ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ 12 ರಿಂದ 20 ಸೆಂ.ಮೀ. ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ 'ಆರೆಂಜ್ ಅಲರ್ಟ್' ಹಾಗೂ ಚಿಕ್ಕಮಗಳೂರು, ರಾಯಚೂರು, ಬಾಗಲಕೋಟೆ ಮತ್ತು ದ. ಕನ್ನಡ ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ.
ಬೆಂಗಳೂರು(ಆ.25): ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರಿ ಹಾಗೂ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಏಳು ಜಿಲ್ಲೆಗಳಿಗೆ 'ಆರೆಂಜ್' ಹಾಗೂ ನಾಲ್ಕು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ನೀಡಲಾಗಿದೆ.
ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ 12 ರಿಂದ 20 ಸೆಂ.ಮೀ. ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ 'ಆರೆಂಜ್ ಅಲರ್ಟ್' ಹಾಗೂ ಚಿಕ್ಕಮಗಳೂರು, ರಾಯಚೂರು, ಬಾಗಲಕೋಟೆ ಮತ್ತು ದ. ಕನ್ನಡ ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ.
ಟಿಬಿ ಡ್ಯಾಂ ಭರ್ತಿಯಾಗಲು ಕೇವಲ 6 ಅಡಿ ನೀರು ಬಾಕಿ..!
ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ವರದಿ ಪ್ರಕಾರ, ಕಳೆದ 24 ಗಂಟೆಯಲ್ಲಿ ಉತ್ತರ ಕನ್ನಡದ ಕ್ಯಾಸಲ್ ರಾಕ್‌ನಲ್ಲಿ ಅತಿ ಹೆಚ್ಚು 13 ಸೆಂ.ಮೀ. ಮಳೆಯಾಗಿದೆ.