
ಹುಬ್ಬಳ್ಳಿ (ಅ.26): 'ಹುಲಿ ಉಗುರ'ಪ್ರಕರಣದಲ್ಲಿ ಕನ್ನಡ ಕಿರುತೆರೆ ರಿಯಾಲಿಟಿ ಶೋ ಬಿಗ್ ಬಾಸ್ 10 ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಬಂಧನ ಬಳಿಕ ಸ್ವಾಮೀಜಿ, ಸೆಲೆಬ್ರಿಟಿ, ರಾಜಕಾರಣಿಗಳು ಧರಿಸಿರುವ ಬಗ್ಗೆ ಒಂದೊಂದೇ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಹುಲಿ ಉಗುರು ಪ್ರಕರಣ ಇದೀಗ ಕಾಂಗ್ರೆಸ್ ಕೊರಳಿಗೆ ಕೈಹಾಕಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯ ಹುಬ್ಬಳ್ಳಿ ಕಾಂಗ್ರೆಸ್ ಯುವ ಮುಖಂಡ ರಜತ್ ಉಳ್ಳಾಗಡ್ಡಿ ಕೊರಳಲ್ಲೂ ಹುಲಿ ಉಗುರು ಪೆಂಡೆಂಟ್ ಇರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಂತೋಷ್ ಬಂಧನವಾಯ್ತು, ಇವರ ಬಂಧನ ಯಾವಾಗ? ಕಾನೂನು ಎಲ್ಲರಿಗೂ ಒಂದೇ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಈ ಪ್ರಕರಣದಿಂದ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆಯಿದೆ.
ವರ್ತೂರು ಸಂತೋಷ್ ಬಂಧನದ ಹಿಂದೆ ಷಡ್ಯಂತ್ರ, ಒರಿಜಿನಲ್ ಅಲ್ಲ ಅಂತಾ ಡೌಟಿದೆ ಎಂದ ತಾಯಿ
ಮದುವೆ ಸಮಯದಲ್ಲಿ ಪೋಟೋ ಶೂಟ್ ನಲ್ಲಿ ಹುಲಿ ಉಗುರು ಮಾದರಿ ಚೈನ್ ಧರಿಸಿದ್ದ ರಜತ್ ಪೋಟೋ ಈಗ ವೈರಲ್ ಆಗಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಸಹೋದರಿ ಮಗಳನ್ನು ಮದುವೆಯಾಗಿರುವ ರಜತ್ ಉಳ್ಳಾಗಡ್ಡಿ ಮಠ. ರಾಜಕೀಯ ವಲಯದಲ್ಲಿ ಲಕ್ಷ್ಮಿ ಹೆಬ್ಬಾಳಕರ ಅಳಿಯ ಅಂತಲೇ ಫೇಮಸ್. ಈ ಹಿಂದೆ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಆಗಿದ್ದ ರಜತ್. ಇದೀಗ ಹುಲಿ ಉಗುರು ಪೆಂಡೆಂಟ್ ಧರಿಸಿರುವ ವಿಚಾರಕ್ಕೆ ಪೇಚಿಗೆ ಸಿಲುಕಿಕೊಂಡಂತಾಗಿದೆ. ಪೆಂಡೆಂಟ್ ಧರಿಸಿದ ವಿಚಾರಕ್ಕೆ ಜಗ್ಗೇಶ್, ನಟ ದರ್ಶನ ಮನೆಮೇಲೆ ದಾಳಿ ಮಾಡಿರುವ ಅರಣ್ಯ ಇಲಾಖೆ ಇದೀಗ ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯ ರಜತ್ ಉಳ್ಳಾಗಡ್ಡಿ ಮನೆ ಮೇಲೂ ದಾಳಿ ಮಾಡುತ್ತಾ? ಭಾರೀ ಕುತೂಹಲ ಮೂಡಿಸಿದೆ.
3 ವರ್ಷಗಳ ಹಿಂದೆ ಹುಲಿ ಉಗುರು ಖರೀದಿಸಿದ ಬಗ್ಗೆ ಬಿಗ್‌ಬಾಸ್ ವರ್ತೂರ್ ಸಂತೋಷ್ ತಪ್ಪೊಪ್ಪಿಗೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ