ಮಳೆ ಕೊರತೆ 50 ವರ್ಷದಲ್ಲೇ ಅಧಿಕ: ಅರ್ಧ ರಾಜ್ಯಕ್ಕೆ ಕುಡಿವ ನೀರಿನ ಬರ!

By Kannadaprabha News  |  First Published Jun 27, 2023, 1:54 AM IST

‘ಮಳೆಯಾಗದ ಹಿನ್ನೆಲೆಯಲ್ಲಿ ರಾಜ್ಯದ ಹದಿನಾರು ಜಿಲ್ಲೆಗಳಲ್ಲಿ ನೀರಿನ ಕೊರತೆ ಉಂಟಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಹೀಗಾಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಕೂಡಲೇ ತಾಲೂಕು ಪ್ರವಾಸ ಕೈಗೊಂಡು ನೀರಿನ ಸಮಸ್ಯೆ ನಿವಾರಿಸಬೇಕು’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.


ಬೆಂಗಳೂರು (ಜೂ.27) ‘ಮಳೆಯಾಗದ ಹಿನ್ನೆಲೆಯಲ್ಲಿ ರಾಜ್ಯದ ಹದಿನಾರು ಜಿಲ್ಲೆಗಳಲ್ಲಿ ನೀರಿನ ಕೊರತೆ ಉಂಟಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಹೀಗಾಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಕೂಡಲೇ ತಾಲೂಕು ಪ್ರವಾಸ ಕೈಗೊಂಡು ನೀರಿನ ಸಮಸ್ಯೆ ನಿವಾರಿಸಬೇಕು’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ(Priyank kharge ITBT Minister) ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಮಳೆ ಕೊರತೆ ಹಿನ್ನೆಲೆಯಲ್ಲಿ ಎದುರಾಗಬಹುದಾದ ಕುಡಿಯುವ ನೀರಿನ ಸಮಸ್ಯೆ ಸಂಬಂಧ ರಾಜ್ಯದ ಎಲ್ಲ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಸಚಿವರು ಚರ್ಚಿಸಿದರು.

Tap to resize

Latest Videos

ಕೊಪ್ಪಳ: ಕೈಕೊಟ್ಟಮಳೆ, ನಗರಗಳತ್ತ ಗುಳೆ ಹೊರಟ ರೈತರು!

ಈ ವೇಳೆ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್‌.ಕೆ.ಅತೀಕ್‌ ಅವರು, ರಾಜ್ಯದ 16 ಜಿಲ್ಲೆಗಳಲ್ಲಿ ನೀರಿನ ಕೊರತೆ ಉಂಟಾಗಿದೆ. ಮುಖ್ಯವಾಗಿ ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲೂ ಅಂತರ್ಜಲ ಮಟ್ಟಕುಸಿದು ನೀರಿನ ಕೊರತೆ ಕಾಣಿಸಿಕೊಂಡಿದೆ. ನಾಲ್ಕು ಜಿಲ್ಲೆಗಳಲ್ಲಿ ಮಾತ್ರ ಪರಿಸ್ಥಿತಿ ಉತ್ತಮವಾಗಿದೆ. ಉಳಿದ ಜಿಲ್ಲೆಗಳಲ್ಲಿ ಅಂತರ್ಜಲ ಕುಸಿತದಿಂದಾಗಿ ಕುಡಿಯುವ ನೀರಿಗೆ ಆದ್ಯತೆ ನೀಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಮಾಹಿತಿ ನೀಡಿದರು.

ತಕ್ಷಣದ ಕ್ರಮಕ್ಕೆ ಸಚಿವರ ಸೂಚನೆ:

ಮಳೆ ಅಭಾವದಿಂದಾಗಿ ಗ್ರಾಮೀಣ ಭಾಗಗಳ ಕೆಲವು ಸ್ಥಳಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಹೀಗಾಗಿ ಎಲ್ಲಾ ಜಿಲ್ಲಾ ಪಂಚಾಯತ್‌ ಮುಖ್ಯ ನಿರ್ವಹಣಾಧಿಕಾರಿಗಳು ತಾಲೂಕು ಪ್ರವಾಸ ಕೈಗೊಳ್ಳಬೇಕು. ರಾಜ್ಯದ ಜನರಿಗೆ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಸಾರ್ವಜನಿಕರು ನೀಡುವ ದೂರುಗಳ ಪರಿಹಾರಕ್ಕೆ ಆದ್ಯತೆ ನೀಡಬೇಕು. ನೀರಿನ ಅಭಾವ, ಕಲುಷಿತ ನೀರು ಸರಬರಾಜು ಕುರಿತಂತೆ ಬರುವ ದೂರುಗಳಿಗೆ ಪರಿಹಾರ ಕಲ್ಪಿಸಲು ಒತ್ತು ನೀಡಬೇಕು. ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲು ಜಿಲ್ಲಾ ಪಂಚಾಯಿತಿಗಳಲ್ಲಿ ಹಣದ ಕೊರತೆ ಉಂಟಾದರೆ ಹೆಚ್ಚುವರಿ ಅನುದಾನಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಅಧಿಕಾರಿಗಳು ರಾಜ್ಯಾದ್ಯಂತ ಮಳೆಯ ಕೊರತೆ ಕಾಡುತ್ತಿದೆ. ಕಳೆದ 50 ವರ್ಷಗಳಲ್ಲೇ ಅತಿ ಹೆಚ್ಚು ಮಳೆ ಕೊರತೆ ಕಾಡುತ್ತಿದೆ. ಕಳೆದ ಒಂದು ವಾರದಿಂದ ಬಹುತೇಕ ಜಿಲ್ಲೆಗಳಲ್ಲಿ ಅಲ್ಪ-ಸ್ವಲ್ಪ ಮಳೆಯಾಗಿದೆ. ಮಳೆಯ ಸ್ಥಿತಿ ಸುಧಾರಣೆ ಆಗುವ ಸಾಧ್ಯತೆಯಿದೆ ಎಂದು ತಿಳಿಸಿದರು.

ಜತೆಗೆ ರಾಜ್ಯದ 31 ಜಿಲ್ಲೆಗಳಲ್ಲಿ 24 ಜಿಲ್ಲೆಗಳ 424 ಗ್ರಾಮಗಳಿಗೆ 365 ಟ್ಯಾಂಕರ್‌ಗಳ ಮೂಲಕ 969 ಟ್ರಿಪ್‌ ನೀರು ಸರಬರಾಜು ಮಾಡಲಾಗುತ್ತಿದೆ. ಇದರೊಂದಿಗೆ 431 ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆದು 357 ಗ್ರಾಮಗಳಿಗೆ ನೀರು ಪೂರೈಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕೇಂದ್ರಕ್ಕೆ ಯಡಿಯೂರಪ್ಪ ಪತ್ರ ಬರೆದು ಅಕ್ಕಿ ಕೊಡಿ​ಸ​ಲಿ: ಸಚಿವ ಪ್ರಿಯಾಂಕ್‌ ಖರ್ಗೆ

ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್‌, ಕರ್ನಾಟಕ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕ ಗಂಗಾಧರಸ್ವಾಮಿ, ಮುಖ್ಯ ಎಂಜಿನಿಯರ್‌ ಎಜಾಜ್‌ ಹುಸೇನ್‌ ಹಾಜರಿದ್ದರು.

ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಚಾಕಲಬ್ಬಿ ಊರಿನಲ್ಲಿ ನೀರಿಗಾಗಿ ಬವಣೆ

click me!