ಕರ್ನಾಟಕದಲ್ಲಿ ಇನ್ನೂ ಒಂದು ವಾರ ಭಾರೀ ಮಳೆ: ಕರಾವಳಿ ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್

By Girish Goudar  |  First Published Jun 28, 2024, 9:02 AM IST

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಲವು ಜಿಲ್ಲೆಗಳಿಗೆ ರೆಡ್, ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆ ಸಾಧ್ಯತೆ ಇದ್ದು, ಈ ಹಿನ್ನೆಲೆ ಕರಾವಳಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. 

ಬೆಂಗಳೂರು(ಜೂ.28): ರಾಜ್ಯದಲ್ಲಿ ಇಂದೂ ಕೂಡ ಮಳೆರಾಯನ ಆರ್ಭಟ ಮುಂದುವರೆಯಲಿದೆ. ಹೌದು, ಮುಂದಿನ ಏಳು ದಿನಗಳ ಕಾಲ ರಾಜ್ಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಲವು ಜಿಲ್ಲೆಗಳಿಗೆ ರೆಡ್, ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆ ಸಾಧ್ಯತೆ ಇದ್ದು, ಈ ಹಿನ್ನೆಲೆ ಕರಾವಳಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. 

Tap to resize

Latest Videos

ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ ಹಲವೆಡೆ ಬಿರುಗಾಳಿ‌ ಸಹಿತ ಭಾರೀ ಮಳೆ..!

ನಾಳೆ ಕರಾವಳಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಆರೆಂಟ್ ಅಲರ್ಟ್ ಘೋಷಣೆ ಮಾಡಲಾಗಿದೆ. 
ಬೆಂಗಳೂರಲ್ಲಿ ಮುಂದಿನ 2 ದಿನಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇದ್ದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

click me!