ಕರ್ನಾಟಕ ದೇಶದ ನಂ.1 ಸಿರಿಧಾನ್ಯ ಬೆಳೆವ ರಾಜ್ಯ ಆಗಲಿ: ಸಿಎಂ ಸಿದ್ದರಾಮಯ್ಯ

Published : Dec 16, 2023, 01:25 PM IST
ಕರ್ನಾಟಕ ದೇಶದ ನಂ.1 ಸಿರಿಧಾನ್ಯ ಬೆಳೆವ ರಾಜ್ಯ ಆಗಲಿ: ಸಿಎಂ ಸಿದ್ದರಾಮಯ್ಯ

ಸಾರಾಂಶ

ಸಿರಿಧಾನ್ಯ ಬೆಳೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ 4ನೇ ಸ್ಥಾನದಲ್ಲಿದೆ. ಕರ್ನಾಟಕ ದೇಶದಲ್ಲಿಯೇ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 

ಸುವರ್ಣಸೌಧ (ಡಿ.16): ಸಿರಿಧಾನ್ಯ ಬೆಳೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ 4ನೇ ಸ್ಥಾನದಲ್ಲಿದೆ. ಕರ್ನಾಟಕ ದೇಶದಲ್ಲಿಯೇ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸುವರ್ಣಸೌಧದಲ್ಲಿ ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ದಿನ ಮತ್ತು ಮೇಳದ ಪೂರ್ವಭಾವಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಿರಿಧಾನ್ಯಗಳ ಬಳಕೆಯ ಲಾಭಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇಂತಹ ಮೇಳಗಳು ಸಹಕಾರಿಯಾಗಿವೆ. 

ಸಾವಯವ ಕೃಷಿಯತ್ತ ಜನರು ಮುಖ ಮಾಡಿದ್ದು, ಸಾವಯವ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದೆ. ಇಂದು ವಿಶ್ವದಲ್ಲಿ ಸಿರಿಧಾನ್ಯವನ್ನು ಆಚರಿಸಲಾಗುತ್ತಿದೆ. ಜನರಲ್ಲಿ ಹಾಗೂ ರೈತರಲ್ಲಿ ಸಿರಿಧಾನ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಇವುಗಳಿಗೆ ಮಾರುಕಟ್ಟೆ ಒದಗಿಸಬೇಕು. ಕಳೆದ 20 ವರ್ಷಗಳಿಂದ ಸಾವಯವ ಕೃಷಿ ಪದ್ಧತಿಗೆ ಒತ್ತು ನೀಡಲಾಗುತ್ತಿದೆ. ಅದಕ್ಕೆ ಕೃಷಿ ಇಲಾಖೆಯವರು ಪೂರಕ ಕ್ರಮಗಳನ್ನು ತೆಗೆದುಕೊಳ್ಳಲು ತಿಳಿಸಲಾಗಿದೆ ಎಂದರು.

ಬೆಂಗಳೂರಿನಲ್ಲಿ ಸಿರಿಧಾನ್ಯ ಮೇಳ: ಸಾವಯವ ಕೃಷಿ ಪದ್ಧತಿ, ಸಿರಿಧಾನ್ಯ ಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಬೆಂಗಳೂರಿನಲ್ಲಿ ಮುಂಬರುವ ಜನವರಿ 5, 6, 7 ರಂದು ಸಿರಿಧಾನ್ಯ ಮೇಳವನ್ನು ಏರ್ಪಡಿಸಲಾಗಿದೆ ಎಂದರು. ಮೊದಲನೇ ಮೇಳ ನಡೆದಿದ್ದು, 2017ರಲ್ಲಿ. ಆಗ ಕೃಷ್ಣ ಬೈರೇಗೌಡರು ಕೃಷಿ ಸಚಿವರಾಗಿದ್ದರು. 5 ವರ್ಷ ಸತತವಾಗಿ ಏರ್ಪಾಡು ಮಾಡಲಾಗಿತ್ತು. ಕೋವಿಡ್ ಸಂದರ್ಭದಲ್ಲಿ ಮಾಡಲಾಗಿರಲಿಲ್ಲ. ಸಿರಿಧಾನ್ಯ ಬಹಳ ಬೇಡಿಕೆಯಲ್ಲಿರುವ ವಸ್ತು. ಮೊದಲು ರಾಗಿ, ಜೋಳ, ನವಣೆ, ಸಾಮೆ, ಆರ್ಕವನ್ನು ಬೆಳೆಯುತ್ತಿದ್ದೆವು . ನಂತರ ಕಡಿಮೆಯಾಗುತ್ತಾ ಬಂದಿತು.

ಸಮಸ್ಯೆ ಕೇಳದೆ ಅಧಿವೇಶನದಲ್ಲಿ ರಾಜಕಾರಣ ಮಾಡಿದ ಬಿಜೆಪಿ: ಸಚಿವ ತಿಮ್ಮಾಪುರ ಕಿಡಿ

ಮಳೆ ಕಡಿಮೆಯಾಗುವ ಪ್ರದೇಶಗಳಲ್ಲಿ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತದೆ. ಇತ್ತೀಚೆಗೆ ಸಿರಿಧಾನ್ಯಗಳು ಆರೋಗ್ಯಕ್ಕೆ ಒಳ್ಳೆಯದೆಂದು ಅರಿತಿರುವ ಜನ ಹೆಚ್ಚೆಚ್ಚು ಬಳಕೆ ಮಾಡುತ್ತಿದ್ದಾರೆ. ಇದರಲ್ಲಿ ಕಾರ್ಬೊಹೈಡ್ರೇಟ್ಸ್ ಕಡಿಮೆಯಿದ್ದು, ಲವಣಾಂಶ ಮತ್ತು ನಾರಿನಂಶ ಹೇರಳವಾಗಿದ್ದು, ಆರೋಗ್ಯಕ್ಕೆ ಉತ್ತಮವಾಗಿದೆ ಎಂದರು. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಬಾಧ್ಯಕ್ಷರ ಯು.ಟಿ.ಖಾದರ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಚೆಲುವರಾಯಸ್ವಾಮಿ, ವಿಧಾನಪರಿಷತ್ ಉಪಸಭಾಪತಿ ಪ್ರಾಣೇಶ್, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ಮಧುಗಿರಿ - ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು