Bengaluru satish store:ತಡರಾತ್ರಿ ಭಾರೀ ಅಗ್ನಿ ಅವಘಡ: ಪೂಜಾ ಸಾಮಗ್ರಿ ಗೋದಾಮಿ ಬೆಂಕಿ!

Published : Jan 09, 2023, 10:30 AM ISTUpdated : Jan 09, 2023, 10:31 AM IST
Bengaluru satish store:ತಡರಾತ್ರಿ ಭಾರೀ ಅಗ್ನಿ ಅವಘಡ: ಪೂಜಾ ಸಾಮಗ್ರಿ ಗೋದಾಮಿ ಬೆಂಕಿ!

ಸಾರಾಂಶ

ನಗರದ ಬಸವನಗುಡಿಯ ಡಿವಿಜಿ ರಸ್ತೆಯಲ್ಲಿರುವ ಪೂಜಾ ಸಾಮಗ್ರಿ ಗೋದಾಮಿ​​ನಲ್ಲಿ ಭಾನುವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ರಾತ್ರಿ 11.30ಕ್ಕೆ ಕಟ್ಟಡದ 3ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಗೋದಾಮಿ​​ನಲ್ಲಿದ್ದ ಪೂಜಾ ಸಾಮಗ್ರಿಗಳು ಅಗ್ನಿಗಾಹುತಿಯಾಗಿವೆ.

ಬೆಂಗಳೂರು (ಜ.9): ನಗರದ ಬಸವನಗುಡಿಯ ಡಿವಿಜಿ ರಸ್ತೆಯಲ್ಲಿರುವ ಪೂಜಾ ಸಾಮಗ್ರಿ ಗೋದಾಮಿ​​ನಲ್ಲಿ ಭಾನುವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ರಾತ್ರಿ 11.30ಕ್ಕೆ ಕಟ್ಟಡದ 3ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಗೋದಾಮಿ​​ನಲ್ಲಿದ್ದ ಪೂಜಾ ಸಾಮಗ್ರಿಗಳು ಅಗ್ನಿಗಾಹುತಿಯಾಗಿವೆ.

ಪೂಜಾ ಸಾಮಾಗ್ರಿಗಳಿದ್ದ ಸತೀಶ್ ಸ್ಟೋರ್‌(Satish store) ಎಂಬ ಗೋದಾಮಿ​ಗೆ ದಿಢೀರ್​ ಬೆಂಕಿ(FIRE) ತಗುಲಿದೆ.​ ನೋಡನೋಡುತ್ತಿದ್ದಂತೆಯೇ ಬೆಂಕಿ ಮುಗಿಲೆತ್ತರಕ್ಕೆ ಚಿಮ್ಮಿದೆ.. ಗೋದಾಮಿನಲ್ಲಿ ಕರ್ಪೂರ, ಊದಿನ ಕಡ್ಡಿ , ದೀಪದ ಎಣ್ಣೆ ಇದ್ದಿದ್ದರಿಂದ ಕೆಲವೇ ಕ್ಷಣಗಳಲ್ಲಿ ಬೆಂಕಿ ಮುಗಿಲೆತ್ತರಕ್ಕೆ ಚಿಮ್ಮಿದೆ.

ಗೋದಾಮಿನಲ್ಲಿ ಬೆಂಕಿ​ ಹೊತ್ತಿ ಉರಿಯುವುದಕ್ಕೆ ಆರಂಭವಾಗುತ್ತಿದ್ದಂತೆಯೇ ಅಕ್ಕಪಕ್ಕದ ಮೆನೆಯವರೆಲ್ಲಾ ಗಾಬರಿಯಾಗಿ ಹೊರ ಬಂದಿದ್ದಾರೆ. ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿದ್ದಾರೆ.

ಕೂಡಲೇ ಮೂರು ಅಗ್ನಿ ಶಾಮಕ‌ ವಾಹನಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ವು. ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನ ನಂದಿಸೋಕೆ ಸಿಬ್ಬಂದಿ ಹರಸಾಹಸ ಪಟ್ಟರು. ಒಂದು‌ ಗಂಟೆಗಳ ಸತತ ಕಾರ್ಯಾಚರಣೆ ಮೂಲಕ ಬೆಂಕಿ ನಂದಿಸಿದರು. ಶಾರ್ಟ್​​ ಸರ್ಕ್ಯೂಟ್(Short circuit)​​ನಿಂದಾಗಿ ಗೋದಾಮಿ​​ಗೆ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ.

ನಿಲ್ಲಿಸಿದ್ದ ಕಾರಿಗೆ ರಾತ್ರಿ ಪೆಟ್ರೋಲ್‌ ಸುರಿದು ಬೆಂಕಿ ಇಟ್ಟದುರುಳರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!