
ಬೆಂಗಳೂರು (ಆ.02) ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾ*ರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ. ಇಂದು ಜನಪ್ರತಿನಧಿಗಳ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಮನೆ ಕೆಲಸದಾಕೆ ಮೇಲಿನ ಅತ್ಯಾ*ರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ. ಗಂಭೀರ ಪ್ರಕರಣವನ್ನು ಪರಿಗಣಿಸಿದ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಪರಿಪರಿಯಾಗಿ ಬೇಡಿಕೊಂಡರೂ ಕೋರ್ಟ್ ಶಿಕ್ಷೆ ಪ್ರಮಾಣ ಕಡಿತಗೊಳಿಸಲಿಲ್ಲ. ಕಣ್ಣೀರಿಟ್ಟ ಪ್ರಜ್ವಲ್ ರೇವಣ್ಣನನ್ನು ಇದೀಗ ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದಿದ್ದಾರೆ.
ನ್ಯಾಯಾಲಯದಲ್ಲಿ ತೀರ್ಪು ಪ್ರಕಟವಾಗುತ್ತಿದ್ದಂತೆ ಕಣ್ಣೀರಿಟ್ಟ ಪ್ರಜ್ವಲ್ ರೇವಣ್ಣ ಕಣ್ಣೀರಿಡುತ್ತಲೇ ಪರಪ್ಪನ ಅಗ್ರಹಾರ ಜೈಲಿಗೆ ತೆರಳಿದ್ದಾರೆ. ಪೊಲೀಸರು ಸೈರನ್ ವಾಹನ ಬಳಸಿ ಪ್ರಜ್ವಲ್ ರೇವಣ್ಣನ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದಿದ್ದಾರೆ.
ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ನ್ಯಾಯಲಯ ಶಿಕ್ಷೆ ಪ್ರಕಟಿಸಿದೆ. ಇದೀಗ ಪ್ರಜ್ವಲ್ ರೇವಣ್ಣ ಕಾನೂನು ಹೋರಾಟ ನಡೆಸುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ತಾಯಿ ಭವಾನಿ ರೇವಣ್ಣ ಕಾನೂನು ಮೊರೆ ಹೋಗಿದ್ದಾರೆ. ಪ್ರಜ್ವಲ್ ರೇವಣ್ಣ ಶೀಘ್ರದಲ್ಲೇ ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ. ಹೈಕೋರ್ಟ್‌ನಲ್ಲಿ ಜನಪ್ರತಿನಿಧಿಗಳ ನ್ಯಾಯಲಯದ ತೀರ್ಪು ಪ್ರಶ್ನಿಸಲಿದ್ದಾರೆ. ಶಿಕ್ಷೆ ಪ್ರಮಾಣ ಕಡಿತಗೊಳಿಸುವಂತೆ ಮನವಿ ಮಾಡುವ ಸಾಧ್ಯತೆ ಇದೆ. ಹೈಕೋರ್ಟ್ ಬಳಿಕ ಸುಪ್ರೀಂ ಕೋರ್ಟ್ ಹೋಗುವ ಅವಕಾಶವೂ ಪ್ರಜ್ವಲ್ ರೇವಣ್ಣಗೆ ಇದೆ.
ಪ್ರಜ್ವಲ್ ರೇವಣ್ಣ ದೋಷಿ ಎಂದು ನಿನ್ನೆ (ಆ.01) ನ್ಯಾಯಲಯ ತೀರ್ಪು ನೀಡಿತ್ತು. ಆದರೆ ಶಿಕ್ಷೆ ಪ್ರಮಾಣವನ್ನು ಇಂದು ಪ್ರಕಟಿಸಿದೆ. ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಸೆರೆಮನೆ ವಾಸ ಅನುಭವಿಸುವಂತ ಶಿಕ್ಷೆಯನ್ನು ಕೋರ್ಟ್ ನೀಡಿದೆ. ಈ ಪೈಕಿ ಆರಂಭಿಕ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ. ಶಿಕ್ಷೆ ಪ್ರಮಾಣ ಕಡಿಮಗೊಳಿಸಲು ಪ್ರಜ್ವಲ್ ರೇವಣ್ಣ ಮನವಿ ಮಾಡಿದ್ದರು. ಆದರೆ ಕೋರ್ಟ್ ಮನವಿ ತಿರಸ್ಕರಿಸಿ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.
ಪ್ರಜ್ವಲ್ ರೇವಣ್ಣಗೆ ತಮ್ಮ ಶಿಕ್ಷೆ ಪ್ರಮಾಣ ಕಡಿತಗೊಳಿಸುವಂತೆ ಮನವಿ ಮಾಡಿದ್ದರು. ಈ ವೇಳೆ ಕೆಲ ಕಾರಣವನ್ನೂ ನೀಡಿದ್ದರು. ತನ್ನ ಕುಟುಂಬ, ಕುಟುಂಬಧ ಘಟನೆ, ಸಮಾಜ ಸೇವೆಯನ್ನು ಪರಿಗಣಿಸಿ ಶಿಕ್ಷೆ ಪ್ರಕಟಿಸುವಂತೆ ಮನವಿ ಮಾಡಿದ್ದರು. ಇಷ್ಟೇ ಅಲ್ಲ ತಾನು ವಿದ್ಯಾಭ್ಯಾಸದಲ್ಲಿ ತಾನು ಉತ್ತಮ ಹಾಗೂ ಶಿಸ್ತಿನ ವಿದ್ಯಾರ್ಥಿಯಾಗಿದ್ದ ಅನ್ನೋ ಮಾತನ್ನು ಹೇಳಿದ್ದಾರೆ. ಆದರೆ ಯಾವುದೇ ಮನವಿಯನ್ನು ಕೋರ್ಟ್ ಪರಿಗಣಿಸಲಿಲ್ಲ.
2024ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಇದೇ ವೇಳೆ ಪ್ರಜ್ವಲ್ ರೇವಣ್ಣ ಕೆಲ ವಿಡಿಯೋಗಳು ಹಾಸನದಲ್ಲಿ ಭಾರಿ ಕೋಲಾಹಲ ಎಬ್ಬಿಸಿತ್ತು. ಈ ವಿಡಿಯೋ ಪೈಕಿ 48 ವಯಸ್ಸಿನ ಮನೆಗೆಲಸಾದಾಕೆ ಮೇಲಿನ ಲೈಂಗಿಕ ದೌರ್ಜನ್ಯ ಎಸಗಿದ ವಿಡಿಯೋ ಕೂಡ ವೈರಲ್ ಆಗಿತ್ತು. ಇತ್ತ ಇದೇ ಮನೆಗೆಲಸದಾಕೆ ನಾಪತ್ತೆಯಾದ ಪ್ರಕರಣ ಕೂಡ ದಾಖಲಾಗಿತ್ತು. ವಿಶೇಷ ತನಿಖಾ ತಂಡ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಆರಂಭಿಸಿತ್ತು. ದೂರು ದಾಖಲಾಗಿ ಅರೆಸ್ಟ್ ಪ್ರಕ್ರಿಯೆಗಳು ನಡೆಯುತ್ತಿದ್ದಂತೆ ವಿದೇಶಕ್ಕೆ ಪರಾರಿಯಾದ ಪ್ರಜ್ವಲ್, ಬಳಿಕ ಜರ್ಮನಿಯಿಂದ ವಾಪಾಸ್ಸಾಗಿದ್ದರು. ಪ್ರಜ್ವಲ್ ಅರೆಸ್ಟ್ ಮಾಡಿ ವಿಚಾರಣೆ ತೀವ್ರಗೊಂಡಿತ್ತು. ಕಳೆದ 14 ತಿಂಗಳಿನಿಂದ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ ಇದೀಗ ಜೈಲು ಖಾಯಂ ಆಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ