ವಾಲ್ಮೀಕಿ ನಿಗಮದ ಹಗರಣ: ಹೈದರಾಬಾದ್‌ಗೇ ತೆರಳಿ ಆರೋಪಿಗೆ ನಾಗೇಂದ್ರ ಆಪ್ತರಿಂದ ಜೀವಬೆದರಿಕೆ..!

Published : Jun 27, 2024, 06:42 AM IST
ವಾಲ್ಮೀಕಿ ನಿಗಮದ ಹಗರಣ: ಹೈದರಾಬಾದ್‌ಗೇ ತೆರಳಿ ಆರೋಪಿಗೆ ನಾಗೇಂದ್ರ ಆಪ್ತರಿಂದ ಜೀವಬೆದರಿಕೆ..!

ಸಾರಾಂಶ

ತನ್ನ ಹೈದರಾಬಾದ್ ಮನೆಗೇ ಬಂದು ನಾಗೇಂದ್ರ ಕಡೆಯವರು ಹಗರಣದಲ್ಲಿ ಸಚಿವರ ಹೆಸರು ಹೊರಬರದಂತೆ ನೋಡಿಕೊಳ್ಳಬೇಕೆಂದು ಬೆದರಿಸಿದ್ದರು ಎಂದು ಕೋರ್ಟ್‌ ಮುಂದೆ ಹೇಳಿಕೆ ನೀಡಿದ ಆರೋಪಿ ಸತ್ಯ ನಾರಾಯಣ ವರ್ಮಾ

ಬೆಂಗಳೂರು(ಜೂ.27): ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರು. ಅಕ್ರಮ ವರ್ಗಾವಣೆ ಹಗರಣದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಈಗ ಹೈದರಾಬಾದ್ ಮೂಲದ ಆರೋಪಿಯೊಬ್ಬನಿಗೆ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ತನ್ನ ಹೈದರಾಬಾದ್ ಮನೆಗೇ ಬಂದು ನಾಗೇಂದ್ರ ಕಡೆಯವರು ಹಗರಣದಲ್ಲಿ ಸಚಿವರ ಹೆಸರು ಹೊರಬರದಂತೆ ನೋಡಿಕೊಳ್ಳಬೇಕೆಂದು ಬೆದರಿಸಿದ್ದರು ಎಂದು ಆರೋಪಿ ಸತ್ಯ ನಾರಾಯಣ ವರ್ಮಾ ಕೋರ್ಟ್‌ ಮುಂದೆ ಹೇಳಿಕೆ ನೀಡಿದ್ದಾನೆ.

ಈ ಆರೋಪವನ್ನು 3ನೇ ಹೆಚ್ಚುವರಿ ಎಸಿಎಂಎಂ ನ್ಯಾಯಾಲಯವು, 'ಪ್ರಕರಣ ದಲ್ಲಿ 13ನೇ ಆರೋಪಿಯಾಗಿರುವ ಹೈದರಾಬಾದಿನ ರ ವರ್ಮಾ ವರ್ಮಾ ನಿಗೆ, ನಾಗೇಂದ್ರ ಅವರಿಂದ ಜೀವ ಬೆದರಿಕೆ ಇರುವ ಆರೋಪ ಕುರಿತಂತೆ ತನಿಖೆ ನಡೆಸಿ ವರದಿ ಸಲ್ಲಿಸಬೇಕು' ಎಂದು ಹಲಸೂರು ಗೇಟ್ ಠಾಣೆ ಪೊಲೀಸರಿಗೆ ನಿರ್ದೇಶನ ನೀಡಿದೆ. ಹಣ ವರ್ಗಾವಣೆಯಾಗುವುದಕ್ಕೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ ಆರೋಪ ಸತ್ಯನಾರಾಯಣ ವರ್ಮಾ ಮೇಲಿದೆ. ವರ್ಮಾ ಹೈದರಾಬಾದ್ ಬಂಜಾರ ಹಿಲ್ಸ್‌ನಲ್ಲಿ ರತ್ನಾಕರ ಬ್ಯಾಂಕಿನ ಶಾಖೆಯಲ್ಲಿ ನಕಲಿ ಕಂಪನಿಗಳ ಹೆಸರಿನಲ್ಲಿ ಖಾತೆ ಮಾಡಿಸಿದ್ದ. ಅವುಗಳಿಗೆ ಕರ್ನಾಟಕ ಮಹರ್ಷಿ ವಾಲ್ಮೀಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿನಿಗಮದಿಂದ ಅನಧಿಕೃತವಾಗಿ ಕೋಟ್ಯಂತರ ಹಣ ವರ್ಗಾವಣೆಯಾಗಿತ್ತು. ನಂತರ ಆ ಹಣವನ್ನು ವರ್ಮಾ ವಿವಿಧ ಉದ್ದೇಶಗಳಿಗೆ ಬಳಸಿ ಲಾಭ ಮಾಡಿಕೊಂಡಿದ್ದಾನೆ ಎಂಬ ಆರೋಪವಿದೆ.

ವಾಲ್ಮೀಕಿ ನಿಗಮ ಅಕ್ರಮ: ಸಿದ್ದು ರಾಜೀನಾಮೆಗೆ ಬಿಜೆಪಿ ಪಟ್ಟು

ಈ ಹಿನ್ನೆಲೆಯಲ್ಲಿ ವರ್ಮಾನಹೈದರಾಬಾದ್ ಮನೆ ಮೇಲೆ ಸಿಐಡಿ ಪೊಲೀಸರು ದಾಳಿ ನಡೆಸಿ, 8.21 ಕೋಟಿ ನಗದು ಮತ್ತು ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಜಪ್ತಿ ಮಾಡಿದ್ದರು. ನಂತರ ಹೈದರಬಾದ್‌ನಿಂದ ಆರೋಪಿಯನ್ನು ಕರೆತಂದು, ನಗರದ 3ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಆತನನ್ನು ನ್ಯಾಯಾಲಯವು ಪೊಲೀಸ್ ಕಸ್ಟಡಿಗೆ ನೀಡಿತ್ತು. ಪೊಲೀಸ್ ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಆರೋಪಿಯನ್ನು ಮತ್ತೆ
ಹಾಕಿರುವ ಆರೋಪ ಮಾಡಿದ್ದಾನೆ.

ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಆರೋಪಿ ಸತ್ಯನಾರಾಯಣ ವರ್ಮಾ, ಮಾಜಿ ಸಚಿವ ನಾಗೇಂದ್ರ ಮತ್ತವರ ಆಪ್ತರ ವಿರುದ್ಧ ಜೀವ ಬೆದರಿಕೆ ಗಂಭೀರವಾಗಿ ಪರಿಗಣಿಸಿದ ನಗರದ
'ನಾನು ಬಂಧನಕ್ಕೆ ಒಳಗಾಗುವ ಮುನ್ನ ಮಾಜಿ ಸಚಿವ ಬಿ.ನಾಗೇಂದ್ರ ಅವರ ಆಪ್ತರು ಹೈದರಾಬಾದ್‌ನ ನನ್ನ ಮನೆಗೆ ಬಂದಿದ್ದರು. ಹಗರಣದಲ್ಲಿ ಸಚಿವರ ಹೆಸರು ಹೊರಬಂದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿ ನನಗೆ ಹಾಗೂ ಕುಟುಂಬದ ಸದಸ್ಯರಿಗೆ ಜೀವ ಬೆದರಿಕೆ ಹಾಕಿದರು. ಇದಾದ ನಂತರ ಪೊಲೀಸರು ನನ್ನನ್ನು ಬಂಧಿಸಿ ಕೋರ್ಟ್ ಮುಂದೆ ಹಾಜರುಪಡಿಸಿದಾಗ, ಕೋರ್ಟ್ ಬಳಿ ನಾಗೇಂದ್ರ ಅವರ ಆಪ್ತ ಸಹಾಯಕ ನೆಕ್ಕುಂಡಿ ನಾಗರಾಜ್ ಆಪ್ತರು ನನ್ನ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಹೀಗಾಗಿ, ನನ್ನ ಕುಟುಂಬದವರಿಗೆ ರಕ್ಷಣೆ ನೀಡಬೇಕು' ಎಂದು ವರ್ಮಾ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ್ದಾನೆ.

ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶಶ್ರೇಯಾಂಶ್ ದೊಡ್ಡಮನಿ ಅವರು, ಆರೋಪಿ ವರ್ಮಾಗೆ ಮಾಜಿ ಸಚಿವರಿಂದ ಜೀವ ಬೆದರಿಕೆಯಿದೆ. ಆ ಕುರಿತು ತನಿಖೆ ನಡೆಸಿ ಮುಂದಿನ ವಿಚಾರಣೆ ವೇಳೆ ವರದಿ ಸಲ್ಲಿಸಬೇಕು ಎಂದು ಹಲಸೂರು ಗೇಟ್ ಠಾಣಾ ಪೊಲೀಸರಿಗೆ ನಿರ್ದೇಶಿಸಿದ್ದಾರೆ. ಇದೇ ವೇಳೆ ಆರೋಪಿ ಸತ್ಯನಾರಾಯಣ ವರ್ಮಾನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶರು ಆದೇಶಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!
New Hate-Speech Law: ದ್ವೇಷ ಭಾಷಣ ತಡೆಗೆ ಹೊಸ ಕಾನೂನು: ಈ ಕಾಯ್ದೆ ತರ್ತಿರೋ ಟಾರ್ಗೆಟ್ ನಾನೇ ಎಂದ ಯತ್ನಾಳ್!