ಇಂದು ಕರ್ನಾಟಕದ 18 ಜಿಲ್ಲೆಗಳಲ್ಲಿ ಭಾರೀ ಮಳೆ..!

Published : Jun 11, 2024, 06:40 AM IST
ಇಂದು ಕರ್ನಾಟಕದ 18 ಜಿಲ್ಲೆಗಳಲ್ಲಿ ಭಾರೀ ಮಳೆ..!

ಸಾರಾಂಶ

ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ 11 ರಿಂದ 20 ಸೆಂ.ಮೀ. ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಇನ್ನು ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ 6 ರಿಂದ 11 ಸೆಂ.ಮೀ. ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಕೊಡಲಾಗಿದೆ.  

ಬೆಂಗಳೂರು(ಜೂ.11): ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆ ಸೇರಿದಂತೆ ಒಟ್ಟು 18 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ನೀಡಿದೆ.

ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ 11 ರಿಂದ 20 ಸೆಂ.ಮೀ. ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಇನ್ನು ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ 6 ರಿಂದ 11 ಸೆಂ.ಮೀ. ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಕೊಡಲಾಗಿದೆ.

ಮಂಜಿನ ನಗರಿ ಮಡಿಕೇರಿಯ ಈ ಐದು ಬಡಾವಣೆಗಳಲ್ಲಿ ಭೂಕುಸಿತದ ಆತಂಕ!

ಎಚ್ಚರಿಕೆ: 

ಅರಬ್ಬಿ ಸಮುದ್ರದಲ್ಲಿ ಮುಂಗಾರು ಪ್ರಬಲವಾಗಿದೆ. ಸಮುದ್ರದಲ್ಲಿ  ಅಲೆ ಅಬ್ಬರ ಹೆಚ್ಚಿದೆ. ಗಾಳಿಯು ಗಂಟೆಗೆ 35ರಿಂದ 65 ಕಿ.ಮೀ.ವರೆಗೆ ಬೀಸುತ್ತಿದೆ. 3 ಜಿಲ್ಲೆಗಳ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್