ಅಕ್ಟೋಬರ್ 17 ರಿಂದ 20ರ ವರೆಗೆ ಉತ್ತರ ಒಳನಾಡಿನಲ್ಲಿ ಹಲವು ಕಡೆ ಮಳೆಯಾಗಲಿದ್ದು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಹಾಗೂ ಅತೀ ಭಾರಿ ಮಳೆಯಾಗುವ ಸಾಧ್ಯತೆ ಇದೆ: ಹವಾಮಾನ ಇಲಾಖೆ
ಬೆಂಗಳೂರು(ಅ.16): ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಇಂದಿನಿಂದ(ಬುಧವಾರ) ಅಕ್ಟೋಬರ್ 20 ರವರೆಗೆ ಕರಾವಳಿ ಹಾಗೂ ದಕ್ಚಿಣ ಒಳನಾಡಿನಲ್ಲಿ ವ್ಯಾಪಕವಾಗಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಅಕ್ಟೋಬರ್ 17 ರಿಂದ 20ರ ವರೆಗೆ ಉತ್ತರ ಒಳನಾಡಿನಲ್ಲಿ ಹಲವು ಕಡೆ ಮಳೆಯಾಗಲಿದ್ದು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಹಾಗೂ ಅತೀ ಭಾರಿ ಮಳೆಯಾಗುವ ಸಾಧ್ಯತೆ ಇದೆ.
undefined
ಕಳ್ಳರಿಗೆ ವರದಾನವಾದ ಬೆಂಗ್ಳೂರು ಮಳೆ: ಪಾರ್ಕ್‌ನಲ್ಲಿದ್ದ ಶ್ರೀಗಂಧದ ಮರಗಳನ್ನ ರಾತ್ರೋ ರಾತ್ರಿ ಕದ್ದ ಖದೀಮರು!
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಕೊಡಗು, ಚಾಮರಾಜನಗರ, ಕಲ್ಬುರ್ಗಿ, ಯಾದಗಿರಿ, ರಾಯಚೂರು, ಬಳ್ಳಾರಿ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರವಾಳಿ ಜಿಲ್ಲೆಗಳನ್ನು ಒಳಗೊಂಡು ಉತ್ತರ ಹಾಗೂ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಅರೆ ಮಲೆನಾಡಿನ ಜಿಲ್ಲೆಗಳಿಗೆ ಅಕ್ಟೋಬರ್ 17 ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಅಕ್ಟೋಬರ್ 17 ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಸಿ.ಎಸ್.ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.