ಸೆಪ್ಟೆಂಬರ್ 1, 2, 3 ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು ಯಾದಗಿರಿ, ಗುಲ್ಬರ್ಗ, ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆ ಜೊತೆಗೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು(ಆ.30): ಬಂಗಾಳ ಸಾಗರದಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ಅವರು ಮುನ್ಸೂಚನೆ ನೀಡಿದ್ದಾರೆ.
ಪೂರ್ವ ಅರಬ್ಬೀ ಸಮುದ್ರದಲ್ಲಿ ಟರ್ಫ್ ಮುಂದುವರೆದ ಪ್ರಭಾವದಿಂದ ರಾಜ್ಯದಲ್ಲಿ ವ್ಯಾಪಕ ಮಳೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ತೀರದಲ್ಲಿ ಆಗಸ್ಟ್ 30 ರಿಂದ ಸೆಪ್ಟೆಂಬರ್ 3 ರವರೆಗೆ ಹಾಗೂ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 30, 31 ರಂದು ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ.
ಟಿಬಿ ಡ್ಯಾಂ ಭರ್ತಿಯಾಗಲು ಕೇವಲ 6 ಅಡಿ ನೀರು ಬಾಕಿ..!
ಸೆಪ್ಟೆಂಬರ್ 1, 2, 3 ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು ಯಾದಗಿರಿ, ಗುಲ್ಬರ್ಗ, ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆ ಜೊತೆಗೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.
ಹಾಸನ, ಕೊಡಗು ಜಿಲ್ಲೆಗಳಿಗೆ ಸೆಪ್ಟೆಂಬರ್ 30, 31 ರಂದು ಯಲ್ಲೋ ಅಲರ್ಟ್ ಹಾಗೂ ಬೆಂಗಳೂರಿನಲ್ಲಿ ಆಗಸ್ಟ್ 30 ರಿಂದ ಸೆಪ್ಟೆಂಬರ್ 3ರ ವರೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.