
ವಿಜಯಪುರ (ಸೆ.7): ಒಳಮೀಸಲಾತಿ ಹೆಸರಿನಲ್ಲಿ ಲಂಬಾಣಿ, ಭೋವಿ, ಕೊರಚ, ಕೊರಮ ಸಮುದಾಯಗಳ ಜೊತೆಗೆ ಇನ್ನೂ 63 ಜಾತಿಗಳನ್ನು ಸೇರಿಸಿ, ಶೇ.5 ಮೀಸಲಾತಿ ನೀಡಿ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿ ವಿಜಯಪುರದಲ್ಲಿ ಲಂಬಾಣಿ, ಬೋವಿ, ಕೊರಚ, ಕೊರಮ, ಸಮುದಾಯಗಳು ಹಂದಿ ಮರಿ, ತಲೆಯ ಮೇಲೆ ಚಪ್ಪಲಿ ಹೊತ್ತು ಪ್ರತಿಭಟಿಸಿದವು.
ಬೃಹತ್ ಪ್ರತಿಭಟನೆ:
ಪ್ರತಿಭಟನೆ ವೇಳೆ ಹಂದಿ ಮರಿಗಳನ್ನು ಹಾಗೂ ತಲೆಯ ಮೇಲೆ ಚಪ್ಪಲಿಗಳನ್ನು ಹೊತ್ತು ಸರ್ಕಾರದ ವಿರುದ್ಧ ಕಿಡಿಕಾರಿದರು. ಅಲ್ಲದೇ ಡಾ.ನಾಗಮೋಹನದಾಸ್ ವರದಿ ಮರುಪರಿಶೀಲಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಇದನ್ನೂ ಓದಿ: ಕೃಷಿ ಅಧಿಕಾರಿಗಳ ನೇಮಕಾತಿ ಪರೀಕ್ಷೆ ರದ್ದುಗೊಳಿಸಿದ ಕೆಪಿಎಸ್‌ಸಿ! ಎಸ್ಸಿ ಒಳಮೀಸಲಾತಿಯಿಂದಾಗಿ ಹೊಸ ಅಧಿಸೂಚನೆ!
ನಗರದ ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಮೆರವಣಿಗೆಯಲ್ಲಿ ನೂರಾರು ಪ್ರತಿಭಟನಾಕಾರರು ಭಾಗವಹಿಸಿದ್ದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ಅವರ ಭಾವಚಿತ್ರಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದರು. ಹಂದಿಗಳನ್ನು ಹಿಡಿಯುವ ಬಲೆಯಲ್ಲಿ ಡಿಸಿಎಂ ಹಾಗೂ ಸಿಎಂ ಭಾವಚಿತ್ರಗಳನ್ನು ಹಾಕಿ ಪ್ರತಿಭಟಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ