ಸ್ವಾತಂತ್ರ್ಯ ಹೋರಾಟದಲ್ಲಿ 6.5 ಲಕ್ಷ ಕಾಂಗ್ರೆಸ್ಸಿಗರು ಪ್ರಾಣ ತ್ಯಾಗ ಮಾಡಿದ್ದಾರೆ. ನಮ್ಮ ಪಕ್ಷ. ಪಕ್ಷದ ಸದಸ್ಯರು ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದರು ಎಂಬುದನ್ನು ಹೆಮ್ಮೆಯಿಂದ ಹೇಳಿಕೊಳ್ಳಬೇಕು. ಅದೇ ಶಾಮಪ್ರಸಾದ ಮುಖರ್ಜಿ ಅವರು ಕ್ವಿಟ್ ಇಂಡಿಯಾ ಚಳವಳಿ ಹತ್ತಿಕ್ಕುವಂತೆ ಬ್ರಿಟಿಷರಿಗೆ ಪತ್ರ ಬರೆದಿದ್ದರು. ಅಂತಹವರ ಹಿಂಬಾಲಕರು ಈಗ ನಮಗೆ ದೇಶ ಭಕ್ತಿಯ ಪಾಠ ಮಾಡುತ್ತಿರುವುದು ವಿಪರ್ಯಾಸ ಎಂದ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಬೆಂಗಳೂರು(ಆ.16): ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬ್ರಿಟಿಷರ ಜತೆ ಕೈಜೋಡಿಸಿದ್ದ ದೇಶ ದ್ರೋಹಿಗಳು ಈಗ ಅಧಿಕಾರಕ್ಕೇರಿ ನಮಗೆ ದೇಶ ಭಕ್ತಿಯ ಪಾಠ ಮಾಡುತ್ತಿದ್ದಾರೆ. ಇಂತಹ ಗೋಮುಖ ವ್ಯಾಘ್ರಗಳಿಂದ ದೇಶವನ್ನು ನಾವೆಲ್ಲರೂ ರಕ್ಷಿಸಬೇಕು ಎಂದು ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷ ತೊಡಗಿಕೊಂಡ ರೀತಿಯನ್ನು ಯುವ ಪೀಳಿಗೆಗೆ ತಿಳಿಸಬೇಕು. ಸ್ವಾತಂತ್ರ್ಯ ಹೋರಾಟದಲ್ಲಿ 6.5 ಲಕ್ಷ ಕಾಂಗ್ರೆಸ್ಸಿಗರು ಪ್ರಾಣ ತ್ಯಾಗ ಮಾಡಿದ್ದಾರೆ. ನಮ್ಮ ಪಕ್ಷ. ಪಕ್ಷದ ಸದಸ್ಯರು ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದರು ಎಂಬುದನ್ನು ಹೆಮ್ಮೆಯಿಂದ ಹೇಳಿಕೊಳ್ಳಬೇಕು. ಅದೇ ಶಾಮಪ್ರಸಾದ ಮುಖರ್ಜಿ ಅವರು ಕ್ವಿಟ್ ಇಂಡಿಯಾ ಚಳವಳಿ ಹತ್ತಿಕ್ಕುವಂತೆ ಬ್ರಿಟಿಷರಿಗೆ ಪತ್ರ ಬರೆದಿದ್ದರು. ಅಂತಹವರ ಹಿಂಬಾಲಕರು ಈಗ ನಮಗೆ ದೇಶ ಭಕ್ತಿಯ ಪಾಠ ಮಾಡುತ್ತಿರುವುದು ವಿಪರ್ಯಾಸ ಎಂದರು.
ಬೆಂಗಳೂರು ದಕ್ಷಿಣ: ನಮ್ಮ ಅಸ್ತಿತ್ವ ಉಳಿಸಿಕೊಳ್ಳುವ ಕೆಲಸ ಆಗ್ತಿದೆ, ಡಿ.ಕೆ.ಶಿವಕುಮಾರ್
ಮಹಾತ್ಮಾಗಾಂಧಿ ಅವರು ಬೆಳಗಾವಿಯಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರಿ ಸ್ವೀಕರಿಸಿದ್ದಕ್ಕೆ 100 ವರ್ಷಗಳಾಗುತ್ತಿವೆ. ಅದಕ್ಕಾಗಿ ವಿನೂತನ ರೀತಿಯ ಕಾರ್ಯಕ್ರಮ ಆಯೋಜಿಸಲು ಚಿಂತನೆ ನಡೆಸಲಾಗಿದೆ. ಸಚಿವ ಎಚ್.ಕೆ. ಪಾಟೀಲ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅದಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದು ಹೇಳಿದರು.