Karnataka High Court : ಕನ್ನಡ ಕಲಿಕೆಗೆ ಒತ್ತಾಯ ಬೇಡ

By Kannadaprabha NewsFirst Published Dec 17, 2021, 7:59 AM IST
Highlights
  •  ಕನ್ನಡ ಕಲಿಕೆಗೆ ಒತ್ತಾಯ ಬೇಡ : ಹೈಕೋರ್ಟ್
  •  ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಲಿಕೆ ಕಡ್ಡಾಯ ಮಾಡದಂತೆ ಮಧ್ಯಂತರ ಆದೇಶ
     

 ಬೆಂಗಳೂರು (ಡಿ.17):  ರಾಜ್ಯದಲ್ಲಿ (Karnataka) ಪದವಿ ಶಿಕ್ಷಣದಲ್ಲಿ (Degree) ಕನ್ನಡ ಭಾಷಾ ವಿಷಯವನ್ನು ಆಯ್ಕೆ ಮಾಡಿಕೊಳ್ಳಲು ಬಯಸದ ವಿದ್ಯಾರ್ಥಿಗಳಿಗೆ (Students) ಕನ್ನಡ ಕಲಿಕೆ (Kannada) ಕಡ್ಡಾಯ ಮಾಡದಂತೆ ಸರ್ಕಾರಕ್ಕೆ (Govt Of Karnataka) ಹೈಕೋರ್ಟ್‌ (High Court) ಗುರುವಾರ ಮಧ್ಯಂತರ ಆದೇಶ ಮಾಡಿದೆ.  ಪದವಿ ಹಂತದಲ್ಲಿ ಕನ್ನಡ ಕಡ್ಡಾಯ ಕಲಿಕೆ ಮಾಡಿರುವ ಸರ್ಕಾರದ ಆದೇಶ ಪ್ರಶ್ನಿಸಿ ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್‌, ಮಹಾವಿದ್ಯಾಲಯ ಸಂಸ್ಕೃತ ಪ್ರಾಧ್ಯಾಪಕ ಸಂಘ ಹಾಗೂ ಕೆಲವು ವಿದ್ಯಾರ್ಥಿಗಳು (Students) ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿತು.

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ  NEP) ಆಧರಿಸಿ ಪದವಿ ಶಿಕ್ಷಣದ ಸಂದರ್ಭದಲ್ಲಿ ಕನ್ನಡ ಭಾಷೆ ವಿಷಯ ಕಲಿಕೆ ಕಡ್ಡಾಯಗೊಳಿಸ ಬಹುದೇ ಎಂಬ ಪ್ರಶ್ನೆಯನ್ನು ನ್ಯಾಯಾಲಯ (Court) ಪರಿಗಣಿಸಬೇಕಿದೆ. ಸದ್ಯ ಕನ್ನಡ (Kannada) ಕಲಿಕೆ ಕಡ್ಡಾಯ ವಿಚಾರದಲ್ಲಿ ನಿಲುವು ತಿಳಿಸುವ ಪರಿಸ್ಥಿತಿಯಲ್ಲಿ ತಾನಿಲ್ಲ. ನಿಲುವು ತಿಳಿಸಲು ಕಾಲಾವಕಾಶ ನೀಡುವಂತೆ ಕೇಂದ್ರ ಸರ್ಕಾರ (Govt Of India) ಕೋರಿದೆ. ಆದ್ದರಿಂದ ಈ ಹಂತದಲ್ಲಿ ರಾಜ್ಯ ಸರ್ಕಾರವು ಕನ್ನಡ  ಕಲಿಕೆಯನ್ನು ಕಡ್ಡಾಯಗೊಳಿಸಬಾರದು. ತಮ್ಮ ಇಚ್ಛೆಯಂತೆ ಕನ್ನಡ ಆಯ್ಕೆ ಮಾಡಿಕೊಂಡಿರುವ ವಿದ್ಯಾರ್ಥಿಗಳು (Students) ಅಧ್ಯಯನ ಮುಂದುವರಿಸಬಹುದು. ಇನ್ನು ಕನ್ನಡವನ್ನು ಆಯ್ಕೆ ಮಾಡಿಕೊಳ್ಳಲು ಬಯಸದ ವಿದ್ಯಾರ್ಥಿಗಳನ್ನು ಕನ್ನಡ ಅಧ್ಯಯನ ಮಾಡುವಂತೆ ನ್ಯಾಯಾಲಯದ (Court) ಮುಂದಿನ ಆದೇಶದವರೆಗೆ ಒತ್ತಾಯ ಮಾಡಬಾರದು ಎಂದು ಸರ್ಕಾರಕ್ಕೆ ನ್ಯಾಯಪೀಠ ನಿರ್ದೇಶಿಸಿದೆ.

ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಎಂ.ಬಿ. ನರಗುಂದ್‌, ಎನ್‌ಇಪಿ (NEP) ಜಾರಿಗಾಗಿ ಪದವಿ ಶಿಕ್ಷಣದ ಸಂದರ್ಭದಲ್ಲಿ ಕನ್ನಡವನ್ನು (Kannada) ಕಡ್ಡಾಯಗೊಳಿಸಲು ಅವಕಾಶವಿದೆಯೇ ಎಂಬ ಬಗ್ಗೆ ನಿಲುವು ಸ್ಪಷ್ಟಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಡಿ.13 ರಂದು ಹೈಕೋರ್ಟ್‌ (High Court) ಸೂಚಿಸಿತ್ತು. ಎನ್‌ಇಪಿ ಜಾರಿಯನ್ನೇ ಮುಂದಿಟ್ಟುಕೊಂಡು ಯಾವುದೇ ರಾಜ್ಯದಲ್ಲಿ ಯಾವುದೇ ಭಾಷೆ ಕಡ್ಡಾಯಗೊಳಿಸುವುದು ಸಂಕೀರ್ಣ ಸಮಸ್ಯೆಗಳಿಗೆ ಕಾರಣವಾಗಲಿದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರಗಳ ಜೊತೆ ಸಮಾಲೋಚಿಸಲು ನಿರ್ಧಾರ ಕೈಗೊಳ್ಳಬೇಕಿದೆ. ರಾಜ್ಯಗಳೊಂದಿಗೆ ಸಭೆ ನಡೆಸದ ಕಾರಣ ಕೇಂದ್ರ ಸರ್ಕಾರ ತನ್ನ ನಿಲುವು ತಿಳಿಸುವ ಸ್ಥಿತಿಯಲ್ಲಿ ಇಲ್ಲ. ಈ ವಿಚಾರವಾಗಿ ಪ್ರಮಾಣ ಪತ್ರ ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ ನೀಡಬೇಕು ಎಂದು ಕೋರಿದರು.

ರಾಜ್ಯ ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ, ಪ್ರಸಕ್ತ ಸಾಲಿನಲ್ಲಿ ರಾಜ್ಯದ 4 ಲಕ್ಷ ವಿದ್ಯಾರ್ಥಿಗಳು (Students) ಪ್ರವೇಶ ಪಡೆದಿದ್ದಾರೆ. ಪ್ರವೇಶ ಪ್ರಕ್ರಿಯೆ ಬಹುತೇಕ ಮುಗಿದಿದೆ. ಪ್ರವೇಶ ಪಡೆದವರು ಸಾಕಷ್ಟು ಜನ ಕನ್ನಡ ವಿಷಯವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಅವರಿಗೆ ಕನ್ನಡ ಕಡ್ಡಾಯ ಮಾಡಿರುವುದಕ್ಕೆ ಯಾವುದೇ ಸಮಸ್ಯೆಯಿಲ್ಲ. ಅವರು 12ನೇ ತರಗತಿವರೆಗೆ ಕನ್ನಡ ಕಲಿತಿದ್ದಾರೆ. ಹೀಗಾಗಿ, ಅವರ ಅರ್ಜಿ ವಿಚಾರಣೆಗೆ ಮಾನ್ಯತೆ ಹೊಂದಿಲ್ಲ ಎಂದು ತಿಳಿಸಿದರು.

ವಿದ್ಯಾರ್ಥಿಗಳ ಪರ ವಕೀಲ ಶ್ರೀಧರ ಪ್ರಭು, ಕನ್ನಡ ಕಲಿಕೆಯಲು ಬಯಸದ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆಯುವಂತೆ ಒತ್ತಾಯ ಮಾಡಬಾರದು ಎಂಬುದಾಗಿ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿದರು.

  •  ಕನ್ನಡ ಕಲಿಕೆಗೆ ಒತ್ತಾಯ ಬೇಡ : ಹೈಕೋರ್ಟ್
  •  ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಲಿಕೆ ಕಡ್ಡಾಯ ಮಾಡದಂತೆ ಮಧ್ಯಂತರ ಆದೇಶ
  • ಪದವಿ ಹಂತದಲ್ಲಿ ಕನ್ನಡ ಕಡ್ಡಾಯ ಕಲಿಕೆ ಮಾಡಿರುವ ಸರ್ಕಾರದ ಆದೇಶ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ
  • ಪದವಿ ಹಂತದಲ್ಲಿ ಕನ್ನಡ ಕಡ್ಡಾಯ ಕಲಿಕೆ ಮಾಡಿರುವ ಸರ್ಕಾರದ ಆದೇಶ ಪ್ರಶ್ನಿಸಿ ಅರ್ಜಿ
click me!