
ಬಳ್ಳಾರಿ (ಏ.10): ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಇರುವ ಕೈದಿಯೊಬ್ಬ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಶೇ. 80.16 ಅಂಕ ಗಳಿಸಿದ್ದಾನೆ.
ಬೆಂಗಳೂರು ಮೂಲದ ಎಸ್. ಅಶೋಕ್ ಕುಮಾರ್ ಎಂಬಾತ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಕಳೆದ 9 ವರ್ಷಗಳಿಂದ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿದ್ದಾನೆ. ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದ ಅಶೋಕ್ ಕುಮಾರ್ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಇಂಗಿತ ವ್ಯಕ್ತಪಡಿಸಿದ್ದ.
ಇದಕ್ಕೆ ಸಹಕರಿಸಿದ ಜೈಲಿನ ಅಧಿಕಾರಿಗಳು, ದೂರ ಶಿಕ್ಷಣದ ಮೂಲಕ ಪರೀಕ್ಷೆಗೆ ನೋಂದಣಿ ಮಾಡಿಸಿದ್ದರು. ಜೈಲಿನಲ್ಲಿಯೇ ಕೈದಿಗೆ ಅಗತ್ಯ ಪಠ್ಯಪುಸ್ತಕಗಳನ್ನು ಒದಗಿಸಿ, ಅಭ್ಯಾಸಕ್ಕಾಗಿ ಪ್ರತ್ಯೇಕ ಕೊಠಡಿ ಸೌಲಭ್ಯ ಕಲ್ಪಿಸಲಾಗಿತ್ತು. ಜೈಲಿನಲ್ಲಿಯೇ ಸ್ವಯಂ ಅಭ್ಯಾಸದ ಮೂಲಕ ಅಂತಿಮವಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಶೇ. 80.16 ಫಲಿತಾಂಶ ಪಡೆದು ಗಮನ ಸೆಳೆದಿದ್ದಾರೆ.
ಮುಂದಿನ ದಿನಗಳಲ್ಲಿ ಪದವಿ ಶಿಕ್ಷಣದ ಬಗ್ಗೆ ಆಸಕ್ತಿ ತೋರಿದಲ್ಲಿ ಅದಕ್ಕೆ ಅವಕಾಶ ಮಾಡಿಕೊಲಾಗುವುದು ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ