
ಉಡುಪಿ (ನ.2): 2024 ಜನವರಿ ತಿಂಗಳಲ್ಲಿ ಉಡುಪಿಯ ಶ್ರೀ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವ ನಡೆಯಲಿದೆ . ಪೂರ್ವಭಾವಿ ತಯಾರಿಗಳು ಈಗಾಗಲೇ ಆರಂಭವಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈ ನಾಡ ಹಬ್ಬಕ್ಕೆ ಮಹಾಪೋಷಕರಾಗಿದ್ದಾರೆ.
ಉಡುಪಿಯ ಶ್ರೀ ಪುತ್ತಿಗೆ ಪರ್ಯಾಯ ಸಮಿತಿಯ ಮಹಾ ಪೋಷಕರಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್(Minister Lakshmi hebbalkar) ಅವರನ್ನು ನೇಮಿಸಲಾಗಿದೆ. ಪುತ್ತಿಗೆ ಮಠದಲ್ಲಿ ನಡೆದ ಪರ್ಯಾಯೋತ್ಸವ ಪೂರ್ವಭಾವಿ ಸಭೆಯಲ್ಲಿ ಸಚಿವರನ್ನು ಪರ್ಯಾಯ ಸಮಿತಿಯ ಮಹಾಪೋಷಕರನ್ನಾಗಿ ಘೋಷಿಸಲಾಯಿತು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತಾಡುವ ವೇಳೆ ಕಿರಿಕ್, ನಿಮಗೊಂದು ಸ್ಕೀಂ ಮಾಡೋ ಚಿಂತನೆ ಇದೆ ಎಂದ ಕುಡುಕ!
ಬಳಿಕ ಮಾತನಾಡಿದ ಸಚಿವೆ ಹೆಬ್ಬಾಳ್ಕರ್, ಮುಂದಿನ ಜನವರಿಯಲ್ಲಿ ನಡೆಯಲಿರುವ ಶ್ರೀ ಪುತ್ತಿಗೆ ಪರ್ಯಾಯೋತ್ಸವಕ್ಕೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದಿಂದ ಪೂರ್ಣ ಪ್ರಮಾಣದ ಸಹಕಾರ ನೀಡಲಾಗುವುದು ಎಂದರು. ಮುಂದಿನ ಉಡುಪಿ ಭೇಟಿ ವೇಳೆ ಜಿಲ್ಲಾಡಳಿತದ ವತಿಯಿಂದ ಪರ್ಯಾಯೋತ್ಸವ ಸಂಬಂಧ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗುವುದು ಎಂದರು.
ಪುತ್ತಿಗೆ ಪರ್ಯಾಯೋತ್ಸವದಲ್ಲಿ ಪಾಲ್ಗೊಳ್ಳುವ ಅವಕಾಶವನ್ನು ಶ್ರೀ ಕೃಷ್ಣ ಪರಮಾತ್ಮ ನನಗೆ ಕರುಣಿಸಿದ್ದಾನೆ. ಪುತ್ತಿಗೆ ಮಠ ದೇಶ, ವಿದೇಶಗಳಲ್ಲೂ ಪ್ರಸಿದ್ಧಿ ಪಡೆದಿದೆ. ಹಿಂದೂ ಸಂಸ್ಕೃತಿ ಶ್ರೇಷ್ಠ ಸಂಸ್ಕೃತಿ, ಇದನ್ನು ಉಳಿಸಿ, ಬೆಳಸುವ ಕರ್ತವ್ಯ ನಮ್ಮದು. ನಮ್ಮ ಸಂಸ್ಕೃತಿಯನ್ನು ಪುತ್ತಿಗೆ ಶ್ರೀಗಳು ವಿದೇಶಿ ನೆಲದಲ್ಲಿ ಪಸರಿಸುತ್ತಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಯಾವುದೇ ರಾಜಕೀಯ ತರದೇ ಭಕ್ತಿಭಾವದಿಂದ ಪರ್ಯಾಯೋತ್ಸವದಲ್ಲಿ ಪಾಲ್ಗೊಳ್ಳೋಣ. ದೇಶ ವಿದೇಶಗಳಿಂದ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ಸಕಲ ವ್ಯವಸ್ಥೆಯನ್ನು ಮಾಡೋಣ ಎಂದರು. ಪುತ್ತಿಗೆ ಪರ್ಯಾಯ ಸಮಿತಿ ಮಹಾ ಪೋಷಕರನ್ನಾಗಿ ನನ್ನನ್ನು ನೇಮಿಸಿದ್ದು, ಈ ಹುದ್ದೆಗೆ ತಕ್ಕಂತೆ ಕಾರ್ಯನಿರ್ವಹಿಸುವೆ ಎಂದು ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಭಗವದ್ಗೀತೆ ಯಾಕೆ ಓದಬೇಕು ? ಸಾಮಾನ್ಯ ವ್ಯಕ್ತಿ ಇದರ ಸಾರವನ್ನು ಪಡೆದುಕೊಳ್ಳುವುದು ಹೇಗೆ ?
ಈ ವೇಳೆ ಪುತ್ತಿಗೆ ಮಠದ ದಿವಾನರಾದ ನಾಗರಾಜ್ ಆಚಾರ್ಯ, ಪರ್ಯಾಯ ಸ್ವಾಗತ ಸಮಿತಿಯ ಅಧ್ಯಕ್ಷ ಹಾಗು ಮಾಜಿ ಶಾಸಕ ರಘುಪತಿ ಭಟ್, ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ದೇವಿ ಪ್ರಸಾದ್ ಶೆಟ್ಟಿ ಬೆಳಪು, ಸ್ವಾಗತ ಸಮಿತಿಯ ಕೋಶಾಧಿಕಾರಿ ರಂಜನ್ ಕಲ್ಕೂರ ಹಾಗೂ ಪ್ರಸಾದ್ ಕಾಂಚನ್ ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ