
ಮೈಸೂರು (ಮೇ.24): ಹಿಜಾಬ್ ವಿಚಾರದಲ್ಲಿ ನಮಗೆ ಸ್ಪಷ್ಟತೆ ಇದೆ. ಬಿಜೆಪಿಯವರಿಗೆ ಅದು ಹಿಜಾಬ್. ನಮಗೆ ಅದು ಸಮಾನತೆ ಸಂಕೇತ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರೀಯ ವಿದ್ಯಾಲಯದಲ್ಲಿ ಯಾವ ನಿಯಮ ಇದೆ ಎಂಬುದನ್ನು ಮೊದಲು ಬಿಜೆಪಿಯವರು ನೋಡಿಕೊಂಡು ಬರಲಿ. ಕೇಂದ್ರಿಯ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಮೊದಲು ಕೇಸರಿ ಶಾಲು ಹಾಕಿಸಿ ಕಳುಹಿಸಲಿ. ನಮ್ಮ ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶ ಇಲ್ಲ. ಯಾರದರೂ ಹಾಕಿಕೊಂಡು ಬಂದರೆ ಕಾನೂನಿನ ಪ್ರಕಾರ ಕ್ರಮ ಆಗುತ್ತದೆ ಎಂದರು. ಹಿಜಾಬ್ ಬಗ್ಗೆ ನಾವು ನಮ್ಮ ಪ್ರಣಾಳಿಕೆಯಲ್ಲೇ ಹೇಳಿದ್ದೇವು. ನಮಗೆ ಜನ ಮತ ಕೊಟ್ಟಿದ್ದಾರೆ ಅದಕ್ಕಾಗಿ ನಾವು ಮತ ಕೊಟ್ಟ ಜನರ ಖುಣ ತಿರಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.
ನನಗೆ ಕನ್ನಡ ಸ್ಪಷ್ಟವಾಗಿ ಮಾತನಾಡಲು ಬರುತ್ತದೆ. ನನಗೆ ಕನ್ನಡ ಬರೆಯುವುದು ಕಷ್ಟ. ನನ್ನ ಕನ್ನಡ ಬರವಣಿಗೆ ಬಗ್ಗೆ ಪ್ರಶ್ನೆ ಮಾಡುವ ಬಿಜೆಪಿಗರು ನನಗೆ ಪಾಠ ಮಾಡಿದ ಕನ್ನಡ ಮೇಷ್ಟ್ರನ್ನ ಹುಡುಕಿ ತರಲಿ. ಆಗ ಕನ್ನಡ ಮೇಷ್ಟ್ರು ಜೊತೆ ಆ ವಿಚಾರದ ಬಗ್ಗೆ ಚರ್ಚೆ ಮಾಡುತ್ತೇನೆ. ನನಗೆ ಯಾರಾದರೂ ಉಗಿದರೆ ನಾನು ಅವರಿಗೆ ಕ್ಯಾಕರಿಸಿ ಉಗಿಯುತ್ತೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ