
ಬೆಂಗಳೂರು (ಏ.09): ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ರಾಜ್ಯದ ವಿವಿಧೆಡೆ ಬಾಟಲಿ ಕುಡಿಯುವ ನೀರಿನ 255 ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಿದ್ದು, ಅದರಲ್ಲಿ 95 ಮಾದರಿಗಳು ಅಸುರಕ್ಷಿತ ಮತ್ತು 88 ಮಾದರಿಗಳು ಕಳಪೆ ಎಂದು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ವಿಶೇಷ ತಪಾಸಣಾ ಅಭಿಯಾನ ನಡೆಸಿದೆ. ಅದರಲ್ಲಿ ಬಾಟಲಿ ನೀರಿನ 255 ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೊಳಪಡಿಸಿದೆ.
ಅದರಲ್ಲಿ 72 ಮಾದರಿಗಳಷ್ಟೇ ಸುರಕ್ಷಿತ ಎಂದು ಕಂಡುಬಂದಿದ್ದು, ಉಳಿದಂತೆ 95 ಮಾದರಿಗಳು ಅಸುರಕ್ಷಿತ ಮತ್ತು 88 ಮಾದರಿಗಳು ಕಳಪೆ ಗುಣಮಟ್ಟದ್ದು ಎಂದು ವರದಿಯಾಗಿದೆ ಎಂದು ಹೇಳಿದರು. ವಿವಿಧ ಬ್ರ್ಯಾಂಡ್‌ನ ಬಾಟಲಿ ಕುಡಿಯುವ ನೀರಿನ ಪರೀಕ್ಷೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಬಾಟಲಿ ಕುಡಿಯುವ ನೀರು ತಯಾರಿಕಾ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಲ್ಲೂ ಕಳಪೆ ಎಂದು ಕಂಡುಬಂದರೆ ಸಂಸ್ಥೆ ವಿರುದ್ಧ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲಾಗುವುದು. 88 ನೀರಿನ ಬಾಟಲಿಗಳಲ್ಲಿ ರಾಸಾಯನಿಕ ಮತ್ತು ಅಪಾಯಕಾರಿ ಬ್ಯಾಕ್ಟೀರಿಯಾಗಳು ಪತ್ತೆಯಾಗಿವೆ. ಇದು ಗಂಭೀರ ವಿಷಯವಾಗಿದ್ದು, ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಮಂಗಳೂರಿನ ಬಾವುಟಗುಡ್ಡೆಯಲ್ಲಿ ಅತೀ ದೊಡ್ಡ ಧ್ವಜಸ್ತಂಭ ನಿರ್ಮಾಣ: ಸಚಿವ ದಿನೇಶ್ ಗುಂಡೂರಾವ್
41 ಔಷಧಗಳು ಕಳಪೆ: ಔಷಧ ಆಡಳಿತ ವಿಭಾಗವು ಮಾರ್ಚ್ ತಿಂಗಳಲ್ಲಿ 1,891 ಔಷಧ ಮಾದರಿಗಳನ್ನು ವಿಶ್ಲೇಷಣೆ ನಡೆಸಿದೆ. ಅದರಲ್ಲಿ 1,298 ಔಷಧಗಳು ಉತ್ತಮ ಗುಣಮಟ್ಟದ್ದೆಂದು ಸಾಬೀತಾಗಿದ್ದು, 41 ಔಷಧಗಳು ಗುಣಮಟ್ಟದ್ದಲ್ಲ ಎಂದು ಪತ್ತೆಯಾಗಿದೆ. ಹೀಗೆ ಕಳಪೆ ಔಷಧ ಪೂರೈಸುತ್ತಿರುವವರ ವಿರುದ್ಧ ನ್ಯಾಯಾಲಯದಲ್ಲಿ ಫೆಬ್ರವರಿಯಲ್ಲಿ 10 ಮತ್ತು ಮಾರ್ಚ್‌ನಲ್ಲಿ 18 ಮೊಕದ್ದಮೆ ದಾಖಲಿಸಲಾಗಿದೆ. ಒಟ್ಟಾರೆ ವಿವಿಧ ಔಷಧ ತಯಾರಿಕಾ ಸಂಸ್ಥೆಗಳ ವಿರುದ್ಧ 43 ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.
ಹಾಗೆಯೇ ಕರಿದ ಹಸಿರು ಬಟಾಣಿ, ತುಪ್ಪ, ಖೋವಾ, ಪನ್ನೀರ್, ಸಿಹಿ ತಿಂಗಳು, ಮಿಕ್ಸರ್, ಪಾನೀಯಗಳ ತಪಾಸಣೆ ನಡೆಸಲಾಗಿದೆ. ಜನರು ಸೇವಿಸುವ ಆಹಾರ ಗುಣಮಟ್ಟದಿಂದ ಕೂಡಿರುವಂತೆ ಮಾಡಲು ಎಲ್ಲ ಕ್ರಮ ಕೈಗೊಳ್ಳಲಾಗುತ್ತಿದೆ. ಹಾಗೆಯೇ, 590 ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳನ್ನು ಪರಿಶೀಲಿಸಲಾಗಿದೆ. ಅದರಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳದ ಕಾರಣಕ್ಕೆ 214 ಹೋಟೆಲ್‌ಗಳಿಗೆ ನೋಟಿಸ್ ನೀಡಲಾಗಿದೆ. ಉಳಿದಂತೆ 11 ಹೋಟೆಲ್‌ಗಳಿಗೆ 1.15 ಲಕ್ಷ ರು. ದಂಡ ವಿಧಿಸಲಾಗಿದೆ ಎಂದು ವಿವರಿಸಿದರು.
ನವಜಾತ ಶಿಶುಗಳ ತಾಯಂದಿರ ಸಾವು ತಡೆಗೆ ಕ್ರಮ: ಸಚಿವ ದಿನೇಶ್ ಗುಂಡೂರಾವ್
ಆಹಾರ ಪದಾರ್ಥ ಸಂಗ್ರಹ ವಿಶ್ಲೇಷಣೆ ಕಳಪೆ ಸುರಕ್ಷಿತ
ತುಪ್ಪ 49 06 00 06
ಖೋವಾ 43 09 03 06
ಪನ್ನೀರ್ 231 32 02 30
ಸಿಹಿತಿಂಡಿ 198 83 02 81
ಖಾರಾ ಮಿಕ್ಸರ್ 119 27 04 23
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ