ರಾಜ್ಯದಲ್ಲಿ ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಅಖಿಲ ಭಾರತ ವಕೀಲರ ಒಕ್ಕೂಟ ವತಿಯಿಂದ ಸಾವಿರಾರು ವಕೀಲರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನಾ ಮೆರವಣಿಗೆ ಮೂಲಕ ಸುವರ್ಣಸೌಧ ಮುತ್ತಿಗೆ ಹಾಕಲು ಹೊರಟಿದ್ದರು. ಈ ವೇಳೆ ಪೊಲೀಸರು ಅಡ್ಡ ಇಟ್ಟಿದ್ದ ಬ್ಯಾರಿಕೇಡ್‌ಗಳನ್ನು ಕಿತ್ತೆಸೆದು ತಳ್ಳಾಡಿದ ಘಟನೆ ನಡೆದಿದೆ.
ಬೆಳಗಾವಿ (ಡಿ.27): ರಾಜ್ಯದಲ್ಲಿ ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಅಖಿಲ ಭಾರತ ವಕೀಲರ ಒಕ್ಕೂಟ ವತಿಯಿಂದ ಸಾವಿರಾರು ವಕೀಲರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನಾ ಮೆರವಣಿಗೆ ಮೂಲಕ ಸುವರ್ಣಸೌಧ ಮುತ್ತಿಗೆ ಹಾಕಲು ಹೊರಟಿದ್ದರು. ಈ ವೇಳೆ ಪೊಲೀಸರು ಅಡ್ಡ ಇಟ್ಟಿದ್ದ ಬ್ಯಾರಿಕೇಡ್‌ಗಳನ್ನು ಕಿತ್ತೆಸೆದು ತಳ್ಳಾಡಿದ ಘಟನೆ ನಡೆದಿದೆ.
ಪ್ರತಿವರ್ಷ ರಾಜ್ಯದಲ್ಲಿ ವಕೀಲರ ಮೇಲೆ ಹಲ್ಲೆಗಳು ನಡೆಯುತ್ತಿವೆ. ಆದರೂ ವಕೀಲರ ರಕ್ಷಣೆಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ರಾಜ್ಯದಲ್ಲಿ ಕೂಡಲೇ ವಕೀಲರ ರಕ್ಷಣಾ ಕಾಯ್ದೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿ 144 ಸೆಕ್ಷನ್ ಜಾರಿಯಾಗಿದ್ದ ಸುವರ್ಣ ವಿಧಾನಸೌಧಕ್ಕೆ ನುಗ್ಗಲು ಯತ್ನಿಸಿದರು. ಈ ವೇಳೆ ಮನವಿ ಸ್ವೀಕರಿಸಲು ಬಂದ ಸಚಿವ ಗೋವಿಂದ ಕಾರಜೋಳರನ್ನು ತರಾಟೆಗೆ ತೆಗೆದುಕೊಂಡರು. ಯುವ ವಕೀಲರ ಜೊತೆಗೆ ಮಾತಿನ ಚಕಮಕಿನಡೆಯಿತು.
ನಂತರ ಕಾನೂನು ಸಚಿವ ಮಾಧುಸ್ವಾಮಿಯೇ ಆಗಮಿಸಬೇಕು ಎಂದು ಪಟ್ಟು ಹಿಡಿದರು. ಅವರು ಬರದಿದ್ದಾಗ ಅವರ ವಿರುದ್ಧ ಘೋಷಣೆ ಕೂಗಿ ಒಳಗೆ ನುಗ್ಗಲು ಯತ್ನಿಸಿದರು. ಆಗ ಪೊಲೀಸರು ಕೇವಲ 10 ಜನ ಪದಾಧಿಕಾರಿಗಳು ಒಳಗೆ ಹೋಗಲು ಅವಕಾಶ ಮಾಡಿಕೊಡುವುದಾಗಿ ಹೇಳಿದರೂ ಕೇಳಲಿಲ್ಲ. ನಂತರ, ಬ್ಯಾರಿಕೇಡ್ ದಾಟಿ ಒಳನುಗ್ಗಲು ಯತ್ನಿಸಿದಾಗ ಅವರನ್ನು ತಡೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು.
Advocates Protection Act: ವಕೀಲರ ಸುರಕ್ಷತಾ ಮಸೂದೆ ಮಂಡನೆಗೆ ಸಿದ್ದು ಆಗ್ರಹ
ಬೈರಿಕೇಡ್ ಹೊತ್ತೊಯ್ದ ವಕೀಲರು: ಬೆಳಗಾವಿಯ ಸುವರ್ಣಸೌಧ ಬಳಿ ಹಾಕಿದ ಬ್ಯಾರಿಕೇಡ್‌ಗಳನ್ನು ವಕೀಲರು ಹೊತ್ತೊಯ್ಯುತ್ತಿರುವ ದೃಶ್ಯಗಳು ಕಂಡುಬಂದವು. ವಕೀಲರು ಹಾಗೂ ಪೊಲೀಸರ ಮಧ್ಯೆ ತೀವ್ರ ತಳ್ಳಾಟ ನೂಕಾಟ ಆರಂಭವಾಗಿದೆ. ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ. ಸುವರ್ಣಸೌಧದತ್ತ ನುಗ್ಗಲು ಪ್ರತಿಭಟನಾಕಾರರ ಯತ್ನ. ಧರಣಿ ನಿರತರ ತಡೆಯಲು ಪೊಲೀಸರ ಹರಸಾಹಸಪಡುತ್ತಿದ್ದಾರೆ. ಮತತೊಂದೆಡೆ ಈ ಪ್ರತಿಭಟನಾ ನಿರತ ವಕೀಲರ ಹೈಡ್ರಾಮಾದಿಂದಾಗಿ ರಸ್ತೆ ಬದಿ ಕಟ್ಟಿದ್ದ ಬ್ಯಾರಿಕೇಡ್‌ಗಳನ್ನು ಬಿಚ್ಚಿ ಸರ್ವೀಸ್ ರಸ್ತೆಗೂ ನುಗ್ಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4ರ ಪಕ್ಕದ ಸರ್ವೀಸ್ ರಸ್ತೆಯನ್ನು ಬಂದ್ ಮಾಡಲಾಗಿದೆ. ಕಳೆದ ಒಂದು ಗಂಟೆಯಿಂದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಚಾರ ಸ್ಥಗಿತವಾಗಿದೆ.
ಮಾಧುಸ್ವಾಮಿ ವಿರುದ್ಧ ಆಕ್ರೋಶ: ರಾಜ್ಯ ಸರಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ವಕೀಲರು ಸತ್ತಾನಪ್ಪೊ, ಸತ್ತಾನೋ ಮಾಧುಸ್ವಾಮಿ ಸತ್ತಾನೋ ಎಂದು ಘೋಷಣೆ ಕೂಗಿದರು. ಡೌನ್ ಡೌನ್ ಮಾಧುಸ್ವಾಮಿ ಎಂದು ಘೋಷಣೆ ಕೂಗಿದರು. ಇನ್ನು ಮನವಿ ಸ್ವೀಕಾರಕ್ಕೆ ಬಂದ ಸಚಿವ ಗೋವಿಂದ ಕಾರಜೋಳ ಅವರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಕಾನೂನು ಸಚಿವ ಮಾಧುಸ್ವಾಮಿಯೇ ಆಗಮಿಸಬೇಕು ಎಂದು ಪಟ್ಟು ಹಿಡಿದರು. ಈ ವೇಳೆ ಒಬ್ಬರು ವಕೀಲರು ಕಾರನ್ನು ತಂದು ಸುವರ್ಣಸೌಧ ದ್ವಾರಕ್ಕೆ ಸಂಪರ್ಕ ಕಲ್ಪಿಸುವ ದಾರಿಗೆ ಕಾರನ್ನು ಅಡ್ಡಗಟ್ಟಿ ನಿಲ್ಲಿಸಿದ್ದರು.
Mysuru : ವಕೀಲರು, ಪೊಲೀಸರ ನಡುವೆ ಸಹಕಾರ ಮುಖ್ಯ
ಡಿಕೆಶಿ ಕಾರು ಅಡ್ಡಗಟ್ಟಿ ಆಕ್ರೋಶ: ರಾಷ್ಟ್ರೀಯ ಹೆದ್ದಾರಿ 4ರ ಮಾರ್ಗವಾಗಿ ವಕೀಲರ ಬೃಹತ್ ಪ್ರತಿಭಟನಾ ರ್ಯಾಲಿ ಸಾಗುತ್ತಿದ್ದ ವೇಳೆಯಲ್ಲಿ ಸುವರ್ಣಸೌಧಕ್ಕೆ ತೆರಳುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು ಕಾರು ಹೆದ್ದಾರಿಯಲ್ಲಿ ಬಂದಿದೆ. ಪ್ರತಿಭಟನಾನಿರತ ವಕೀಲರು ಡಿಕೆಶಿ ಕಾರಿಗೆ ಮುತ್ತಿಗೆ ಹಾಕಿದರು. ಬೆಳಗಾವಿ ನಗರದಿಂದ ಸುವರ್ಣಸೌಧಕ್ಕೆ ಹೊರಟ ಪಾದಯಾತ್ರೆ ಹೊರಟಿದ್ದರು. ಕಾನೂನು ಸಚಿವ ಮಾಧುವಸ್ವಾಮಿ ವಿರುದ್ದ ಅಕ್ರೋಶ ವ್ಯಕ್ತಪಡಿಸಿದ ವಕೀಲರು, ಡಿ.ಕೆ.ಶಿವಕುಮಾರ ಅವರು ಸದನದಲ್ಲಿ ಧ್ವನಿ ಎತ್ತುವಂತೆ ಆಗ್ರಹಿಸಿದರು.
ಪಾದಯಾತ್ರೆಯಿಂದ ಟ್ರಾಫಿಕ್ ಜಾಮ್: ಸಾವಿರಾರು ಸಂಖ್ಯೆಯಲ್ಲಿ ವಕೀಲರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಪಾದಯಾತ್ರೆ ಹೋಗುತ್ತಿದ್ದ ಹಿನ್ನೆಲೆಯಲ್ಲಿ ವಾಹನ ಸಂಚಾರ ಸ್ಥಗಿತ ಮಾಡಲಾಗಿತ್ತು. ಇದರಿಂದ ಭಾರಿ ಪ್ರಮಾಣದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ವಕೀಲರ ಮೇಲೆ ನಡೆಯುತ್ತಿರುವ ದೌರ್ಜನ್ಯ ಹತ್ತಿಕ್ಕಲು ಕಾಯ್ದೆ ರೂಪಿಸಬೇಕು. ಇದೇ ಚಳಿಗಾಲ ಅಧಿವೇಶನದಲ್ಲಿ ವಕೀಲರ ರಕ್ಷಣಾ ಮಸೂದೆ ಮಂಡನೆಗೆ ಮಾಡುವಂತೆ ಆಗ್ರಹಿಸಿದರು.