ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನ, ಪ್ರವೇಶ ಶುಲ್ಕ ಯಾರಿಗೆ ಎಷ್ಟು?

Published : Aug 08, 2025, 07:46 PM IST
Lalbagh  Flower Show

ಸಾರಾಂಶ

ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣನವರ 218ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ. ಚೆನ್ನಮ್ಮ ಮತ್ತು ರಾಯಣ್ಣನವರ ಶೌರ್ಯ-ತ್ಯಾಗಗಳ ಸ್ಮರಣೆ.

ಬೆಂಗಳೂರು: ಲಾಲ್‌ಬಾಗ್‌ನ ಗಾಜಿನ ಮನೆಯಲ್ಲಿ ಆಯೋಜಿಸಿರುವ 218ನೇ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಈ ಬಾರಿ ಪ್ರದರ್ಶನವು ವೀರ ರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜೀವನಗಾಥೆಯನ್ನು ಆಧಾರವಾಗಿಸಿಕೊಂಡಿದೆ.

ಪ್ರದರ್ಶನ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, "ಈ ಬಾರಿ ಫಲಪುಷ್ಪ ಪ್ರದರ್ಶನದ ಮೂಲಕ ಬ್ರಿಟಿಷರ ವಿರುದ್ಧ ಶೌರ್ಯದಿಂದ ಹೋರಾಡಿದ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಅವರ ಬಲಗೈಯಾದ ಸಂಗೊಳ್ಳಿ ರಾಯಣ್ಣ ಅವರಿಗೆ ಪುಷ್ಪಗೌರವ ಸಲ್ಲಿಸಲಾಗಿದೆ," ಎಂದು ಹೇಳಿದರು.

ಅವರು ಮುಂದುವರಿಸಿ, "ಚೆನ್ನಮ್ಮ ಅವರು ಮೊದಲನೇ ಯುದ್ಧದಲ್ಲಿ ಬ್ರಿಟಿಷರನ್ನು ಸೋಲಿಸಿದ್ದರು. ಆದರೆ ಎರಡನೇ ಯುದ್ಧದಲ್ಲಿ ಬಂಧಿತರಾದರು. ಸಂಗೊಳ್ಳಿ ರಾಯಣ್ಣ ಅವರನ್ನು ನ್ಯಾಯಾಲಯದ ಆದೇಶದಂತೆ ನೇಣಿಗೆ ಹಾಕಲಾಯಿತು. ವಿಶೇಷವೆಂದರೆ, ಅವರು ಹುಟ್ಟಿದ್ದು ಸ್ವಾತಂತ್ರ್ಯ ದಿನವಾದ ಆಗಸ್ಟ್ 15ರಂದು, ನೇಣಿಗೆ ಹಾಕಿದ್ದು ಸಂವಿಧಾನ ಜಾರಿಗೆ ಬಂದ ಜನವರಿ 26ರಂದು. ಇವೆರಡೂ ಕಾಕತಾಳೀಯ ದಿನಾಂಕಗಳು," ಎಂದು ವಿವರಿಸಿದರು.

ಚೆನ್ನಮ್ಮ ಜಯಂತಿ ಆಚರಣೆ ಘೋಷಿಸಿದವರು ನಾನೇ: "ರಾಜ್ಯಾದ್ಯಂತ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಿಸುವ ನಿರ್ಧಾರವನ್ನು ಸರ್ಕಾರದಿಂದ ಘೋಷಿಸಿದ್ದು ನಾನೇ. ಹಾಗೆಯೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರಾಭಿವೃದ್ಧಿಗೆ ಪ್ರಾಧಿಕಾರವನ್ನು ರಚಿಸಿ, 2024–25ನೇ ಸಾಲಿನಲ್ಲಿ ₹15.48 ಕೋಟಿ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ. ಸಂಗೊಳ್ಳಿಯಲ್ಲಿ 110 ಎಕರೆ ಜಾಗವನ್ನು ಅಭಿವೃದ್ಧಿಪಡಿಸಲಾಗುತ್ತಿದೆ," ಎಂದು ಸಿಎಂ ಹೇಳಿದರು.

218ನೇ ಫಲಪುಷ್ಪ ಪ್ರದರ್ಶನದ ವೈಶಿಷ್ಟ್ಯಗಳು:

  • ಆಗಸ್ಟ್ 15ರವರೆಗೆ ಪ್ರತಿದಿನ ಬೆಳಿಗ್ಗೆ 9.15ರಿಂದ ಸಂಜೆವರೆಗೆ ಪ್ರದರ್ಶನ
  • ಕಿತ್ತೂರು ಕೋಟೆಯ 18 ಅಡಿ ಎತ್ತರ, 32 ಅಡಿ ಅಗಲದ ಮಾದರಿ ನಿರ್ಮಾಣ
  • ಕೋಟೆಯ ಒಳಭಾಗದಲ್ಲಿ ಫಲಪುಷ್ಪಗಳ ಮೂಲಕ ಸ್ವಾತಂತ್ರ್ಯ ಹೋರಾಟದ ಸ್ಮರಣೆ
  • ರಾಣಿ ಅಬ್ಬಕ್ಕದೇವಿ, ರಾಣಿ ಚೆನ್ನಾ ಭೈರಾದೇವಿ, ರಾಣಿ ಬೆಳವಾಡಿ ಮಲ್ಲಮ್ಮ, ರಾಣಿ ಕೆಳದಿ ಚೆನ್ನಮ್ಮ ಹಾಗೂ ಒನಕೆ ಓಬವ್ವ ಹೂವಿನ ಪ್ರತಿಮೆಗಳ ಅನಾವರಣ
  • ಸಾಮಾನ್ಯ ದಿನಗಳಲ್ಲಿ ವಯಸ್ಕರಿಗೆ ₹80, ಮಕ್ಕಳಿಗೆ ₹30 ಪ್ರವೇಶ ಶುಲ್ಕ
  • ಶನಿವಾರ, ಭಾನುವಾರ ಹಾಗೂ ರಜಾದಿನಗಳಲ್ಲಿ ವಯಸ್ಕರಿಗೆ ₹100, ಮಕ್ಕಳಿಗೆ ₹30 ಪ್ರವೇಶ ಶುಲ್ಕ

ಕಾರ್ಯಕ್ರಮದಲ್ಲಿ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ, ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್, ಶಾಸಕ ಉದಯ ಬಿ. ಗರುಡಾಚಾರ್, ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ಶಮ್ಲಾ ಇಕ್ಬಾಲ್, ನಿರ್ದೇಶಕ ಡಾ. ರಮೇಶ್ ಹಾಗೂ ಜಂಟಿ ನಿರ್ದೇಶಕ ಡಾ. ಎಂ. ಜಗದೀಶ್ ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್