋಸರಾಜ್ ಅವರನ್ನು ಕೇಳಿದರೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಮಾಡಲಾಗಿದೆ. ಜೊತೆಗೆ ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ನಷ್ಟಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲೆಯಲ್ಲೂ ಸಭೆ ನಡೆಸಿ ಕೂಡಲೇ ವರದಿ ನೀಡುವಂತೆ ಸೂಚಿಸಿದ್ದೇನೆ. ವರದಿ ದೊರೆತ ಕೂಡಲೇ ಪರಿಹಾರ ಹಣ ಬಿಡುಗಡೆ ಮಾಡಲಾಗುವುದು ಎಂದು ಸಚಿವ ಭೋಸರಾಜ್ ತಿಳಿಸಿದ್ದಾರೆ. ಆದರೆ ಮನೆ, ಬೆಳೆಗಳನ್ನು ಕಳೆದುಕೊಂಡಿರುವ ರೈತರು, ಜನರು ಮಾತ್ರ ಸಮಸ್ಯೆಗೆ ಸಿಲುಕಿದ್ದು, ಕಷ್ಟ ಅನುಭವಿಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!