ಕರ್ನಾಟಕದಲ್ಲಿ ಮುಂದಿನ 3-4 ದಿನ ಕಾಲ ಭಾರೀ ಮಳೆ

Published : May 27, 2023, 01:30 AM IST
ಕರ್ನಾಟಕದಲ್ಲಿ ಮುಂದಿನ 3-4 ದಿನ ಕಾಲ ಭಾರೀ ಮಳೆ

ಸಾರಾಂಶ

ಮೇ 30 ಹಾಗೂ 31ರಂದು ಹೆಚ್ಚಿನ ಮಳೆಯಾಗಲಿದ್ದು, ಮೇ 31ರಿಂದ ಉತ್ತರ ಒಳನಾಡು ಜಿಲ್ಲೆಗಳಲ್ಲಿಯೂ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಅತಿ ಹೆಚ್ಚು 5 ಸೆಂ.ಮೀ. ಮಳೆಯಾದ ವರದಿಯಾಗಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ, ಹಾಸನದ ಕೊಣನೂರು, ವಿಜಯ ನಗರದ ಹೊಸಪೇಟೆಯಲ್ಲಿ ತಲಾ 4 ಸೆಂ.ಮೀ. ಮಳೆಯಾದ ವರದಿಯಾಗಿದೆ.

ಬೆಂಗಳೂರು(ಮೇ.27):  ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ತಿಂಗಳಾಂತ್ಯದಿಂದ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಮೇ 30 ಹಾಗೂ 31ರಂದು ಹೆಚ್ಚಿನ ಮಳೆಯಾಗಲಿದ್ದು, ಮೇ 31ರಿಂದ ಉತ್ತರ ಒಳನಾಡು ಜಿಲ್ಲೆಗಳಲ್ಲಿಯೂ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಅತಿ ಹೆಚ್ಚು 5 ಸೆಂ.ಮೀ. ಮಳೆಯಾದ ವರದಿಯಾಗಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ, ಹಾಸನದ ಕೊಣನೂರು, ವಿಜಯ ನಗರದ ಹೊಸಪೇಟೆಯಲ್ಲಿ ತಲಾ 4 ಸೆಂ.ಮೀ. ಮಳೆಯಾದ ವರದಿಯಾಗಿದೆ.

ಮುಂಗಾರು: ಪ್ರವಾಹ ನಿಯಂತ್ರಣಕ್ಕೆ ಸನ್ನದ್ಧರಾಗಿ

ದಕ್ಷಿಣ ಕನ್ನಡದ ಸುಬ್ರಹ್ಮಣ್ಯ, ಮಂಡ್ಯದ ಮದ್ದೂರು ಹಾಗೂ ತುಮಕೂರಿನಲ್ಲಿ ತಲಾ 3 ಸೆಂ.ಮೀ. ಮಳೆಯಾದ ವರದಿಯಾಗಿದೆ. ರಾಯಚೂರಿನಲ್ಲಿ ರಾಜ್ಯದ ಅತಿ ಹೆಚ್ಚು 39.8 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
 
PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ
ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 10 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!