ಹೊಲದಲ್ಲಿ ಮನೆ ನಿರ್ಮಾಣಕ್ಕೆ ಭೂಪರಿವರ್ತನೆ: ಶೀಘ್ರ ಕಾಯ್ದೆ

By Govindaraj S  |  First Published Dec 22, 2022, 6:05 AM IST

ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಮತ್ತಷ್ಟು ಸರಳೀಕರಣಗೊಳಿಸಲು ಕ್ರಮ ಕೈಗೊಂಡಿದ್ದು, ಇದೇ ಅಧಿವೇಶನದಲ್ಲಿ ವಿಧೇಯಕ ಕೂಡ ತರಲು ಉದ್ದೇಶಿಸಲಾಗಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ತಿಳಿಸಿದರು. 


ವಿಧಾನ ಪರಿಷತ್‌ (ಡಿ.22): ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಮತ್ತಷ್ಟು ಸರಳೀಕರಣಗೊಳಿಸಲು ಕ್ರಮ ಕೈಗೊಂಡಿದ್ದು, ಇದೇ ಅಧಿವೇಶನದಲ್ಲಿ ವಿಧೇಯಕ ಕೂಡ ತರಲು ಉದ್ದೇಶಿಸಲಾಗಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ತಿಳಿಸಿದರು. ವಿಧಾನ ಪರಿಷತ್‌ನಲ್ಲಿ ಸದಸ್ಯ ಮಂಜುನಾಥ ಭಂಡಾರಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೃಷಿಯೇತರ ಭೂ ಪರಿವರ್ತನೆಗಾಗಿ ಆನ್‌ ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ರೈತರಿಗೆ ಅವಕಾಶ ಕಲ್ಪಿಸಲಾಗಿದೆ. ಆ ಬಗ್ಗೆ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಅವರು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಾರೆ. 

ಈ ವ್ಯವಸ್ಥೆಯನ್ನು ಇನ್ನಷ್ಟುಸರಳೀಕರಣಗೊಳಿಸಲು ಇದೇ ಅಧಿವೇಶನದಲ್ಲಿ ವಿಧೇಯಕ ಮಂಡಿಸಲಾಗುವುದು ಎಂದು ತಿಳಿಸಿದರು. ಇನ್ನು, ಕೋಳಿ ಸಾಕಾಣಿಕೆ ಮೊದಲಿಗೆ ಕೃಷಿ ಚಟುವಟಿಕೆ ವ್ಯಾಪ್ತಿಯಲ್ಲಿರಲಿಲ್ಲ. ಅದನ್ನೂ ಈಗ ಕೃಷಿಯಡಿ ಸೇರಿಸಲಾಗಿದೆ. ಇದಕ್ಕೆ ಯಾವುದೇ ಅನುಮತಿ ಬೇಕಾಗಿಲ್ಲ ಎಂದು ನುಡಿದರು. ಅರ್ಜಿದಾರರು ಭೂಪರಿವರ್ತನೆಗೆ ಅರ್ಜಿ ಸಲ್ಲಿಸಿದಾಗ ಭೂಕಂದಾಯ ಕಾಯ್ದೆಯಡಿ ಕಂದಾಯ ವಿಧಿಸಲಾದ ಅಥವಾ ಬೇಸಾಯದ ಉದ್ದೇಶಕ್ಕಾಗಿ ಹೊಂದಿದ ಯಾವುದೇ ಭೂಮಿಯನ್ನು ಜಿಲ್ಲಾಧಿಕಾರಿ ಅನುಮತಿ ಇಲ್ಲದೇ ಕಟ್ಟಡ ನಿರ್ಮಿಸುವಂತಿಲ್ಲ ಎಂದು ನುಡಿದರು.

Tap to resize

Latest Videos

ವಾರದಲ್ಲಿ ಭೂ ಪರಿವರ್ತನೆಗಾಗಿ ವಿಧಾನಸಭೆಯಲ್ಲಿ ಮಸೂದೆ ಮಂಡನೆ

ಕೃಷಿ ಭೂಮಿಯಲ್ಲಿ ಶೇ.10ರಷ್ಟು ಮೀರದ ಜಾಗದಲ್ಲಿ ತೋಟದ ಮನೆ ನಿರ್ಮಿಸಿಕೊಳ್ಳಬಹುದು. ಅದಕ್ಕಿಂತ ಹೆಚ್ಚಿನ ಜಾಗದಲ್ಲಿ ಮನೆ ನಿರ್ಮಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು. ಮನೆ ಮತ್ತು ತೋಟದ ಮನೆಯ ವ್ಯತ್ಯಾಸವನ್ನು ಇದೇ ವೇಳೆ ಕೇಳಿದ ಕೆಲ ಸದಸ್ಯರಿಗೆ, ಕಾನೂನಿನಲ್ಲಿ ಏನು ಅವಕಾಶವಿದೆಯೋ ಅದನ್ನೇ ಹೇಳಿದ್ದೇನೆ. ಹೆಚ್ಚಿನ ಪ್ರದೇಶದಲ್ಲಿ ಮನೆ ನಿರ್ಮಿಸಿಕೊಳ್ಳಬೇಕು ಎಂದರೆ ಅದಕ್ಕೆ ಕಾನೂನಿನ ತಿದ್ದುಪಡಿ ಅಗತ್ಯ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

72 ತಾಸಲ್ಲಿ ಮನೆ ಬಾಗಿಲಿಗೆ ಪಿಂಚಣಿ ತಲುಪಿಸುವ ಬದಲಾವಣೆ ತಂದಿದ್ದೇವೆ: ಸಚಿವ ಅಶೋಕ್‌

ಕೃಷಿಯೇತರ ಭೂ ಪರಿವರ್ತನೆಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ರೈತರಿಗೆ ಅವಕಾಶ ಕಲ್ಪಿಸಲಾಗಿದೆ. ಈ ವ್ಯವಸ್ಥೆಯನ್ನು ಇನ್ನಷ್ಟು ಸರಳೀಕರಣಗೊಳಿಸಲು ಇದೇ ಅಧಿವೇಶನದಲ್ಲಿ ವಿಧೇಯಕ ಮಂಡಿಸಲಾಗುವುದು. ಕೃಷಿ ಭೂಮಿಯಲ್ಲಿ ಶೇ.10ರಷ್ಟು ಮೀರದ ಜಾಗದಲ್ಲಿ ತೋಟದ ಮನೆ ನಿರ್ಮಿಸಿಕೊಳ್ಳಬಹುದು. ಅದಕ್ಕಿಂತ ಹೆಚ್ಚಿನ ಜಾಗದಲ್ಲಿ ತೋಟದ ಮನೆ ನಿರ್ಮಿಸುವಂತಿಲ್ಲ.
- ಆರ್‌.ಅಶೋಕ್‌, ಕಂದಾಯ ಸಚಿವ

click me!