ಕರ್ನಾಟಕದಲ್ಲಿ ಲಾಕ್‌ಡೌನ್ ಫಿಕ್ಸ್: ಮಾರ್ಗಸೂಚಿ ಸಿದ್ಧಪಡಿಸುತ್ತಿರುವ ಅಧಿಕಾರಿಗಳು

By Suvarna NewsFirst Published May 7, 2021, 3:20 PM IST
Highlights

ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್‌ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಮಾರ್ಗಸೂಚಿ ಸಿದ್ದಪಡಿಸುತ್ತಿದ್ದಾರೆ.

ಬೆಂಗಳೂರು, (ಮೇ.07): ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಗೆ ಬ್ರೇಕ್​ ಹಾಕಲು ಕ್ಲೋಸ್​​ ಡೌನ್ ಜಾರಿ ಮಾಡಿದ್ದ ಸರ್ಕಾರ, ಕೊರೋನಾ ಸೋಂಕಿನ ಪ್ರಕರಣಗಳ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಲಾಕ್​​ಡೌನ್​ ಜಾರಿ ಮಾಡಲು ನಿರ್ಧರಿಸಿದೆ.

ಇಂದು (ಶುಕ್ರವಾರ ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದ್ದು, ಸೋಮವಾರ ಅಂದ್ರೆ ಮೇ. 10ರಿಂದ 14 ದಿನಗಳ ಕಾಲ ಲಾಕ್​​ಡೌನ್ ಜಾರಿ ಮಾಡಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಹಣ ವಸೂಲಿಗೆ ಕಡಿವಾಣ, ಸಿಟಿ ಸ್ಕ್ಯಾನಿಂಗ್‌ಗೆ ದರ ನಿಗದಿ ಮಾಡಿದ ರಾಜ್ಯ ಸರ್ಕಾರ

ಲಾಕ್​​ಡೌನ್​​ ವೇಳೆ ಬೆಳಗ್ಗೆ 6 ಗಂಟೆಯಿಂದ 10 ಗಂಟೆ ವರೆಗೂ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿದೆ. ಅಲ್ಲದೇ ಕ್ಲೋಸ್​ಡೌನ್​ ವೇಳೆ ನೀಡಲಾಗಿದ್ದ ಎಲ್ಲಾ ವಿನಾಯಿಗಳನ್ನು ರದ್ದು ಪಡಿಸಿ ಕಠಿಣ ನಿಯಮಗಳನ್ನು ಜಾರಿ ಮಾಡಲು ಸರ್ಕಾರ ಮುಂದಾಗಿದೆ.

ಈ ಲಾಕ್‌ಡೌನ್ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಂಜೆ ವೇಳೆ ಅಧಿಕೃತ ಆದೇಶ ಹೊರಡಿಸುವ ಎಲ್ಲಾ ಸಾಧ್ಯತೆಗಳಿವೆ. ಇನ್ನು ಇದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಮಾರ್ಗಸೂಚಿ ಸಿದ್ದಪಡಿಸುತ್ತಿದ್ದು, ಮಾರ್ಗಸೂಚಿ ಸಿದ್ದವಾದ ನಂತರ ಸಿಎಂ ಪತ್ರಿಕಾಗೋಷ್ಠಿ ನಡೆಸಿ ಘೋಷಣೆ ಮಾಡಲಿದ್ದಾರೆ.

click me!