Land Guarantee: ಹಾವೇರಿ ಸಮಾವೇಶ 11.1 ಲಕ್ಷ ಮಂದಿಗೆ ಭೂಗ್ಯಾರಂಟಿ, 1000 ದಿನದ ಸಂಭ್ರಮದಲ್ಲಿ 6ನೇ ಗ್ಯಾರಂಟಿ!

Kannadaprabha News, Ravi Janekal |   | Kannada Prabha
Published : Feb 15, 2026, 05:21 AM IST
CM Siddaramaiah

ಸಾರಾಂಶ

ಹಾವೇರಿಯಲ್ಲಿ ನಡೆದ ಸರ್ಕಾರದ ಸಾವಿರ ದಿನಗಳ ಸಮಾವೇಶದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ತೆರಿಗೆ ಪಾಲು, ಜಿಎಸ್‌ಟಿ ಮತ್ತು ಬರ ಪರಿಹಾರದಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು. 

ಹಾವೇರಿ (ಫೆ.15): ತೆರಿಗೆ ಪಾಲು ಹಂಚಿಕೆ, ಜಿಎಸ್‌ಟಿ ಪರಿಹಾರ ಮತ್ತು ಬರ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಸತತ ಅನ್ಯಾಯವೆಸಗುತ್ತಿದೆ. ರಾಜ್ಯಕ್ಕೆ ವಾರ್ಷಿಕ ₹12ರಿಂದ ₹15 ಸಾವಿರ ಕೋಟಿ ನಷ್ಟವಾಗುತ್ತಿದ್ದು, ನಮಗೆ ಬರುವ ನ್ಯಾಯಯುತ ಪಾಲು ಸಿಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ, 592 ಭರವಸೆಗಳ ಪೈಕಿ 243 ಭರವಸೆಗಳನ್ನು ನಾವು ಈಡೇರಿಸಿದ್ದೇವೆ. ಬಾಕಿ ಭರವಸೆಗಳನ್ನು ಉಳಿದ ಅವಧಿಯಲ್ಲಿ ಈಡೇರಿಸುತ್ತೇವೆ ಎಂದೂ ಹೇಳಿದ್ದಾರೆ.

ರಾಜ್ಯ ಸರ್ಕಾರ ಸಾವಿರ ದಿನ ಪೂರೈಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಶನಿವಾರ ಆಯೋಜಿಸಿದ್ದ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ ಉದ್ಘಾಟಿಸಿ, 9 ಜಿಲ್ಲೆಗಳ 1.10 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಅವರು ಮಾತನಾಡಿದರು.

ಜೆಜೆಎಂ (ಜಲ ಜೀವನ್ ಮಿಷನ್) ನಲ್ಲಿ ₹15 ಸಾವಿರ ಕೋಟಿ ಇನ್ನೂ ಕೊಟ್ಟಿಲ್ಲ. ಈ ಅನುದಾನ ನೀಡಿದರೆ ರಾಜ್ಯದಲ್ಲಿ ಬಹಳಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತವೆ. ಹಲವು ಬಾರಿ ನಮ್ಮ ಹಕ್ಕು ಮಂಡಿಸಿದರೂ ಕರ್ನಾಟಕಕ್ಕೆ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಮುಂದುವರಿದಿದೆ ಎಂದು ಸಿದ್ದರಾಮಯ್ಯ ವಾಕ್ಸಮರ ನಡೆಸಿದರು.

ಜಿಡಿಪಿಯಲ್ಲಿ ನಾವೇ ನಂಬರ್ ಒನ್:

ರಾಜ್ಯದ ಜಿಡಿಪಿಯನ್ನು ದೇಶದಲ್ಲೇ ನಂಬರ್ ಒನ್ ಆಗಿಸಿದ್ದು ನಮ್ಮ ಜನಪರ ಸರ್ಕಾರ. ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆಯ ವೇಗದಲ್ಲಿ ಸಾಗುತ್ತಿದೆ. ಈ ಎಲ್ಲ ಸಾಧನೆ ಮತ್ತು ದಾಖಲೆಗಳನ್ನು ಕೇಂದ್ರ ಸರ್ಕಾರದ ಅನ್ಯಾಯದ ನಡುವೆಯೂ ಮಾಡಿ ತೋರಿಸಿದ್ದೇವೆ ಎಂದರು.

ರಾಜ್ಯ ಸರ್ಕಾರ ದಿವಾಳಿಯಾಗಿದೆ, ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿಲ್ಲ, ರಾಜ್ಯದ ಖಜಾನೆ ಖಾಲಿಯಾಗಿದೆ ಎಂದು ಬಿಜೆಪಿಯವರು ಸುಳ್ಳು ಆರೋಪ ಮಾಡುತ್ತಿದ್ದಾರೆ. 5 ಗ್ಯಾರಂಟಿಗಳ ಮೂಲಕ ₹1.18 ಲಕ್ಷ ಕೋಟಿಗಳನ್ನು ನೇರವಾಗಿ ಜನರ ಖಾತೆಗೆ ಹಾಕಿದ್ದೇವೆ. ದಿವಾಳಿಯಾಗಿದ್ದರೆ ಇದನ್ನು ಮಾಡಲು ಆಗುತ್ತಿರಲಿಲ್ಲ. ಬಿಜೆಪಿಯವರು ಜನರನ್ನು ತಪ್ಪು ದಾರಿಗೆಳೆಯುವುದು ಖಂಡನೀಯ ಎಂದರು.

ಕ್ರಾಂತಿಕಾರಿ ಪ್ರಗತಿ:

ಕಂದಾಯ ಇಲಾಖೆಗೆ ಕೃಷ್ಣ ಬೈರೇಗೌಡರು ಸಚಿವರಾದ ಮೇಲೆ ಸರ್ಕಾರದಲ್ಲಿ ಕ್ರಾಂತಿಕಾರಿ ಪ್ರಗತಿ ಆಗಿದೆ. ನಮ್ಮ ಸರ್ಕಾರ ಬಂದು 2 ವರ್ಷ 9 ತಿಂಗಳಾಗಿದೆ. ನಾವು ಕೊಟ್ಟ ಭರವಸೆಗಳಲ್ಲಿ 592 ಭರವಸೆಗಳ 243 ಭರವಸೆಗಳನ್ನು ಈಡೇರಿಸಿದ್ದೇವೆ ಎಂದ ಮುಖ್ಯಮಂತ್ರಿ, ಈ ಬಗ್ಗೆ ಆರ್ಥಿಕ ತಜ್ಞರು, ದಿನಪತ್ರಿಕೆಗಳು ಮತ್ತು ವಿಶ್ವವಿದ್ಯಾಲಯಗಳ ಅಧ್ಯಯನಗಳು ವ್ಯಕ್ತಪಡಿಸಿರುವ ಸದಭಿಪ್ರಾಯಗಳನ್ನು ಓದಿ ವಿವರಿಸಿದರು.

ನಮ್ಮ ಸರ್ಕಾರ ಬಂದು 2 ವರ್ಷ 9 ತಿಂಗಳಾಯ್ತು. ನಾವು ಕೊಟ್ಟ ಭರವಸೆಗಳಲ್ಲಿ 243 ಭರವಸೆಗಳನ್ನು ಈಡೇರಿಸಿದ್ದೇವೆ. ಇನ್ನುಳಿದ ಅವಧಿಯಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು. 2023-18 ರಲ್ಲೂ ಕೊಟ್ಟ ಭರವಸೆಗಳನ್ನೆಲ್ಲಾ ಈಡೇರಿಸಿ, ಪ್ರಣಾಳಿಕೆಯಲ್ಲಿ ಇಲ್ಲದ 30 ಭರವಸೆಗಳನ್ನು ಈಡೇರಿಸಿ ‘ನುಡಿದಂತೆ ನಡೆದು’ ದಾಖಲೆ ಮಾಡಿದ್ದೇವೆ.

ನಮ್ಮ ಸರ್ಕಾರ 1,000 ದಿನಗಳನ್ನು ಯಶಸ್ವಿಯಾಗಿ ಪೂರೈಸಿದೆ. ನುಡಿದಂತೆ ನಡೆಯುವುದು ಕಾಂಗ್ರೆಸ್ ಸರ್ಕಾರ ಮಾತ್ರ. ಎಲ್ಲ ಜಾತಿ, ಧರ್ಮ, ಭಾಷೆ ಸೇರಿ ಎಲ್ಲರನ್ನೊಳಗೊಂಡ ಅಭಿವೃದ್ಧಿಯಲ್ಲಿ ನಮ್ಮ ಸರ್ಕಾರ ನಂಬಿಕೆಯಿರಿಸಿದೆ. ನಾವು ಅಸಮಾನತೆ ನೀಗಿಸುವ ಕಾಯಕದಲ್ಲಿ ತೊಡಗಿದ್ದೇವೆ ಎಂದರು.

ಸರ್ಕಾರದ ಸಾಧನಾ ಸಮಾವೇಶ ಮಾಡುತ್ತಿರುವುದು ಸಾವಿರ ದಿನಾಚರಣೆಯ ಮೈಲಿಗಲ್ಲು ಅಲ್ಲ. ರಾಜ್ಯದ ಬಡವರು, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ಮುಂದುವರಿಸಲು ಈ ಸಮಾವೇಶ ಆಯೋಜಿಸುತ್ತಿದ್ದೇವೆ. ಬಡವರು, ದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, ಮಹಿಳೆಯರು, ಕಾರ್ಮಿಕರ ಪರವಾಗಿ ನಾವು ನಿಲ್ಲುತ್ತೇವೆ. ರಾಜ್ಯದ ಹಣಕಾಸಿನ ಪರಿಸ್ಥಿತಿಯನ್ನು ಪರಿಶೀಲಿಸಿ, ಮುಂದಿನ ದಿನಗಳಲ್ಲಿ ಜಿಲ್ಲೆಯ, ರಾಜ್ಯದ ಜನರ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Irrigation as 7th Guarantee: ಕೇಂದ್ರ ಅನುಮತಿ ನೀಡಿದ್ರೆ ನೀರಾವರಿ 7ನೇ ಗ್ಯಾರಂಟಿ: ಡಿಕೆ ಶಿವಕುಮಾರ್
1,000 Days of Governance: Land Guarantee - ಹಾವೇರಿ ಸಮಾವೇಶ 11.1 ಲಕ್ಷ ಮಂದಿಗೆ ಭೂಗ್ಯಾರಂಟಿ, 1000 ದಿನದ ಸಂಭ್ರಮದಲ್ಲಿ 6ನೇ ಗ್ಯಾರಂಟಿ!