ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ..!

By Girish GoudarFirst Published Jul 20, 2024, 4:47 PM IST
Highlights

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಬೆಳಗಾವಿ ಬೀದರ್, ಕಲಬುರಗಿ, ರಾಯಚೂರು ಜಿಲ್ಲೆಗಳಿಗೆ 20-22ವರೆಗೆ ಯಲ್ಲೋ ಅಲರ್ಟ್‌ ಘೋಷಿಸಿದ ಹವಾಮಾನ ಇಲಾಖೆ. 
 

ಬೆಂಗಳೂರು(ಜು.20): ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆಯಾಗಲಿದೆ ಎಮದು ರಾಜ್ಯ ಹವಾಮಾನ ‌ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಯಲ್ಲಿ ಮುಂದಿನ 4 ದಿನ ವ್ಯಾಪಕ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ. 

ರಾಜ್ಯದ ಒಳನಾಡಿನಲ್ಲಿ ಇಂದು ನಾಳೆ ವ್ಯಾಪಕ ಮಳೆ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇಂದು, ನಾಳೆ ಆರೆಂಜ್- ಜುಲೈ 22-23 ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.  ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಬೆಳಗಾವಿ ಬೀದರ್, ಕಲಬುರಗಿ, ರಾಯಚೂರು ಜಿಲ್ಲೆಗಳಿಗೆ 20-22ವರೆಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. 

Latest Videos

ಮಲೆನಾಡಿನಲ್ಲಿ ಮಳೆಯ ಅಬ್ಬರ..ಉಕ್ಕಿ ಹರಿಯುತ್ತಿದೆ ತುಂಗೆ..ಗಾಜನೂರು ಜಲಾಶಯದತ್ತ ಪ್ರವಾಸಿಗರ ದಂಡು..!

ಬೆಂಗಳೂರಿಗೆ ಸದ್ಯ ಯಾವುದೇ ಅಲರ್ಟ್ ಇಲ್ಲ. ಇಂದು ನಾಳೆ ಹಗುರದಿಂದ ಸಾಧಾರಣ ಮಳೆ ಆಗಲಿದ್ದು ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. 

click me!