ಲಕ್ಷ್ಮೀ ಹೆಬ್ಬಾಳ್ಕರ್‌ಗೆ ವೇ* ಪದಬಳಕೆ ಆರೋಪ: ಸಿಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ 15 ಜನರ ಬಂಧನ!

By Sathish Kumar KH  |  First Published Dec 19, 2024, 3:51 PM IST

ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿ.ಟಿ. ರವಿ ಅವರು ವೇ* ಎಂದು ಬಳಕೆ ಮಾಡಿದ ಆರೋಪ ಕೇಳಿಬಂದಿದೆ. ಇದರ ಬೆನ್ನಲ್ಲೇ ಲಕ್ಷ್ಮೀ ಹೆಬ್ಬಾಳ್ಕರ್ ಅವರ 15 ಜನ ಬೆಂಬಲಿಗರು ಸಿ.ಟಿ. ರವಿ ಅವರ ಕಾರಿಗೆ ಮುತ್ತಿಗೆ ಹಾಕಿ ಹಲ್ಲೆಗೆ ಯತ್ನಿಸಿದ್ದು, ಪೊಲೀಸರು ಬಂಧಿಸಿದ್ದಾರೆ.


ಬೆಳಗಾವಿ (ಡಿ.19): ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದ ವೇಳೆ ವಿಧಾನ ಪರಿಷತ್ತಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ವೇ* ಎಂಬ ಬಳಕೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ಇದರ ಬೆನ್ನಲ್ಲಿಯೇ ಪರಿಶೀಲನೆ ಕಾರ್ಯ ನಡೆಯುತ್ತಿರುವ ನಡುವೆಯೇ ಲಕ್ಷ್ಮೀ ಹೆಬ್ಬಾಳ್ಕರ್ ಅವರ 15 ಜನ ಬೆಂಬಲಿಗರು ಸಿ.ಟಿ. ರವಿ ಅವರ ಕಾರಿಗೆ ಮುತ್ತಿಗೆ ಹಾಕಿ ಹಲ್ಲೆಗೆ ಯತ್ನಿಸಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿಯ ಅಧಿವೇಶನದ ವಿಐಪಿ ಗೆಟ್ ಬಳಿ ಸಿ.ಟಿ. ರವಿ ಅವರು ಬಂದಾಗ ಗಲಾಟೆಯಾಗಿದೆ. ಈ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆಂಬಲಿಗರು ಸಿ.ಟಿ. ರವಿ ಮೇಲೆ ಹಲ್ಲೆಗೆ ಯತ್ನ ಮಾಡಿದ್ದಾರೆ. ಸಿ.ಟಿ. ರವಿ ಅವರು ಕಾರಿನಿಂದ ಕೆಳಗೆ ಇಳಿಯುತ್ತಿದ್ದಂತೆ ಏಕಾಏಕಿ ರವಿ ಅವರ ಕಾರಿನತ್ತ ನುಗ್ಗಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಿ.ಟಿ. ರವಿ ಕಾರು ಮುತ್ತಿಗೆ ಹಾಕಿದ ಕಾರ್ಯಕರ್ತರು ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ಅಲ್ಲಿದ್ದ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ಹಿಡಿದು ಹಿಂದಕ್ಕೆ ತಳ್ಳಿದ್ದಾರೆ.

Tap to resize

Latest Videos

undefined

ಇದನ್ನೂ ಓದಿ: ಲಕ್ಷ್ಮೀ ಹೆಬ್ಬಾಳ್ಕರ್‌ಗೆ ವೇ* ಎಂದರಾ ಸಿ.ಟಿ.ರವಿ; ಕಣ್ಣೀರಿಡುತ್ತಾ ಹೊರನಡೆದ ಸಚಿವೆ!

ಈ ವೇಳೆ ಸುಮಾರು 15ರ ಜನರು ಗುಂಪುಗೂಡಿ ಸಿ.ಟಿ. ರವಿ ಅವರ ಕಾರಿಗೆ ಗುದ್ದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೋರಾದ ಗಲಾಟೆ ಶುರುವಾಗುತ್ತಿದ್ದಂತೆ ಪೊಲೀಸರ ಭದ್ರತೆಯಲ್ಲಿ ಸಿ.ಟಿ. ರವಿ ಅವರು ಪರಿಷತ್ತಿನ ಕೋಣೆಯ ಆವರಣದೊಳಗೆ ಹೋಗಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ಹಿಂಬಾಲಿಸಿಕೊಂಡು ಹೋಗುವುದನ್ನು ಪೊಲೀಸರು ತಡೆದಿದ್ದಾರೆ. ಮುಂದುವರೆದು ಪೊಲೀಸರು ಸಿ.ಟಿ. ರವಿ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಸುಮಾರು 15 ಜನರನ್ನು ಬಂಧಿಸಿದ್ದಾರೆ.

ಘಟನೆಯ ಹಿನ್ನೆಲೆಯೇನು?
ಬೆಳಗಾವಿಯ ಅಧಿವೇಶನದ ವೇಳೆ ವಿಧಾನ ಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೂಡ ಸದಸ್ಯರ ಪ್ರಶ್ನೆಗಳಿಗೆ ಉತ್ತರ ನೀಡಲು ಬಂದಿದ್ದರು. ಈ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರಿಬ್ಬರೂ ಕೇಂದ್ರದಲ್ಲಿ ಅಮಿತ್ ಶಾ ಅವರು ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಬಾವಿಗಿಳಿದು ಪ್ರತಿಭಟನೆ ಮಾಡಲು ಮುಂದಾಗಿದ್ದರು. ಇದನ್ನು ವಿರೋಧಿಸಿ ಬಿಜೆಪಿ ಸದಸ್ಯರು ಕೂಡ ಅವರ ಕಾಂಗ್ರೆಸ್ ವಿರುದ್ಧವೇ ಪ್ರತಿಭಟನೆಗೆ ಮುಂದಾಗಿದ್ದರು.

ಇದನ್ನೂ ಓದಿ: ಆಂಜನೇಯ ದೇವಸ್ಥಾನಕ್ಕೆ ಬಂದ ದಲಿತರಿಗೆ ₹2.5 ಲಕ್ಷ ದಂಡ ಹಾಕಿದ ಗ್ರಾಮಸ್ಥರು; ಎಲ್ಲಿದೆ ಸರ್ಕಾರ, ಎಲ್ಲಿದೆ ಸಂವಿಧಾನ?

ಈ ವೇಳೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ಅವರು ಅಲ್ಲಿಯೇ ಇದ್ದ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರ ಬೆನ್ನಲ್ಲಿಯೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಣ್ಣೀರಿಡುತ್ತಾ ಪರಿಷತ್ ಸಭೆಯಿಂದ ಹೊರಗೆ ಹೋಗಿದ್ದು, ಸಭಾಪತಿ ಅವರ ಕಚೇರಿಗೆ ಹೋಗಿ ಕುಳಿತಿದ್ದಾರೆ. ಅಲ್ಲಿ ಸಭಾಪತಿ ಬಂದ ನಂತರ ಸಿ.ಟಿ. ರವಿ ವಿರುದ್ಧ ದೂರು ದಾಖಲಿಸಿ ಅವರನ್ನು ಅಮಾನತ್ತು ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಇದಾದ ನಂತರ ಸಿಟಿ ರವಿ ಪದ ಬಳಕೆ ಬಗ್ಗೆ ಆಡಿಯೋ ಮತ್ತು ವಿಡಿಯೋ ಮೂಲಕ ಪರಿಶೀಲನೆ ಮಾಡುವುದಕ್ಕೆ ಸಭಾಪರಿ ಅವರಿಂದ ಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ.

click me!