ರಾಜ್ಯದಲ್ಲಿ 2 ದಿನ ಹಗುರ ಮಳೆ

Published : Jan 28, 2019, 09:57 AM ISTUpdated : Jan 28, 2019, 10:42 AM IST
ರಾಜ್ಯದಲ್ಲಿ 2 ದಿನ ಹಗುರ ಮಳೆ

ಸಾರಾಂಶ

ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಉಂಟಾಗಿದ್ದು, ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.

ಬೆಂಗಳೂರು :  ವಾತಾವರಣದಲ್ಲಿ ಗಾಳಿಯ ಒತ್ತಡ (ಟ್ರಫ್‌) ಕಡಿಮೆಯಾಗಿರುವುದರಿಂದ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಉಂಟಾಗಿದ್ದು, ಮುಂದಿನ ಎರಡು ದಿನ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮಾಹಿತಿ ನೀಡಿದೆ.

ತುಂತುರು ಮಳೆಯಾಗುವ ಸಾಧ್ಯತೆ ಇದೆ. ಭಾರೀ ಮಳೆಯಾಗುವ ಮುನ್ಸೂಚನೆಗಳಿಲ್ಲ. ಇನ್ನು ಎರಡು ದಿನ ಮೋಡ ಕವಿದ ವಾತಾವರಣ ಮುಂದುವರೆಯುವುದರಿಂದ ಚಳಿ ಪ್ರಮಾಣದಲ್ಲಿಯೂ ಇಳಿಕೆಯಾಗಲಿದೆ. 

ಕನಿಷ್ಠ ಉಷ್ಣಾಂಶದಲ್ಲಿ ಏರಿಕೆ ಕಂಡುಬರಲಿದೆ. ಜನವರಿ ಕೊನೆಯ ವಾರದಲ್ಲಿರುವುದರಿಂದ ಚಳಿ ಪ್ರಮಾಣ ಮುಂದಿನ ದಿನಗಳಲ್ಲಿ ಕಡಿಮೆ ಆಗಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವಿಜ್ಞಾನಿ ಪ್ರಭು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!
New Hate-Speech Law: ದ್ವೇಷ ಭಾಷಣ ತಡೆಗೆ ಹೊಸ ಕಾನೂನು: ಈ ಕಾಯ್ದೆ ತರ್ತಿರೋ ಟಾರ್ಗೆಟ್ ನಾನೇ ಎಂದ ಯತ್ನಾಳ್!