ಕರ್ನಾಟಕದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌..!

By Girish Goudar  |  First Published Jul 16, 2024, 7:36 PM IST

ಕರಾವಳಿ, ದಕ್ಷಿಣ ಕನ್ನಡ, ಉತ್ತರಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಈ 4 ಜಿಲ್ಲೆಗಳಿಗೆ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 20 ರವರೆಗೆ ಆರೆಂಜ್ ಅಲರ್ಟ್ ಅಲರ್ಟ್‌, ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡುಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಈ ನಾಲ್ಕು ಜಿಲ್ಲೆಗಳಲ್ಲಿ ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. 

ಬೆಂಗಳೂರು(ಜು.16):  ರಾಜ್ಯದಲ್ಲಿ‌ ಮುಂದಿನ 7 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 22 ರವರೆಗೆ ಮಳೆಯಾಗಲಿದೆ. ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು 8 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. 

ಕರಾವಳಿ, ದಕ್ಷಿಣ ಕನ್ನಡ, ಉತ್ತರಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಈ 4 ಜಿಲ್ಲೆಗಳಿಗೆ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 20 ರವರೆಗೆ ಆರೆಂಜ್ ಅಲರ್ಟ್ ಅಲರ್ಟ್‌, ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡುಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಈ ನಾಲ್ಕು ಜಿಲ್ಲೆಗಳಲ್ಲಿ ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. 

Latest Videos

undefined

ಭಾರೀ ಮಳೆ: ಕರ್ನಾಟಕದ ಡ್ಯಾಂಗಳಲ್ಲಿ ಕಳೆದ ಸಲಕ್ಕಿಂತ ಈ ಬಾರಿ ಶೇ.25 ಹೆಚ್ಚು ನೀರು

ಹಾಸನ, ಕಲಬುರ್ಗಿ, ಬೀದರ್, ಬೆಳಗಾವಿ, ರಾಯಚೂರು, ಯಾದಗಿರಿ, ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.  ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

click me!